ಛತ್ತೀಸ್‌ಗಢ: ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಮತ್ತು ಡಿಸ್ಟ್ರಿಕ್ಟ್ ರಿಸರ್ವ್ ಗಾರ್ಡ್ (ಡಿಆರ್‌ಜಿ) ತಂಡಗಳು ಮಂಗಳವಾರ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ನಕ್ಸಲ್ ನಾಯಕ ಸೇರಿದಂತೆ ಕನಿಷ್ಠ 18 ಮಾವೋವಾದಿಗಳು ಹತರಾಗಿರುವ ಘಟನೆ ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.
ಈ ಕುರಿತು ಮಾಹಿತಿ ನೀಡಿದ ಹಿರಿಯ ಪೊಲೀಸ್ ಅಧಿಕಾರಿ ಕಲ್ಯಾಣ್ ಎಲೆಸೆಲಾ ಭದ್ರತಾ ಸಿಬಂದಿ ಜೊತೆ ನಡೆದ ದಾಳಿಯಲ್ಲಿ ನಕ್ಸಲ್ ನಾಯಕ ಶಂಕರ್ ರಾವ್ ಕೂಡ ಹತನಾಗಿದ್ದಾನೆ ಎಂದು ತಿಳಿಸಿದ್ದಾರೆ.
ಈ ಹಿಂದೆ ನಕ್ಸಲ್ ನಾಯಕ ಶಂಕರ್ ರಾವ್ ಮಾಹಿತಿ ನೀಡಿದವರಿಗೆ 25 ಲಕ್ಷ ರೂಪಾಯಿ ಬಹುಮಾನವನ್ನು ನೀಡುವುದಾಗಿ ಪೊಲೀಸರು ಮಾಹಿತಿ ನೀಡಿದ್ದರು.
ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯ ಛೋಟೆಬೆಥಿಯಾ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶಗಳಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭದ್ರತಾ ಪಡೆ ಸಿಬ್ಬಂದಿ ಗಾಯಗೊಂಡಿದ್ದು ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಡೆದ ಸ್ಥಳದಲ್ಲಿ ನಾಲ್ಕು ಎಕೆ-47 ರೈಫಲ್‌ಗಳು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಂಗಳವಾರ ಮಧ್ಯಾಹ್ನ ಸುಮಾರು 1:30 ರ ಸುಮಾರಿಗೆ ಕಾರ್ಯಾಚರಣೆ ಆರಂಭಗೊಂಡಿದ್ದು ಈ ವೇಳೆ ಮಾವೋವಾದಿಗಳು ಹಾಗೂ ಭದ್ರತಾ ಸಿಬಂದಿಗಳ ನಡುವೆ ಗುಂಡಿನ ಚಕಮಕಿ ನಡೆದಿದೆ.
ಇದನ್ನೂ ಓದಿ: Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!