ಹೂವಿನಹಡಗಲಿ: ನಾಡಿನ ಸುಪ್ರಸಿದ್ಧ ಜಾತ್ರೆಗಳಲ್ಲಿ ಒಂದಾಗಿರುವ ತಾಲೂಕಿನ ಸುಕ್ಷೇತ್ರ ಶ್ರೀಮೈಲಾರಲಿಂಗೇಶ್ವರ ಜಾತ್ರೆ ಹಾಗೂ ಕಾರ್ಣಿಕೋತ್ಸವ ಫೆ.22ರಂದು ನಡೆಯಲಿದೆ. ಜಾತ್ರೆಗೆ ನಾಡಿನ ಮೂಲೆ ಮೂಲೆಯಿಂದ ಲಕ್ಷಾಂತರ ಭಕ್ತರು ಆಗಮಿಸಲಿದ್ದು, ಜಿಲ್ಲಾಡಳಿತ ಜಾತ್ರೆಗೆ ಸಕಲ ಸಿದ್ಧತೆ ಮಾಡಿಕೊಂಡಿದೆ.
ಕಾರ್ಣಿಕೋತ್ಸವದಲ್ಲಿ ರಾಜ್ಯ ಸೇರಿದಂತೆ ಹೊರ ರಾಜ್ಯಗಳಿಂದ ಭಕ್ತರ ದಂಡೇ ಹರಿದುಬರಲಿದ್ದು, ಭಕ್ತರ ಅನುಕೂಲಕ್ಕಾಗಿ ಜಿಲ್ಲಾಡಳಿತ ಎಲ್ಲಾ ಮೂಲ ಸೌಲಭ್ಯ ಕಲ್ಪಿಸಲು ವ್ಯವಸ್ಥೆ ಕಲ್ಪಿಸಲು ಮುಂದಾಗಿದೆ.
ಸಾರಿಗೆ ಸೌಲಭ್ಯ: ಮೈಲಾರ ಕ್ಷೇತ್ರಕ್ಕೆ ಆಗಮಿಸುವ ಭಕ್ತರಿಗಾಗಿ ವಿಶೇಷವಾಗಿ ವಿವಿಧೆಡೆಯಿಂದ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ. ಹೊಸಪೇಟೆ ವಿಭಾಗದಿಂದ 60 ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಹಾವೇರಿ, ಗದಗ, ಹುಬ್ಬಳ್ಳಿ, ದಾವಣಗೆರೆ, ರಾಣೇಬೆನ್ನೂರು ಡಿಪೋಗಳಿಂದ ಸಾಕಷ್ಟು ಪ್ರಮಾಣದಲ್ಲಿ ಬಸ್ ಸೌಲಭ್ಯ ಒದಗಿಸಿದ್ದು, ಇದಕ್ಕಾಗಿ ಮೈಲಾರ ಕ್ಷೇತ್ರದ ಹೊರ ಭಾಗದಲ್ಲಿ ತಾತ್ಕಾಲಿಕ ಬಸ್ ನಿಲ್ದಾಣದ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ, ತಾತ್ಕಾಲಿಕ ಬಸ್ ನಿಲ್ದಾಣದಿಂದ ಮೈಲಾರಲಿಂಗೇಶ್ವರ ದೇವಸ್ಥಾನದವರೆಗೆ ಉಚಿತ ಬಸ್ ಸೌಲಭ್ಯವನ್ನೂ ಸಹ ಕಲ್ಪಿಸಲಾಗಿದೆ.
ಕುಡಿಯುವ ನೀರಿನ ವ್ಯವಸ್ಥೆ: ಪ್ರಮುಖವಾಗಿ ಜಾತ್ರೆಗೆ ಬರುವ ಭಕ್ತರಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಸುಮಾರು 20 ಕಡೆಗಳಲ್ಲಿ ಸ್ಟಾಂಡ್ ಪೋಸ್ಟ್ ನಿರ್ಮಿಸಿದ್ದು, ಒಂದೊಂದು ಸ್ಟಾಂಡ್ ಪೋಸ್ಟ್‌ನಲ್ಲಿ ಸುಮಾರು 10 ರಿಂದ 12 ನಳ ಅಳವಡಿಸಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ.
