ಹೈದರಾಬಾದ್: ತೆಲುಗು ಚಿತ್ರರಂಗದ ಖ್ಯಾತ ನಿರ್ದೇಶಕ ಕೆ. ವಾಸು ಅವರು ಶುಕ್ರವಾರ (ಮೇ 27) ಹೈದರಾಬಾದ್‌ನ ಕಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಕಳೆದ ಕೆಲವು ವರ್ಷಗಳಿಂದ ಅವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಕೆಲ ದಿನಗಳಿಂದ ಅವರ ಆರೋಗ್ಯ ತುಂಬಾನೇ ಹದಗೆಟ್ಟಿತ್ತು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.
ಜನವರಿ 15, 1951ರಂದು ಜನಿಸಿದರು ಅವರು ಮೆಗಾಸ್ಟಾರ್ ಚಿರಂಜೀವಿ ಅವರ ಮೊದಲ ಚಿತ್ರ ಪ್ರಣಾಮ್ ಖರೀದು ಚಿತ್ರವನ್ನುನಿರ್ದೇಶಿಸಿದ್ದರು.
ಕೇವಲ ತೆಲುಗು ಚಿತ್ರರಂಗಕ್ಕೆ ಮಾತ್ರ ಸೀಮಿತ ಆಗಿರಲಿಲ್ಲ. ಕನ್ನಡ ಚಿತ್ರರಂಗಕ್ಕೂ ಅವರ ಕೊಡುಗೆ ಅಪಾರ.ನವರಸ ನಾಯಕ ಜಗ್ಗೇಶ್ ನಟನೆಯ ಸರ್ವರ್ ಸೋಮಣ್ಣ ಸಿನಿಮಾವನ್ನು ಕೆ. ವಾಸು ನಿರ್ದೇಶನ ಮಾಡಿದ್ದರು.
Related Articles
ಮೆಗಾಸ್ಟಾರ್ ಚಿರಂಜೀವಿ ಸೇರಿ ಹಲವು ಚಿತ್ರರಂಗದ ಗಣ್ಯರು ವಾಸು ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.