Advertisement
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ. 15ರಂದು ಬೆಳಗ್ಗೆ 10.30ಕ್ಕೆ ಜಾತ್ರಾ ಪ್ರಾರಂಭೋತ್ಸವ ನೆರವೇರಲಿದೆ.
Related Articles
Advertisement
16ರಂದು ಮಹಾರಥೋತ್ಸವ: ಏ. 16ರಂದು ಸಂಜೆ 6.30ಕ್ಕೆ ಚಿತ್ತಾ ನಕ್ಷತ್ರದಲ್ಲಿ ಮಹಾರಥೋತ್ಸವ ನೆರವೇರಲಿದೆ. ಅದಕ್ಕೂ ಮುನ್ನ ಸಂಜೆ 4ಕ್ಕೆ ಎಸ್. ಎಸ್. ಕಳಸಾಪುರಶೆಟ್ಟರ್ ಮನೆಯಿಂದ ಮೆರವಣಿಗೆ ಮೂಲಕ ಶ್ರೀಮಠಕ್ಕೆ ಪೂಜ್ಯರು ಆಗಮಿಸುವರು. ರಾತ್ರಿ 7.30ಕ್ಕೆ ಜರುಗುವ ಕಾರ್ಯಕ್ರಮದ ಸಾನ್ನಿಧ್ಯವನ್ನು ವಿಜಯಪುರದ ಷಣ್ಮುಖಾರೂಢ ಮಠದ ಅಭಿನವ ಸಿದ್ಧಾರೂಢ ಸ್ವಾಮೀಜಿ, ಡಾ| ತೋಂಟದ ಸಿದ್ಧರಾಮ ಸ್ವಾಮಿಗಳು ವಹಿಸುವರು. ಧಾರವಾಡ-ಮುಳಗುಂದ ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ ಹಾಗೂ ಶರಣ ಸಾಹಿತಿಗಳಾದ ಆರ್.ಎಂ. ಕರಡಿಗುದ್ದಿ ಅವರನ್ನು ಸನ್ಮಾನಿಸಲಾಗುತ್ತಿದೆ.
ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹಾಗೂ ಮುಂಡರಗಿಯ ಮಾಜಿ ಶಾಸಕರಾದ ರಾಮಕೃಷ್ಣ ದೊಡ್ಡಮನಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಧಾರವಾಡದ ರತಿಕಾ ನೃತ್ಯ ಕಲಾನಿಕೇತನದ ನಾಗರತ್ನ ಹಡಗಲಿ ಅವರಿಂದ ವಚನ ನೃತ್ಯ ವೈಭವ ನಡೆಯಲಿದೆ.
ಲಘು ರಥೋತ್ಸವ: ಏ. 17ರಂದು ಸಂಜೆ 6.30ಕ್ಕೆ ಲಘುರಥೋತ್ಸವ ಜರುಗಲಿದ್ದು, ಸಂಜೆ 4ಕ್ಕೆ ಬಸವೇಶ್ವರ ನಗರದ ಕುಬಸದ ಅವರ ಮನೆಯಿಂದ ಮೆರವಣಿಗೆ ಮೂಲಕ ಡಾ| ತೋಂಟದ ಸಿದ್ಧರಾಮ ಸ್ವಾಮೀಜಿ ಶ್ರೀಮಠಕ್ಕೆ ಆಗಮಿಸುವರು. ಲಘು ರಥೋತ್ಸವದ ಬಳಿಕ 7.30ಕ್ಕೆ ಮಹಿಳಾಗೋಷ್ಠಿ ನಡೆಯಲಿದ್ದು, ಸಾನ್ನಿಧ್ಯವನ್ನು ಬಸವಧರ್ಮ ಪೀಠದ ಪೀಠಾಧ್ಯಕ್ಷೆ ಡಾ| ಗಂಗಾದೇವಿ ಮಾತಾಜಿ, ಹೊಸಪೇಟೆ-ಹಾಲಕೆರೆಯ ಕೊಟ್ಟೂರು ಬಸವಲಿಂಗ ಸ್ವಾಮಿಗಳು ವಹಿಸುವರು. ಸಮ್ಮುಖವನ್ನು ವೀರೇಶ್ವರ ಪುಣ್ಯಾಶ್ರಮದ ಕಲ್ಲಯ್ಯಜ್ಜನವರು, ನರಗುಂದ ವಿರಕ್ತಮಠದ ಶಿವಕುಮಾರ ಸ್ವಾಮಿಗಳು, ಯಶವಂತನಗರದ ಗಂಗಾಧರ ಸ್ವಾಮಿಗಳು ವಹಿಸುವರು. ವೆಂಕಟೇಶಕುಮಾರ ಅವರನ್ನು ಸಂಮ್ಮಾನಿಸಲಾಗುವುದು.
