Advertisement

ಚಿಕ್ಕೋಡಿಯಲ್ಲಿ ನಾಳೆ ಬೃಹತ್‌ ಉಚಿತ ಆರೋಗ್ಯ ಮೇಳ

09:36 AM Mar 02, 2019 | |

ಚಿಕ್ಕೋಡಿ: ಚಿಕ್ಕೋಡಿ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಬೃಹತ್‌ ಉಚಿತ ಆರೋಗ್ಯ ಮೇಳವನ್ನು ಮಾ.3ರಂದು ನಗರದ ಆರ್‌ಡಿ ಕಾಲೇಜು ಕ್ಯಾಂಪಸ್‌ನಲ್ಲಿ ಆಯೋಜಿಸಲಾಗಿದೆ ಎಂದು ತಾಲೂಕಾ ಆರೋಗ್ಯಾಧಿಕಾರಿ ಡಾ|ವಿ.ವಿ.ಶಿಂಧೆ ಹೇಳಿದರು.

Advertisement

ಶುಕ್ರವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಬೆಳಗಾವಿ, ಅಪರ ಜಿಲ್ಲಾ ಆರೋಗ್ಯ ಮತ್ತು ಕಟುಂಬ ಕಲ್ಯಾಣ ಚಿಕ್ಕೋಡಿ, ಸುವರ್ಣ ಆರೋಗ್ಯ ಸುರಕ್ಷಾ  ಟ್ರಸ್ಟ್‌, ಭಾರತೀಯ ವೈದ್ಯಕೀಯ ಸಂಘ ಚಿಕ್ಕೋಡಿ, ನಿಪ್ಪಾಣಿ ಮತ್ತು ವಿವಿಧ ಇಲಾಖೆಗಳ ಸಹಯೋಗದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

 ಚಿಕ್ಕೋಡಿ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಎಂಟು ವಿಧಾನಸಭೆ ಕ್ಷೇತ್ರದ ಜನರಿಗೆ ಆರೋಗ್ಯ ಮೇಳ ಸದುಪಯೋಗವಾಗಬೇಕೆನ್ನುವ ಉದ್ದೇಶದಿಂದ ಆರೋಗ್ಯ ಮೇಳ ಹಮ್ಮಿಕೊಳ್ಳಲಾಗಿದ್ದು, ಉದ್ಘಾಟನಾ ಕಾರ್ಯಕ್ರದಲ್ಲಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ, ಆರೋಗ್ಯ ಸಚಿವ ಶಿವಾನಂದ ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಆಗಮಿಸಲಿದ್ದಾರೆ.

ಸಂಸದ ಪ್ರಕಾಶ ಹುಕ್ಕೇರಿ ಆರೋಗ್ಯ ಮೇಳ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಸರ್ಕಾರಿ ಮುಖ್ಯ ಸಚೇತಕ ಗಣೇಶ ಹುಕ್ಕೇರಿ ವಹಿಸಲಿದ್ದಾರೆ. ಅತಿಥಿಗಳಾಗಿ ಪರಿಷತ್‌ ವಿರೋಧ ಪಕ್ಷದ ಮುಖ್ಯಸಚೇತಕ ಮಹಾಂತೇಶ
ಕವಟಗಿಮಠ, ಶಾಸಕರಾದ ಲಕ್ಷ್ಮೀ ಹೆಬ್ಟಾಳಕರ, ಡಾ|ಅಂಜಲಿ ನಿಂಬಾಳಕರ, ಮಹಾಂತೇಶ
ಕೌಜಲಗಿ, ರಾಜ್ಯಸಭೆ ಸದಸ್ಯ ಡಾ. ಪ್ರಭಾಕರ ಕೋರೆ, ಸಂಸದ ಸುರೇಶ ಅಂಗಡಿ, ಶಶಿಕಲಾ ಜೊಲ್ಲೆ, ದುರ್ಯೋಧನ ಐಹೊಳೆ, ಪಿ.ರಾಜೀವ, ಉಮೇಶ ಕತ್ತಿ, ಮಹೇಶ ಕುಮಠಳ್ಳಿ, ಶ್ರೀಮಂತ ಪಾಟೀಲ, ಜಿ.ಪಂ.ಅಧ್ಯಕ್ಷೆ ಆಶಾ ಐಹೋಳೆ
ಸೇರಿದಂತೆ ಜಿಲ್ಲೆಯ ಶಾಸಕರು, ಪರಿಷತ್‌ ಸದಸ್ಯರು, ಜಿ.ಪಂ.ಸದಸ್ಯರು ಆಗಮಿಸಲಿದ್ದಾರೆ
ಎಂದರು.

ಆರೋಗ್ಯ ಮೇಳದಲ್ಲಿ ಸೂಪರ್‌ ಸ್ಪೆಷಾಲಿಟಿ ತಜ್ಞ ವೈದ್ಯರು ಆಗಮೀಸಲಿದ್ದು, ಹೃದಯ
ರೋಗ, ಚಿಕ್ಕ ಮಕ್ಕಳ ಶಸ್ತ್ರಚಿಕಿತ್ಸೆ, ನರರೋಗ, ಸ್ಟಿಕ್‌ ಸರ್ಜರಿ,ಆಥೋìಪೆಡಿಕ್‌, ಕ್ಯಾನ್ಸರ್‌
ನಂತರ ರೋಗದ ಸೇವೆಗಳನ್ನು ತಜ್ಞ ವೈದ್ಯರು ನೀಡಲಿದ್ದು, ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

Advertisement

ಈ ಸಂದರ್ಭದಲ್ಲಿ ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ| ಶೈಲಜಾ ತಮ್ಮಣ್ಣವರ, ಡಾ|ಸಂತೋಷ ಕೊಣ್ಣೂರ ಮುಂತಾದವರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next