Advertisement
ಅಲ್ಲು ಅರ್ಜುನ್ ಅವರ ʼಪುಷ್ಪ-2ʼ (Pushpa 2: The Rule) ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಗಳಿಕೆ ಕಾಣುತ್ತಿದೆ. ರಿಲೀಸ್ ಆದ ವಾರದೊಳಗೆಯೇ ಸಿನಿಮಾ 1000 ಕೋಟಿ ಗಳಿಕೆಯತ್ತ ಮುನ್ನುಗ್ಗುತ್ತಿದೆ. ಪ್ಯಾನ್ ಇಂಡಿಯಾದಲ್ಲಿ ಹೊಸ ದಾಖಲೆಗೆ ಮುಂದಾಗುತ್ತಿರುವಾಗಲೇ ʼಪುಷ್ಪ-2ʼ ಚಿತ್ರ ತಂಡದ ಮೇಲಾಗಿರುವ ಎಫ್ಐಆರ್ ಅಲ್ಲು ಅರ್ಜುನ್ (Allu Arjun) ಅವರಿಗೆ ತಲೆ ನೋವಿನ ಸಂಗತಿಯಾಗಿ ಪರಿಣಮಿಸಿದೆ.
Related Articles
Advertisement
ಈ ಘಟನೆ ಸಂಬಂಧ ಪೊಲೀಸರು ಅಲ್ಲು ಅರ್ಜುನ್ ಸೇರಿ, ಚಿತ್ರತಂಡ ಹಾಗೂ ಥಿಯೇಟರ್ ಮಾಲೀಕ, ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಇತ್ತೀಚೆಗೆ ಸಂಧ್ಯಾ ಥಿಯೇಟರ್ ಮಾಲೀಕ ಎಂ.ಸಂದೀಪ್, ವ್ಯವಸ್ಥಾಪಕ ಎಂ. ನಾಗರಾಜು ಹಾಗೂ ಭದ್ರತಾ ಮುಖ್ಯಸ್ಥ ಗಂಧಕಂ ವಿಜಯ್ ಚಂದರ್ ಅವರನ್ನು ಬಂಧಿಸಲಾಗಿತ್ತು.
ಅಲ್ಲು ಅರ್ಜುನ್ ಅವೆ ಮೇಲೂ ಕೇಸ್ ದಾಖಲಾಗಿದ್ದು, ಇದೀಗ ಅಲ್ಲು ಅರ್ಜುನ್ ಈ ಸಂಬಂಧ ತೆಲಂಗಾಣ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.