ದೊಡ್ಡಬಳ್ಳಾಪುರ: ಕಸಾಪ ತಾಲೂಕು ಘಟಕದಿಂದ 11ನೇ ಕನ್ನಡ ಸಾಹಿತ್ಯ ಸಮ್ಮೇಳನ 30ರಂದು ತಾಲೂಕಿನ ಘಾಟಿ ಕ್ಷೇತ್ರದ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆಯಲಿದೆ. ಚಿತ್ರ ಸಾಹಿತಿ ಡಾ.ವಿ.ನಾಗೇಂದ್ರ ಪ್ರಸಾದ್ ಸಮ್ಮೇಳನ ಸರ್ವಾಧ್ಯಕ್ಷರು. ಬೆಳಗ್ಗೆ 10ಕ್ಕೆ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಶಾಸಕ ಟಿ.ವೆಂಕಟರಮಣಯ್ಯ ಉದ್ಘಾಟಿಸಲಿದ್ದಾ ರೆ. ದೇವನಹಳ್ಳಿ ಶಾಸಕ ನಾರಾಯಣಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ. ಚಲನಚಿತ್ರ ನಟಿ ಗಿರಿಜಾ ಲೋಕೇಶ್ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ.
ಬೆಳಿಗ್ಗೆ 7.30ಗಂಟೆಗೆ ರಾಷ್ಟ್ರಧ್ವಜವನ್ನು ತಹಶೀಲ್ದಾರ್ ಎಂ.ಕೆ.ರಮೇಶ್, ಕನ್ನಡ ಧ್ವಜ, ಘಾಟಿ ದೇವಾಲಯದ ಇಒ ಎನ್. ಕೃಷ್ಣಪ್ಪ ಹಾಗೂ ಕಸಾಪ ತಾಲೂಕು ಅಧ್ಯಕ್ಷೆ ಪ್ರಮೀಳಾ ಮಹಾದೇವ್ ಪರಿಷತ್ ಧ್ವಜಾರೋಹಣ ಮಾಡಲಿದ್ದಾರೆ.
ಬೆಳಗ್ಗೆ 8.30ಕ್ಕೆ ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಜಿಪಂ ಸದಸ್ಯಎಚ್.ಅಪ್ಪಯ್ಯಣ್ಣ ಚಾಲನೆ ನೀಡಲಿದ್ದಾರೆ. ಸಂಸದ ಬಿ.ಎನ್.ಬಚ್ಚೇಗೌಡ, ಕೇಂದ್ರದ ಮಾಜಿ ಸಚಿವ ಆರ್.ಎಲ್.ಜಾಲಪ್ಪ, ಜಿಪಂ ಅಧ್ಯಕ್ಷೆ ಜಯಮ್ಮ ಲಕ್ಷ್ಮೀನಾರಾಯಣ್, ರಾಜ್ಯಸಭೆ ಸದಸ್ಯ ಡಾ.ಎಲ್.ಹನುಮಂತಯ್ಯ, ಮಾಜಿ ಶಾಸಕವಿ.ಕೃಷ್ಣಪ್ಪ, ಜೆ.ನರಸಿಂಹಸ್ವಾಮಿ, ವಿಧಾನ ಪರಿಷತ್ ಸದಸ್ಯ ಎಸ್.ರವಿ, ಕಸಾಪ ಜಿಲ್ಲಾಧ್ಯಕ್ಷ ಚಿ.ಮಾ.ಸುಧಾಕರ್, ತಾಲೂಕು ಅಧ್ಯಕ್ಷೆ ಪ್ರಮೀಳಾ ಭಾಗವಹಿಸುವರು.
ವಿಚಾರಗೊಷ್ಠಿ: ಮಧ್ಯಾಹ್ನ 1ಕ್ಕೆ ನಡೆಯ ಲಿರುವ ಮೊದಲ ವಿಚಾರ ಗೋಷ್ಠಿಗೆ ರೈತ ಮುಖಂಡರಾದ ಸುಲೋಚನಮ್ಮ ವೆಂಕಟರೆಡ್ಡಿ ಅಧ್ಯಕ್ಷತೆ ವಹಿಸಲಿದ್ದಾರೆ. ‘ಹೋರಾಟಗಾರರ ಬದುಕು ಬವಣೆ’ ವಿಚಾರ ಮಂಡನೆಯಾಗಲಿದೆ.
2ನೇ ವಿಚಾರಗೋಷ್ಠಿಗೆ ದೇವರಾಜ ಅರಸು ಕಾಲೇಜಿನ ಪ್ರಾಂಶುಪಾಲ ಕೆ.ಆರ್.ರವಿಕಿರಣ್ ಅಧ್ಯಕ್ಷತೆ ವಹಿಸಲಿದ್ದಾರೆ. ‘ಕನ್ನಡ ಸಾಹಿತ್ಯ ಮತ್ತು ಮಹಿಳೆ’ ಕುರಿತು ವಿಚಾರ ಮಂಡನೆಯಾಗಲಿದೆ.
ಕವಿಗೋಷ್ಠಿ: ಪ್ರಾಧ್ಯಾಪಕ ಚಂದ್ರಪ್ಪ ಅಧ್ಯಕ್ಷತೆಯಲ್ಲಿ ಮಧ್ಯಾಹ್ನ 3ಕ್ಕೆ ನಡೆಯ ಲಿರುವ ಕವಿಗೋಷ್ಠಿಯಲ್ಲಿ ತಾಲೂಕಿನ ವಿವಿಧ ಕವಿಗಳು ಭಾಗವಹಿಸಲಿದ್ದಾರೆ.
ಸಮಾರೋಪ: ಸಂಜೆ 5.30ಕ್ಕೆ ನಡೆ ಯುವ ಸಾಹಿತ್ಯ ಸಮ್ಮೇಳನ ಸಮಾ ರೋಪದಲ್ಲಿ ಕೇಂದ್ರ ರೇಷ್ಮ ಮಂಡಳಿ ಅಧ್ಯಕ್ಷ ಕೆ.ಎಂ. ಹನುಮಂತರಾಯಪ್ಪ, ಕನ್ನಡಪರ ಹೋರಾಟಗಾರ ಟಿ.ಎನ್. ಪ್ರಭುದೇವ್, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಉಪಾಧ್ಯಕ್ಷ ಡಾ.ಹುಲಿಕಲ್ ನಟರಾಜ್ ಭಾಗವಹಿಸುವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.