Advertisement

ನಾಳೆ “ದಿವ್ಯ ಕಾಶಿ, ಭವ್ಯ ಕಾಶಿ’ವಿಕ್ಷಣೆ ವ್ಯವಸ್ಥೆ

08:48 AM Dec 12, 2021 | Team Udayavani |

ಕಲಬುರಗಿ: ಶಿವನ ಹನ್ನೆರಡು ಜ್ಯೋತಿರ್ಲಿಂಗಗಳಲ್ಲಿ ಒಂದಾದ ಉತ್ತರ ಪ್ರದೇಶದ ಪುರಾತನ ಕಾಶಿ ವಿಶ್ವನಾಥ ಧಾಮದ ಅಭಿವೃದ್ಧಿ ಮತ್ತು ಸುಂದರೀಕರಣದ ಕೆಲಸಗಳು ನಡೆದಿದ್ದು, ಈ ನವೀಕೃತ ಧಾರ್ಮಿಕ ನಗರವನ್ನು ಡಿ.13ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ.

Advertisement

ಇದರ ಪ್ರಯುಕ್ತ ಬಿಜೆಪಿ ಮಟ್ಟದಲ್ಲಿ ಅಂದಿನಿಂದ ಜ.14ರ ವರೆಗೆ ದೇಶ್ಯಾದಂತ ವಿವಿಧ ಕಾರ್ಯಕ್ರಮಗಳು ನಡೆಯಲಿವೆ ಎಂದು ಪಕ್ಷದ ರಾಜ್ಯ ಸಹ ಸಂಚಾಲಕರಾದ ವಿಧಾನ ಪರಿಷತ್‌ ಮಾಜಿ ಸದಸ್ಯ ಅಮರನಾಥ ಪಾಟೀಲ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು “ದಿವ್ಯ ಕಾಶಿ, ಭವ್ಯ ಕಾಶಿ’ಯ ಕನಸನ್ನು ನನಸು ಮಾಡುತ್ತಿದ್ದಾರೆ. ಅಂದಿನ ಕಾರ್ಯಕ್ರಮದಲ್ಲಿ ಧರ್ಮಾಚಾರ್ಯರು ಸೇರಿದಂತೆ ಸಾಧು-ಸಂತರು, ಬುದ್ಧಿಜೀವಿಗಳು, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು ಮತ್ತು ಸಚಿವರು ಭಾಗವಹಿಸಲಿದ್ದಾರೆ. ಈ ಸಮಾರಂಭ ವೀಕ್ಷಿಸಲು ದೇಶದ ಎಲ್ಲೆಡೆ 51 ಸಾವಿರ ಸ್ಥಳಗಳಲ್ಲಿ ಎಲ್‌ಇಡಿ ಪರದೆಗಳನ್ನು ಸ್ಥಾಪಿಸಿ ವ್ಯವಸ್ಥೆ ಮಾಡಲಾಗುತ್ತದೆ ಎಂದರು.

ಜಿಲ್ಲೆಯಲ್ಲೂ ಪಕ್ಷದಿಂದ ದೇವಸ್ಥಾನ, ಮಠ ಹಾಗೂ ಇತರ ಧಾರ್ಮಿಕ ಸ್ಥಳದಲ್ಲಿ ಕಾರ್ಯಕ್ರಮ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗುತ್ತಿದೆ. ಕಲಬುರಗಿ ನಗರ ಪ್ರದೇಶದಲ್ಲಿ ಒಂಭತ್ತು ಕಡೆ ಹಾಗೂ ಗ್ರಾಮೀಣ ಮಟ್ಟದಲ್ಲಿ 59 ಕಡೆ ವ್ಯವಸ್ಥೆ ಇರಲಿದೆ. ಇದರಲ್ಲಿ ಸಂತರು, ಸ್ವಾಮೀಜಿಗಳು, ಧಾರ್ಮಿಕ ಮುಖಂಡರು ಹಾಗೂ ಪಕ್ಷದ ಜನ ಪ್ರತಿನಿಧಿಗಳು, ಕಾರ್ಯಕರ್ತರು ಭಾಗವಹಿಸುವರು. ಜತೆಗೆ “ದಿವ್ಯ ಕಾಶಿ, ಭವ್ಯ ಕಾಶಿ’ ಕುರಿತು ಮಾಹಿತಿಯನ್ನು ನೀಡಲಾಗುವುದು. ಧಾರ್ಮಿಕ ಮುಖಂಡರು ಮತ್ತು ಸಂತರನ್ನು ಸನ್ಮಾನಿಸಲಾಗುವುದು ಎಂದರು.

ಕಾಶಿ ವಿಶ್ವನಾಥ ಧಾಮ ಉದ್ಘಾಟನೆ ಸಂದರ್ಭದಲ್ಲಿ ಜನರು ಶಿವನನ್ನು ತಮ್ಮ ಮನೆಗಳಲ್ಲಿ ದೀಪಗಳನ್ನು ಬೆಳಗಿಸುವ ಮೂಲಕ ಪೂಜಿಸುತ್ತಾರೆ. ಈ ನಿಟ್ಟಿನಲ್ಲಿ ಪಕ್ಷದ ವತಿಯಿಂದ ದೀಪೋತ್ಸವ ಮಾಡಲು ಪ್ರಚಾರ ಮಾಡಲಾಗುತ್ತಿದೆ. ಅಲ್ಲದೇ, ಬೂತ್‌ ಮಟ್ಟದ ಸಮಿತಿ ಮೂಲಕ ಹಣತೆ ವಿತರಣೆ ಮಾಡಲಾಗಿದೆ ಎಂದರು.

Advertisement

ಡಿ.13, 14, 15ರಂದು ಧಾರ್ಮಿಕ -ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ. ಡಿ.14ರಂದು ಬಿಜೆಪಿ ಆಡಳಿತ ಇರುವ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳ ಸಮ್ಮೇಳನ ಸಂಘಟಿಸಲಾಗುವುದು. ಇದರಲ್ಲಿ ಪ್ರಧಾನಿ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ ಪಾಲ್ಗೊಳ್ಳುವರು. ಡಿ.17ರಂದು ಮೇಯರ್‌ಗಳ ಸಮ್ಮೇಳನ ಹಾಗೂ ಸ್ವಾಮಿ ವಿವೇಕಾನಂದರ ಜನ್ಮದಿನದ ವಾರ್ಷಿಕೋತ್ಸವದ ಅಂಗವಾಗಿ ಜ.12ರಂದು ಕಾಶಿಯಲ್ಲಿ ಯುವ ಸಮಾವೇಶ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಬಿಜೆಪಿ ನಗರಾಧ್ಯಕ್ಷ ಸಿದ್ಧಾಜೀ ಪಾಟೀಲ, ಜಿಲ್ಲಾ ಸಂಚಾಲಕ ಲಿಂಗರಾಜ ಬಿರಾದಾರ, ನಗರ ಸಂಚಾಲಕ ಮಹಾದೇವ ಬೆಳಮಗಿ, ಮಾಧ್ಯಮ ಪ್ರಮುಖರಾದ ಸಂತೋಷ ಹಾದಿಮನಿ, ಅರುಣ ಕುಲಕರ್ಣಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next