ಮುಂಬಯಿ:ರಷ್ಯಾ, ಉಕ್ರೇನ್ ಯುದ್ಧ ತೀವ್ರಗೊಳ್ಳಲಿದೆ ಎಂಬ ಮುನ್ಸೂಚನೆ ಹೂಡಿಕೆದಾರರ ಮೇಲೆ ಪರಿಣಾಮ ಬೀರಿದ್ದು, ಸೋಮವಾರ (ಮಾರ್ಚ್ 21) ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಇಳಿಕೆಯೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ.
ಇದನ್ನೂ ಓದಿ:ಮಹಿಳಾ ವಿಶ್ವಕಪ್: ಬಾಂಗ್ಲಾ ಎದುರು ಭರ್ಜರಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ 571 ಅಂಕ ಇಳಿಕೆಯಾಗಿದ್ದು, 57,292 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 169 ಅಂಕ ಕುಸಿತಗೊಂಡಿದ್ದು, 17,115 ಅಂಕಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.
ಮಾರುತಿ ಸುಜುಕಿ, ಸನ್ ಫಾರ್ಮಾ, ಟಾಟಾ ಸ್ಟೀಲ್, ಎಚ್ ಡಿಎಫ್ ಸಿ ಬ್ಯಾಂಕ್, ಟೈಟಾನ್ ಮತ್ತು ಐಟಿಸಿ, ಕೋಲ್ ಇಂಡಿಯಾ ಲಿಮಿಟೆಡ್, ಸಿಪ್ಲಾ ಲಿಮಿಟೆಡ್, ಎನ್ ಟಿಪಿಸಿಎಲ್ ಷೇರುಗಳು ಲಾಭಗಳಿಸಿವೆ.
ಮತ್ತೊಂದೆಡೆ ಪವರ್ ಗ್ರಿಡ್ ಕಾರ್ಪೋರೇಷನ್, ಏಷಿಯನ್ ಪೇಂಟ್ಸ್, ಕೋಟಕ್ ಮಹೀಂದ್ರ ಬ್ಯಾಂಕ್ ಲಿಮಿಟೆಡ್, ಹಿಂದೂಸ್ತಾನ್ ಯುನಿಲಿವರ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಭಾರ್ತಿ ಏರ್ ಟೆಲ್, ಬಜಾಜ್ ಆಟೊ, ಆ್ಯಕ್ಸಿಸ್ ಬ್ಯಾಂಕ್, ಮಹೀಂದ್ರ ಆ್ಯಂಡ್ ಮಹೀಂದ್ರ, ಟಿಸಿಎಸ್, ಲುಪಿನ್ ಲಿಮಿಟೆಡ್, ಅದಾನಿ ಪೋರ್ಟ್ಸ್, ರಿಲಯನ್ಸ್ ಇಂಡಸ್ಟ್ರೀಸ್, ವಿಪ್ರೋ ಲಿಮಿಟೆಡ್ ಷೇರುಗಳು ನಷ್ಟಕಂಡಿದೆ.