ನವ ದೆಹಲಿ : ಜುಲೈ 19 ರಿಂದ ಆರಂಭವಾಗುವ ಸಂಸತ್ತಿನ ಮಳೆಗಾಲದ ಅಧಿವೇಶನದ ವಿಚಾರವಾಗಿ ಭಾರತೀಯ ಜನತಾ ಪಕ್ಷದ ಪ್ರಮುಖ ನಾಯಕರು ಇಂದು (ಮಂಗಳವಾರ, ಜುಲೈ 13) ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ನಿವಾಸದಲ್ಲಿ ನಡೆದ ಅನೌಪಚಾರಿಕ ಸಭೆಯಲ್ಲಿ, ಕೇಂದ್ರ ಸಚಿವರಾದ ಅಮಿತ್ ಶಾ, ಧರ್ಮೇಂದ್ರ ಪ್ರಧಾನ್, ಭೂಪೇಂದ್ರ ಯಾದವ್, ಪ್ರಲ್ಹಾದ್ ಜೋಶಿ, ಅರ್ಜುನ್ ರಾಮ್ ಮೇಘವಾಲ್, ಬಿಜೆಪಿ ಮುಖ್ಯಸ್ಥ ಜೆ.ಪಿ.ನಡ್ಡಾ ಸೇರಿ ಪ್ರಮುಖ ಇಪ್ಪತ್ತು ಹಿರಿಯ ಬಿಜೆಪಿ ನಾಯಕರು ಭಾಗವಹಿಸಿದ್ದರು ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ : ಮನೆ ಗೋಡೆ ಕುಸಿತ, ಮಹಿಳೆ ಸಾವು ; ಸ್ಥಳಕ್ಕೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಭೇಟಿ
ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಸಭೆಯಲ್ಲಿ ಅಧಿವೇಶನಕ್ಕಾಗಿ ಆಡಳಿತ ಪಕ್ಷದ ಕಾರ್ಯತಂತ್ರ, ಅಡುಗೆ ಅನಿಲ, ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಹೆಚ್ಚಳ , ಕೋವಿಡ್ 19 ಸಾಂಕ್ರಾಮಿಕ ಸೋಂಕಿನ ನಿರ್ವಹಣೆಯ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಲಾಯಿತು ಎಂದು ಸುದ್ದಿ ಮೂಲಗಳು ತಿಳಿಸಿವೆ.
ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆಯ ನಂತರ ನಡೆಯುತ್ತಿರುವ ನಡೆಯುತ್ತಿರವ ಮೊದಲ ಅಧಿವೇಶನ ಇದಾಗಿದ್ದು, ಜುಲೈ 19 ರಿಂದ ಆರಂಭವಾಗುವ ಅಧಿವೇಶನ ಆಗಸ್ಟ್ 13 ರ ತನಕ ನಡೆಯಲಿದೆ.
ಇದನ್ನೂ ಓದಿ : ಮನೆ ಗೋಡೆ ಕುಸಿತ, ಮಹಿಳೆ ಸಾವು ; ಸ್ಥಳಕ್ಕೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಭೇಟಿ