ಅಯೋಧ್ಯಾ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಜನವರಿ 22 ರಂದು ಲೋಕಾರ್ಪಣೆಯಾಗಲಿದ್ದು ಸಮಾರಂಭಕ್ಕೆ ವಿಪಕ್ಷಗಳ ಉನ್ನತ ನಾಯಕರನ್ನು ಆಹ್ವಾನಿಸಲಾಗಿದೆ.
ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ನೀಡಿರುವ ಮಾಹಿತಿ ಪ್ರಕಾರ, ಅಯೋಧ್ಯಾ ಶ್ರೀ ರಾಮ ಮಂದಿರವು ಮುಂದಿನ ತಿಂಗಳು ಜನವರಿಯಲ್ಲಿ ಉದ್ಘಾಟನೆಗೊಳ್ಳುತ್ತಿದ್ದು ಉದ್ಘಾಟನಾ ಸಮಾರಂಭಕ್ಕೆ ಕಾಂಗ್ರೆಸ್ ಹಿರಿಯ ನಾಯಕರಾದ ಸೋನಿಯಾ ಗಾಂಧಿ, ಮನಮೋಹನ್ ಸಿಂಗ್, ಮಲ್ಲಿಕಾರ್ಜುನ ಖರ್ಗೆ, ಅಧೀರ್ ರಂಜನ್ ಚೌಧರಿ ಮತ್ತು ಜೆಡಿಎಸ್ ವರಿಷ್ಠ ದೇವೇಗೌಡರಿಗೆ ಆಹ್ವಾನ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪಾಲ್ಗೊಳ್ಳುವ ಸಮಾರಂಭದ ಸಿದ್ಧತೆಗಳು ಭರದಿಂದ ಸಾಗಿವೆ ಮತ್ತು ಜನವರಿ 15 ರೊಳಗೆ ಮುಕ್ತಾಯಗೊಳ್ಳುವ ನಿರೀಕ್ಷೆಯಿದೆ. ಜನವರಿ 16 ರಿಂದ ಪ್ರಾಣ ಪ್ರತಿಷ್ಠಾಪನೆಯ ಪೂಜೆ ಆರಂಭವಾಗಲಿದ್ದು, ಕಾಶಿಯ ಗಣೇಶ್ವರ ಶಾಸ್ತ್ರಿ ದ್ರಾವಿಡ್ ಮತ್ತು ಲಕ್ಷ್ಮೀಕಾಂತ್ ದೀಕ್ಷಿತ್ ನೇತೃತ್ವದಲ್ಲಿ ನಡೆಯಲಿದೆ ಎಂದು ತಿಳಿಸಿದರು.
ಅದರಂತೆ ಜನವರಿ 22 ರಂದು ಅಯೋಧ್ಯಾ ಶ್ರೀ ರಾಮ ಮಂದಿರ ಲೋಕಾರ್ಪಣೆಗೊಳ್ಳಲಿದೆ ಸಾವಿರಾರು ಸಂಖ್ಯೆಯಲ್ಲಿ ಗಣ್ಯರು ಈ ಶುಭ ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ.
ಇದನ್ನೂ ಓದಿ: Heavy Rain: ವರುಣಾರ್ಭಟಕ್ಕೆ ನಲುಗಿದ ತಮಿಳುನಾಡು… ಕೇಂದ್ರದಿಂದ ನೆರವಿನ ಭರವಸೆ