ಮಣಿಪಾಲ: ಕರಾವಳಿಯಲ್ಲಿ ಭಯೋತ್ಪಾದಕ ಚಟುವಟಿಕೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಎನ್ ಐಎ ಘಟಕ ತರುವ ನಿಟ್ಟಿನಲ್ಲಿ ಸಂಸತ್ ನಲ್ಲಿ ವಿಷಯ ಪ್ರಸ್ತಾಪ ಮಾಡಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಹೇಳಿದರು.
ರಾಜ್ಯ ಕಾರ್ಯಕಾರಣಿಯಲ್ಲಿ ಭಾಗವಹಿಸಲು ಮಣಿಪಾಲಕ್ಕೆ ಬಂದಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಮಂಗಳೂರಿನಲ್ಲಿ ಎನ್ಐಎ ಪ್ರಾದೇಶಿಕ ಘಟಕ ತೆರೆಯುವಂತೆ ಈ ಕೇಂದ್ರ ಸರ್ಕಾರದ ಗಮನ ಸೆಳೆದಿದ್ದೆ. ಕರಾವಳಿಯಲ್ಲಿ ಉಗ್ರ ಕೃತ್ಯಗಳು ಮರುಕಳಿಸುತ್ತಿರುವ ಹಿನ್ನೆಲೆಯಲ್ಲಿ ಶೀಘ್ರದಲ್ಲಿ ಪ್ರಾದೇಶಿಕ ಘಟಕ ಆರಂಭಿಸುವಂತೆ ಕೋರುತ್ತೇನೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಸಿಎಂ ಬೊಮ್ಮಾಯಿ ಜೊತೆ ಮಾತುಕತೆ ನಡೆಸಲಾಗುವುದು ಎಂದರು.
ಇದನ್ನೂ ಓದಿ:ಉಡುಪಿ: ಇ-ಖಾತಾ ಸರ್ವರ್ ಸಮಸ್ಯೆ ಪರಿಹಾರ… ಗ್ರಾಹಕರಿಗೆ ಆನ್‌ಲೈನ್ ಸೇವೆ ಲಭ್ಯ
ಭಯೋತ್ಪಾದನೆಯೊಂದು ವ್ಯವಸ್ಥಿತ ಕೃತ್ಯ. ಸಮಾಜದಲ್ಲಿ ಕೋಮು ಸಂಘರ್ಷ ಸೃಷ್ಟಿಸಲು, ಅಶಾಂತಿ ನಿರ್ಮಾಣಕ್ಕೆ ಈ ರೀತಿ ಮಾಡುತ್ತಿದ್ದಾರೆ ಎಂದು ತೇಜಸ್ವಿ ಸೂರ್ಯ ಕಿಡಿಕಾರಿದರು.