ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ 53ನೇ ಘಟಿಕೋತ್ಸವ ಮಾ.25ರಂದು ಹಮ್ಮಿಕೊಳ್ಳಲಾಗಿದೆ. ಶನಿವಾರ ಸುದ್ದಿಗೋಷ್ಠಿಯಲ್ಲಿ ವಿವಿ ಕುಲಪತಿ ಡಾ.ಎಸ್.ರಾಜೇಂದ್ರ ಪ್ರಸಾದ್ ಮಾತನಾಡಿ, ಜಿಕೆವಿಕೆ ಆವರಣದ ಡಾ.ಬಾಬು ರಾಜೇಂದ್ರ ಪ್ರಸಾದ್ ಅಂತಾರಾಷ್ಟ್ರೀಯ ಸಭಾಂಗಣದಲ್ಲಿ ಆಯೋಜಿಸಲಾಗಿರುವ ಘಟಿಕೋತ್ಸವದ ಅಧ್ಯಕ್ಷತೆಯನ್ನು ರಾಜ್ಯಪಾಲ ವಿ.ಆರ್.ವಾಲಾ ವಹಿಸಲಿದ್ದಾರೆ.
ಪಂಜಾಬ್ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಬಲದೇವ್ ಸಿಂಗ್ ದಿಲ್ಲಾನ್ ಹಾಗೂ ಕೃಷಿ ಸಚಿವ ಎನ್.ಎಚ್. ಶಿವಶಂಕರ್ ರೆಡ್ಡಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
2017-18ನೇ ಶೈಕ್ಷಣಿಕ ಸಾಲಿನಲ್ಲಿ 661 ವಿದ್ಯಾರ್ಥಿಗಳು ಸ್ನಾತಕ, 309 ವಿದ್ಯಾರ್ಥಿಗಳು ಸ್ನಾತಕೋತ್ತರ ಹಾಗೂ 72 ವಿದ್ಯಾರ್ಥಿಗಳು ಡಾಕ್ಟರೇಟ್ ಪದವಿ ಪಡೆದಿದ್ದು, ಒಟ್ಟು 1042 ವಿದ್ಯಾರ್ಥಿಗಳಿಗೆ ಅಂದು ಪದವಿ ಪ್ರದಾನ ಮಾಡಲಾಗುವುದು. ಒಟ್ಟು 40 ವಿದ್ಯಾರ್ಥಿನಿಯರು 81 ಚಿನ್ನದ ಪದಕಗಳನ್ನು ಹಾಗೂ 21 ವಿದ್ಯಾರ್ಥಿಗಳು 39 ಚಿನ್ನದ ಪದಕಗಳನ್ನು ಪಡೆದಿ¨ªಾರೆ ಎಂದು ಹರ್ಷ ವ್ಯಕ್ತಪಡಿಸಿದರು.