ಬೆಳಗಾವಿಯ ವಿಶ್ರಾಂತ ಪ್ರಾಧ್ಯಾ ಪಕ ಡಾ| ಗುರುದೇವಿ ಹುಲೆಪ್ಪನವರಮಠ ಉಪನ್ಯಾಸ ನೀಡುವರು. ರಾತ್ರಿ 9ಕ್ಕೆ ಪದ್ಮಶ್ರೀ ಪಂ| ವೆಂಕಟೇಶಕುಮಾರ ಅವರಿಂದ ಶಾಸ್ತ್ರೀಯ ಗಾಯನ ಹಾಗೂ ವಚನ ಸಂಗೀತ ನಡೆಯಲಿದೆ.
18ರಂದು ಪರಿಸರೋತ್ಸವ: ಏ. 18ರಂದು ಬೆಳಗ್ಗೆ 10.30ಕ್ಕೆ ಪರಿಸರೋತ್ಸವ ಹಾಗೂ ಸಂತ ಸೇವಾಲಾಲ ಗ್ರಂಥ ಬಿಡುಗಡೆ ಜರುಗುವುದು. ಡಾ| ತೋಂಟದ ಸಿದ್ಧರಾಮ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾಮಣ್ಣ ಬ್ಯಾಟಿ ವಿರಚಿತ ಸಂತ ಸೇವಾಲಾಲ ಪುರಾಣ ಗ್ರಂಥ ಬಿಡುಗಡೆಗೊಳ್ಳುವುದು. ಮಹಾರಾಷ್ಟ್ರದ ಪೌರಾದೇವಿ ಕ್ಷೇತ್ರದ ಪೀಠಾಧಿಪತಿಗಳಾದ ಬಾಬುಸಿಂಗ್ ಮಹಾರಾಜರು ಗ್ರಂಥ ಬಿಡುಗಡೆಗೊಳಿಸುವರು.
ಜಾತ್ರೆ ಮಂಗಲೋತ್ಸವ: 18ರಂದು ಸಂಜೆ 7.30ಕ್ಕೆ ಮಂಗಲೋತ್ಸವ ನಡೆಯಲಿದ್ದು, ಡಾ| ತೋಂಟದ ಸಿದ್ಧರಾಮ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಹೈದರಾಬಾದ್‌ನ ಶಿವ ಹಂಸಾರೂಢ ಪ್ರಭು ಸ್ವಾಮೀಜಿ, ತೋಂಟದಾರ್ಯ ಮಠದ ಮಹಾಂತದೇವರು ಸಮ್ಮುಖ ವಹಿಸುವರು. ಇದೇ ವೇಳೆ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಗುತ್ತದೆ. ಬಳಿಕ ಹಾಸ್ಯ ಕಲಾವಿದ ಗಂಗಾವತಿ ಪ್ರಾಣೇಶ ಅವರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗುವುದು ಎಂದರು.
ದಾನಯ್ಯ ಗಣಾಚಾರಿ, ಮೈಲಾರಪ್ಪ ಅರಣಿ, ಬಸವರಾಜ ಹಿರೇಹಡಗಲಿ, ಕೊಟ್ರೇಶ ಮೆಣಸಿನಕಾಯಿ, ಮಲ್ಲಿಕಾರ್ಜುನ ಚಂದಪ್ಪನವರ, ಎಂ.ಸಿ. ಐಲಿ, ಮುರಗೇಶ ಬಡ್ನಿ ಇದ್ದರು.