ಹೈದರಾಬಾದ್: ಟಾಲಿವುಡ್ ಸಿನಿಮಾರಂಗದ ಕಾರ್ಯಕಾ ರಿ(Tollywood Executive Producer) ನಿರ್ಮಾಪಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಸ್ವಪ್ನಾ ವರ್ಮಾ(33) ತಾನಿದ್ದ ಅಪಾರ್ಟ್ ಮೆಂಟ್ ನಲ್ಲಿ ನೇಣಿಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ.
ಮೂಲತಃ ಆಂಧ್ರದ ರಾಜಮಂಡ್ರಿದವರಾದ ಸ್ವಪ್ನಾ(Swapna Verma) ಕಳೆದ ಮೂರು ವರ್ಷಗಳ ಹಿಂದೆ ಸಿನಿಮಾರಂಗದಲ್ಲಿ ಕೆಲಸ ಮಾಡುವ ಉದ್ದೇಶದಿಂದ ಹೈದರಾಬಾದ್ ಗೆ ಬಂದಿದ್ದರು. ಅವರು ಕಳೆದ ಹಲವಾರು ವರ್ಷಗಳಿಂದ ತೆಲುಗು ಚಿತ್ರರಂಗದಲ್ಲಿ ಕಾರ್ಯಕಾರಿ ನಿರ್ಮಾಪಕಿಯಾಗಿ ಕೆಲಸ ಮಾಡುತ್ತಿದ್ದರು.
ಮಾದಾಪುರದ ಕಾವೂರಿ ಹಿಲ್ಸ್‌ನಲ್ಲಿರುವ ಟೀಗಲ್ ಹೌಸ್ ಅಪಾರ್ಟ್‌ಮೆಂಟ್‌ನ ಫ್ಲಾಟ್ 101 ರಲ್ಲಿ ಒಬ್ಬಂಟಿಯಾಗಿ ವಾಸಿಸುತ್ತಿದ್ದರು. ಅದೇ ಫ್ಲಾಟ್ ನಲ್ಲಿ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ.
ಕಳೆದ ಆರು ತಿಂಗಳಿನಿಂದ ಅವರಿಗೆ ಕೆಲಸದ ಕೊರತೆಯಿದ್ದ ಕಾರಣ, ಸ್ವಪ್ನಾ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು ಎಂದು ವರದಿಯಾಗಿದೆ. ಇದೇ ಒತ್ತಡದಲ್ಲಿದ್ದ ಅವರು ಎರಡು ದಿನಗಳ ಹಿಂದೆ ತನ್ನ ಫ್ಲಾಟ್‌ನಲ್ಲಿ ನೇಣು ಬಿಗಿದುಕೊಂಡಿದ್ದಾರೆ. ಅವರ ಕೋಣೆಯಿಂದ ದುರ್ವಾಸನೆ ಬರುತ್ತಿದ್ದ ಕಾರಣ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಆಕೆಯ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಉಸ್ಮಾನಿಯಾ ಆಸ್ಪತ್ರೆಗೆ ಕಳುಹಿಸಲಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.