Advertisement
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತ ದಿನಾಚರಣೆ ಅಂಗವಾಗಿ ಬೆಲ್ಲದ ಹಬ್ಬ, ಬೆಲ್ಲದ ಮೌಲ್ಯವ ರ್ಧಿತ ಆಹಾರ ಪದಾರ್ಥಗಳ ಪ್ರದರ್ಶನ ಹಾಗೂ ಜಿಲ್ಲಾಮಟ್ಟದ ಪ್ರಶಸ್ತಿ ಪಡೆದ ರೈತರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಈ ಹಬ್ಬದಲ್ಲಿ ಬೆಲ್ಲವನ್ನು ಉಪಯೋಗಿಸಿ ಸಿರಿಧಾನ್ಯಗಳು ಹಾಗೂ ಇತರೆ ಆಹಾರ ಪದಾರ್ಥಗಳನ್ನು ಬಳಸಿ ತಯಾರಿಸಿದ ಪದಾರ್ಥಗಳ ಪ್ರದರ್ಶನ ಕೂಡ ನಡೆಸಲಾಗುತ್ತಿದೆ ಎಂದರು.
Related Articles
Advertisement
ಬವಿವ ಸಂಘದ ಎಂ.ಬಿ.ಎ ಕಾಲೇಜಿನ ಪ್ರಾಚಾರ್ಯ ಡಾ|ಆರ್.ಜಿ.ಅಳ್ಳಗಿ ಮಾತನಾಡಿ, ಎಂಬಿಎ, ವಾಣಿಜ್ಯ ಹಾಗೂ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ಬೆಲ್ಲದಿಂದ ವಿವಿಧ ಆಹಾರ ಉತ್ಪಾದನೆಗಳನ್ನು ತಯಾರಿಸಿ ಪ್ರದರ್ಶನ ಮಾಡಲಿದ್ದಾರೆ. ಇದಕ್ಕಾಗಿ 40 ತಂಡಗಳನ್ನು ರಚಿಸಲಾಗಿದ್ದು, ಆಹಾರ ಉತ್ಪಾದನೆ ಪ್ರದರ್ಶಿಸುವ ಮೂಲಕ ಎಲ್ಲರ ಗಮನ ಸೆಳೆಯಲಿದ್ದಾರೆ. ಕೋವಿಡ್-19 ಜಾಗೃತಿಯೊಂದಿಗೆ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ರೈತರಿಗೆ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಇದರಿಂದ ರೈತರಲ್ಲಿ ಆತ್ಮವಿಶ್ವಾಸ ಬೆಳೆಸಲು ಸಾಧ್ಯವಾಗುತ್ತಿದೆ ಎಂದರು.
ಜಿಲ್ಲಾಡಳಿತ, ಕೃಷಿ ಇಲಾಖೆ, ಕೃಷಿ ವಿಜ್ಞಾನ ಕೇಂದ್ರ, ಬಿವಿವ ಸಂಘದ ಎಂ.ಬಿ.ಎ ಕಾಲೇಜು, ಮುಧೋಳ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೃಷಿ ತಂತ್ರಜ್ಞರ ಸಂಸ್ಥೆ ಹಾಗೂ ಕೃಷಿಕ ಸಮಾಜದ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು. ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ| ಮೌನೇಶ್ವರಿ ಕಮ್ಮಾರ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ಎಸ್.ಬಿ.ಹಳ್ಳೊಳ್ಳಿ, ಗೀತಾ ಹಿರೇಮಠ, ಎಂ.ಬಿ.ಎ ಕಾಲೇಜಿನ ಅಶೋಕ ಉಟಗಿ, ವಿಜಯಲಕ್ಷ್ಮೀ ಪಾಟೀಲ ಉಪಸ್ಥಿತರಿದ್ದರು.
ಎಂಬಿಎ, ವಾಣಿಜ್ಯ ಹಾಗೂ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ಬೆಲ್ಲದಿಂದ ವಿವಿಧ ಆಹಾರ ಉತ್ಪಾದನೆಗಳನ್ನು ತಯಾರಿಸಿ ಪ್ರದರ್ಶನ ಮಾಡಲಿದ್ದಾರೆ. ಇದಕ್ಕಾಗಿ 40 ತಂಡಗಳನ್ನು ರಚಿಸಲಾಗಿದ್ದು, ಆಹಾರ ಉತ್ಪಾದನೆ ಪ್ರದರ್ಶಿಸುವ ಮೂಲಕ ಎಲ್ಲರ ಗಮನ ಸೆಳೆಯಲಿದ್ದಾರೆ.ಡಾ|ಆರ್.ಜಿ. ಅಳ್ಳಗಿ,
ನಿರ್ದೇಶಕ, ಬಿಮ್ಸ್ ಎಂಬಿಎ ಕಾಲೇಜ್.