Advertisement

ಕಾಡಾನೆ ಹಿಂಡು ದಾಳಿ: ಟೊಮೆಟೋ ಬೆಳೆ ನಾಶ

05:02 PM Feb 18, 2021 | Team Udayavani |

ಚನ್ನಪಟ್ಟಣ: ರೈತನ ಜಮೀನಿನ ಮೇಲೆ ದಾಳಿ ಮಾಡಿರುವ ಕಾಡಾನೆಗಳ ಹಿಂಡು, ಜಮೀನಿನಲ್ಲಿ ಬೆಳೆದಿದ್ದ ಟೊಮೊಟೋ ಬಾಳೆ ನಾಶಪಡಿಸಿರುವ ಘಟನೆ ತಾಲೂಕಿನ ತಗಚಗೆರೆ ಗ್ರಾಮದಲ್ಲಿ ನಡೆದಿದೆ.

Advertisement

ರೈತ ಶಿವಲಿಂಗ ಅವರ ಜಮೀನಿನ ಮೇಲೆ ದಾಳಿ ಮಾಡಿರುವ ಎಂಟು ಕಾಡಾನೆಗಳ ಹಿಂಡು, ಎರಡು ಎಕರೆಯಲ್ಲಿ ಬೆಳೆದಿದ್ದ ಟೊಮೆಟೋ ಹಾಗೂ ಒಂದು ಎಕರೆಯಲ್ಲಿ ಬೆಳೆದಿದ್ದ ಬಾಳೆಯನ್ನು ನಾಶ ಮಾಡಿದೆ. ಅಲ್ಲದೇ, ಜಮೀನಿನಲ್ಲಿದ್ದ ತೆಂಗಿನ ಗಿಡಗಳಿಗೂ ಹಾನಿ ಮಾಡಿದ್ದು, ಲಕ್ಷಾಂತರ ರೂ. ಮೌಲ್ಯದ ಬೆಳೆ ಹಾನಿಯಾಗಿದೆ.

ತಗಚಗೆರೆ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ವ್ಯಾಪಕವಾಗಿ ಕಾಡನೆಗಳು ದಾಳಿ ನಡೆಸುತ್ತಿವೆ. ಇದರಿಂದ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರೂ, ಪ್ರಯೋಜನವಾಗುತ್ತಿಲ್ಲ. ಕಾಡಾನೆ ದಾಳಿ ಬಗ್ಗೆ ಮಾಹಿತಿ ನೀಡಿದರೂ, ಅ ಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲಿಸುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಶೀಘ್ರ ಸಂಬಂಧಪಟ್ಟ ಅಧಿ ಕಾರಿಗಳು ಬೆಳೆ ನಾಶವಾಗಿರುವ ರೈತರ ಜಮೀನುಗಳಿಗೆ ಭೇಟಿ ನೀಡಬೇಕು. ಕಾಡಾನೆ ದಾಳಿಗೆ ಕಡಿವಾಣ ಹಾಕಬೇಕು. ದಾಳಿಯಿಂದ ನಾಶವಾಗಿ ‌ವ ರೈತನ ಬೆಳೆಗೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next