Advertisement
ಈ ಕ್ಷೇತ್ರಗಳಿಗೆ ಜೂ.8ರಂದು ಮತದಾನ ನಡೆದಿತ್ತು. ಈಶಾನ್ಯ ಪದವೀಧರ ಕ್ಷೇತ್ರ, ನೈಋತ್ಯ ಪದವೀಧರ ಕ್ಷೇತ್ರ, ಬೆಂಗಳೂರು ಪದವೀಧರ ಕ್ಷೇತ್ರ, ನೈಋತ್ಯ ಶಿಕ್ಷಕ, ಆಗ್ನೇಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆದಿತ್ತು. 6 ಕ್ಷೇತ್ರಗಳಲ್ಲಿ 70 ಅಭ್ಯರ್ಥಿಗಳು ಕಣದಲ್ಲಿದ್ದರು. ಜೂ.12ರಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಆರಂಭವಾಗಲಿದೆ.
ಹೊರ ಬೀಳಲು ತಡರಾತ್ರಿ ಆಗುವ ಸಾಧ್ಯತೆಯಿದೆ. ಆಗ್ನೇಯ ಶಿಕ್ಷಕ ಕ್ಷೇತ್ರ ಹಾಗೂ ಬೆಂಗಳೂರು ಪದವೀಧರ ಕ್ಷೇತ್ರದ ಮತ ಎಣಿಕೆಗೆ ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ರಾಮನಾರಾಯಣ ಚೆಲ್ಲಾರಾಮ ಕಾಲೇಜಿನಲ್ಲಿ ವ್ಯವಸ್ಥೆ ಮಾಡಲಾಗಿದ್ದು, 14 ಮತ ಎಣಿಕೆ ಟೆಬಲ್‌ಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ.