Advertisement
ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ವಿಕಸನ ಸಂಸ್ಥೆ ವತಿಯಿಂದ ನಾಪೋಕ್ಲುವಿನ ಕೊಡವ ಸಮಾಜದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳೊಂದಿಗೆ ಸಚಿವರು ಶನಿವಾರ ಸಂವಾದ ನಡೆಸಿದರು.
Related Articles
Advertisement
ಮುಂದಿನ ವರ್ಷದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ಹತ್ತು ವಿದ್ಯಾರ್ಥಿಗಳ ಉತ್ತರ ಪತ್ರಿಕೆಯನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ಸುರೇಶ್ ಕುಮಾರ್ ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.
ಎಷ್ಟು ಮಂದಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬಗ್ಗೆ ಭಯ ಇದೆ ಎಂದು ಸಚಿವರು ಪ್ರಶ್ನಿಸಿದರು. . ಪಠ್ಯ ಪುಸ್ತಕದಲ್ಲಿನ ವಿಷಯವನ್ನೇ ಪ್ರಶ್ನೆ ಕೇಳಲಾಗುತ್ತದೆ. ¿ಎಂದು ಹೇಳಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸಿ.ವಿ.ಸ್ನೇಹ, ವಿಕಸನ ಸಂಸ್ಥೆಯ ಅಧ್ಯಕ್ಷ ಚೆಯ್ಯಂಡ ಸತ್ಯ, ಕೂಡಿಗೆ ಡಯಟ್ ಸಂಸ್ಥೆಯ ಪ್ರಾಂಶುಪಾಲಶ್ರೀಧರನ್, ಶಿಕ್ಷಣಾಧಿಕಾರಿಎಚ್.ಕೆ.ಪಾಂಡು, ಅಕ್ಷರ ದಾಸೋಹ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ, ಇತರರು ಉಪಸ್ಥಿತರಿದ್ದರು.
ವಿಕಸನ ಸಂಸ್ಥೆಯ ಸದಸ್ಯ ಕಿಶೋರ್ ರೈ ಕಾರ್ಯಕ್ರಮ ನಿರೂಪಿಸಿದರು. ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷರಾದ ಮನುಮುತ್ತಪ್ಪ ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ .ಗಾಯತ್ರಿ ವಂದಿಸಿದರು.
“ಫಲಿತಾಂಶ ಕಡಿಮೆ’ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷರಾದ ಮನುಮುತ್ತಪ್ಪ ಅವರು ಮಾತನಾಡಿ ನಾಪೋಕ್ಲು ಸರ್ಕಾರಿ ಶಾಲೆಯಲ್ಲಿ ಓದಿ ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿದ್ದಾರೆ. ಆದರೆ ಇತ್ತೀಚೆಗೆ ಈ ಭಾಗದಲ್ಲಿ ಫಲಿತಾಂಶ ಕಡಿಮೆಯಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು. ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಪಿ.ಎಸ್.ಮಚ್ಚಾಡೋ ಅವರು ಮಾತನಾಡಿ ವಿದ್ಯಾರ್ಥಿಗಳಲ್ಲಿನ ಪರೀûಾ ಭಯ ಹೋಗಲಾಡಿಸಲು ಮತ್ತು ಧೈರ್ಯ ತುಂಬುವ ನಿಟ್ಟಿನಲ್ಲಿ ಸಂವಾದ ಏರ್ಪಡಿಸಲಾಗಿದೆ ಎಂದು ಅವರು ಹೇಳಿದರು. ವಿಕಸನ ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ಸ್ಪೂರ್ತಿ ಮತ್ತು ಪ್ರೇರಣೆ ನೀಡುವ ನಿಟ್ಟಿನಲ್ಲಿ ಖ್ಯಾತ ಕ್ರೀಡಾಪಟು ಅರ್ಜುನ್ ದೇವಯ್ಯ ಅವರಿಂದ ಮಾಹಿತಿ ನೀಡಲಾಗಿದೆ ಎಂದರು. ಮನಸ್ಸು ಮಾಡಿದ್ದಲ್ಲಿ ಏನನ್ನಾದರೂ ಸಾಧಿಸಬಹುದು. ಆ ನಿಟ್ಟಿನಲ್ಲಿ ಯಾರೂ ಸಹ ಅನುತ್ತೀರ್ಣರಾಗಬಾರದು. ಓದಿನ ಕಡೆ ಗಮನಹರಿಸಬೇಕು. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದರೆ ಸಮಾಜದ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದರು.