Advertisement

ಕನ್ನಡ ಕಾರ್ಯಕರ್ತರ ಬಳಗದಿಂದ ನಾಳೆ ಧರಣಿ

11:15 AM Nov 11, 2017 | |

ಬೆಂಗಳೂರು: ಕರ್ನಾಟಕಕ್ಕೊಂದು ಅಧಿಕೃತ ಕನ್ನಡ ಬಾವುಟ, ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವ ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಜಾರಿ, ನಾಡಗೀತೆ ಹಾಡುವ ಕ್ರಮ, ನಿರ್ದಿಷ್ಟ ಕಾಲಾವಧಿ ಮತ್ತು ಧಾಟಿಯನ್ನು ನಿಗದಿಪಡಿಸುವುದು, ನಾಮಫ‌ಲಕಗಳಲ್ಲಿ ಕನ್ನಡ ಕಡ್ಡಾಯ ಸೇರಿದಂತೆ ಕನ್ನಡಕ್ಕೆ ಸಂಬಂಧಿಸಿದ ಹಲವಾರು ಸಮಸ್ಯೆಗಳನ್ನು ಪರಿಹರಿಸಲು ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕನ್ನಡ ಕಾರ್ಯಕರ್ತರ ಬಳಗೆ ನ.12ರ ಭಾನುವಾರ ಪುರಭವನದ ಎದುರು ಧರಣಿ ಹಮ್ಮಿಕೊಂಡಿದೆ.

Advertisement

ಕನ್ನಡದ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದ್ದು, ತಕ್ಷಣದಿಂದಲೇ ಇವುಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು. ಸರೋಜಿನಿ ಮಹಿಷಿ ಪರಿಷ್ಕೃತ ವರದಿಯನ್ನು ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಮಂಡಿಸಿ ಅದಕ್ಕೆ ಕಾಯ್ದೆ ರೂಪ ನೀಡಬೇಕು ಎಂದು ಆಗ್ರಹಿಸಿ ಈ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಕಾರ್ಯಕರ್ತರ ಬಳಗದ ಪ್ರಧಾನ ಸಂಚಾಲಕರಾದ ವ.ಚ.ಚನ್ನೇಗೌಡ ಮತ್ತು ರಾ.ನಂ.ಚಂದ್ರಶೇಖರ್‌ ತಿಳಿಸಿದ್ದಾರೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ.ಸಿದ್ದಲಿಂಗಯ್ಯ ಅಂದು ಬೆಳಗ್ಗೆ 10.30ಕ್ಕೆ ಧರಣಿಗೆ ಚಾಲನೆ ನೀಡಲಿದ್ದಾರೆ. ಚಿಂತಕ ಡಾ.ಜಿ.ರಾಮಕೃಷ್ಣ ಕನ್ನಡ ಕಾರ್ಯಕರ್ತರು, ಕನ್ನಡಾಭಿಮಾನಿಗಳು, ಕನ್ನಡ ಕಾರ್ಯಕರ್ತರ ಬಳಗದ ಸದಸ್ಯರು ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next