ಅಲ್ಲದೆ, 7 ಹ್ಯಾಂಡ್ ಪಂಪ್ ವ್ಯವಸ್ಥೆಯನ್ನೂ ಮಾಡಿದ್ದು, ಹಳೆಯ 22 ಸಿಸ್ಟನ್‌ಗಳಲ್ಲಿ ಸಣ್ಣಪುಟ್ಟ ರಿಪೇರಿ ಮಾಡಿ ಅವುಗಳನ್ನು ಬಳಸಲಾಗಿದ್ದು, 12 ಬೋರ್‌ವೆಲ್ ಕೊರೆಸಲಾಗಿದೆ. ಈ ಬೋರ್ ವೆಲ್‌ಗಳಿಂದ ಜಾತ್ರೆಯಲ್ಲಿ ಪಾಲ್ಗೊಳ್ಳುವ ಭಕ್ತರಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತದೆ. ಮಾತ್ರವಲ್ಲ, ಜಾತ್ರೆ ನಡೆಯುವ ಸ್ಥಳದಲ್ಲಿ ಎರಡು, ಗ್ರಾಪಂ ಬಳಿ ಒಂದು ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಲಾಗಿದೆ.
ತಾತ್ಕಾಲಿಕ ಆರೋಗ್ಯ ಕೇಂದ್ರ ಸ್ಥಾಪನೆ: ಜಾತ್ರೆಗೆ ಬರುವ ಭಕ್ತರ ಆರೋಗ್ಯದ ದೃಷ್ಟಿಯಿಂದ ಕೆಲವೆಡೆ ತಾತ್ಕಾಲಿಕ ಆರೋಗ್ಯ ಕೇಂದ್ರ ತೆರೆಯಲಾಗಿದೆ. ಮುಂಜಾಗ್ರತಾ ಕ್ರಮವಾಗಿ 18 ಮಂದಿ ವೈದ್ಯರು, 9 ಮಂದಿ ನುರಿತ ವೈದ್ಯರು, 7 ಮಂದಿ ಫಾರ್ಮಾಸಿಸ್ಟ್, 6 ಮಂದಿ ಲ್ಯಾಬ್ ಟೆಕ್ನಿಷಿಯನ್ಸ್, 20 ಮಂದಿ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು, 30 ಮಂದಿ ಪುರುಷ ಆರೋಗ್ಯ ಸಹಾಯಕರು ಕಾರ್ಯನಿರ್ವಹಿಸುತ್ತಿದ್ದಾರೆ. ತುರ್ತು ಸಂದರ್ಭದ ಚಿಕಿತ್ಸೆಗಾಗಿ ನಾಲ್ಕು ಆ್ಯಂಬುಲೆನ್ಸ್ ಹಾಗೂ ಎರಡು 108 ಆ್ಯಂಬುಲೆನ್ಸ್ ಸ್ಥಳದಲ್ಲಿರಲಿದೆ.
ಅಲ್ಲದೆ, ಭಕ್ತರ ಅನುಕೂಲಕ್ಕಾಗಿ ಹೊಳಲು, ಮೈಲಾರ, ಮೈಲಾರ ಪಿಎಚ್‌ಸಿ ಸೆಂಟರ್ ಹಾಗೂ ಕುರುವತ್ತಿ ಕ್ರಾಸ್ ಬಳಿ ತಾತ್ಕಾಲಿಕ ಆರೋಗ್ಯ ಕೇಂದ್ರ ತೆರೆಯಲಾಗಿದೆ ಎಂದು ತಾಲೂಕು ವೈದ್ಯಾಧಿಕಾರಿ