Advertisement

ಲಸಿಕೆ ವಿತರಣೆಯಲ್ಲಿ ರಾಜ್ಯಕ್ಕೆ ಅಗ್ರ ಸ್ಥಾನ

09:44 PM Jan 20, 2022 | Team Udayavani |

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಲಸಿಕೆಯ ಮೊದಲ ಡೋಸ್‌ ಶೇ. 99.9 ಗುರಿ ಸಾಧಿಸುವ ಮೂಲಕ ರಾಜ್ಯವಾರು ಸಾಧನೆ ಪಟ್ಟಿಯಲ್ಲಿ ಕರ್ನಾಟಕ ಅಗ್ರ ಸ್ಥಾನಲ್ಲಿದೆ.

Advertisement

15 ವರ್ಷ ಮೇಲ್ಪಟ್ಟ 5.9 ಕೋಟಿ ಮಂದಿಗೆ ಲಸಿಕೆಯ ಮೊದಲ ಡೋಸ್‌ ನೀಡಲಾಗಿದ್ದು, ದೇಶದಲ್ಲೇ ನಾವು ಮುಂಚೂಣಿಯಲ್ಲಿದ್ದೇವೆ ಎಂದು ಆರೋಗ್ಯ ಸಚಿವ ಡಾ| ಕೆ. ಸುಧಾಕರ್‌ ಟ್ವೀಟ್‌ ಮೂಲಕ ಹರ್ಷ ವ್ಯಕ್ತಪಡಿಸಿದ್ದಾರೆ.

ರಾಜ್ಯಾದ್ಯಂತ ಒಟ್ಟು 5,09,33,536 ಮಂದಿಗೆ ಮೊದಲ ಡೋಸ್‌  ಹಾಗೂ  4,13,15,765 ಮಂದಿ ಎರಡನೇ ಡೋಸ್‌ ಲಸಿಕೆ ಪಡೆದುಕೊಂಡಿದ್ದು, ಆ ಮೂಲಕ ಒಟ್ಟು 9.26 ಕೋಟಿ ಡೋಸ್‌ ಲಸಿಕೆ ವಿತರಿಸಿದಂತಾಗಿದೆ. 3.85 ಲಕ್ಷ ಮಂದಿ ಕೊರೊನಾ ಮುನ್ನೆಚ್ಚರಿಕೆ ಡೋಸ್‌ ಪಡೆದುಕೊಂಡಿದ್ದಾರೆ. 15ರಿಂದ 17 ವರ್ಷದೊಳಗಿನ 2.8 ಲಕ್ಷ ಮಕ್ಕಳು ಕೊವ್ಯಾಕ್ಸಿನ್‌ ಮೊದಲ ಡೋಸ್‌ ಹಾಕಿಸಿಕೊಂಡಿದ್ದಾರೆ.

ನಾಲ್ಕು ಕೋಟಿಗಿಂತ ಹೆಚ್ಚು ಮಂದಿಗೆ ಮೊದಲ ಡೋಸ್‌ ಲಸಿಕೆ ವಿತರಿಸಲಾಗಿದೆ. ಆ ಮೂಲಕ ಶೇ. 100ರ ಗುರಿ ಸಾಧನೆ ಸಮೀಪಿಸುತ್ತಿದೆ. ಅತ್ಯಧಿಕ ಜನಸಂಖ್ಯೆ ಹೊಂದಿರುವ ರಾಜ್ಯಗಳಲ್ಲಿ ಕೊರೊನಾ ಮೊದಲ ಡೋಸ್‌ ವಿತರಣೆಯಲ್ಲಿ ಶೇ.100 ಗುರಿ ಸಾಧಿಸಿ ಮೊದಲ ರಾಜ್ಯ ಎನ್ನುವ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next