Advertisement
ಅಂದು ಮಧ್ಯಾಹ್ನ 1 ಗಂಟೆಗೆ slc.kar.nic.in ಹಾಗೂ //karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ.ಮೇ 8ರ ಬೆಳಗ್ಗೆ ರಾಜ್ಯದ ಎಲ್ಲಾ ಪ್ರೌಢಶಾಲೆಯಲ್ಲಿ ಫಲಿತಾಂಶದ ಪೂರ್ಣ ವಿವರ ದೊರೆಯಲಿದೆ. ಮಾ.23ರಿಂದ ಏ.6ರ ವರೆಗೆ ನಡೆದ ಪರೀಕ್ಷೆಗೆ 9ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. 2,817 ಕೇಂದ್ರದಲ್ಲಿ ನಡೆದ ಪರೀಕ್ಷೆಯಲ್ಲಿ 8.35 ಲಕ್ಷ ವಿದ್ಯಾರ್ಥಿಗಳುಹಾಜರಾಗಿದ್ದಾರೆ. ಆ ಎಲ್ಲಾ ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಯವರು ಪ್ರಕಟಿಸಲಿದ್ದಾರೆ ಎಂದು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.