Advertisement

ರಾಜ್ಯದಲ್ಲಿಂದು 2496 ಕೋವಿಡ್ ಪ್ರಕರಣ: 1142 ಸೋಂಕಿತರು ಚೇತರಿಕೆ ; 87 ಸಾವು

09:12 PM Jul 14, 2020 | Hari Prasad |

ಬೆಂಗಳೂರು: ಸೋಮವಾರ ಸಾಯಂಕಾಲದಿಂದ ಮಂಗಳವಾರ ಸಾಯಂಕಾಲದವರೆಗಿನ ಕೋವಿಡ್ 19 ಪ್ರಕರಣಗಳ ವರದಿಯಲ್ಲಿ ಒಟ್ಟು 2496 ಕೋವಿಡ್ 19 ಸೋಂಕು ಪ್ರಕರಣಗಳು ರಾಜ್ಯದಲ್ಲಿ ದಾಖಲಾಗಿವೆ.

Advertisement

ಒಂದೇ ದಿನ ರಾಜ್ಯದಲ್ಲಿ 1142 ಕೋವಿಡ್ 19 ಸೋಂಕಿತರು ಚೇತರಿಸಿಕೊಂಡಿರುವುದು ಒಂದು ಆಶಾದಾಯಕ ವಿಚಾರವಾಗಿದೆ. ಇಂದು ರಾಜ್ಯದಲ್ಲಿ ಕೋವಿಡ್ 19 ಸಂಬಂಧಿತ ಒಟ್ಟು 87 ಸಾವು ಸಂಭವಿಸಿದೆ.

ಯಥಾಪ್ರಕಾರ ಕೋವಿಡ್ 19 ಸೋಂಕಿತರ ಸಂಖ್ಯೆಯಲ್ಲಿ ಬೆಂಗಳೂರು ನಗರ ಜಿಲ್ಲೆ ಮೊದಲ ಸ್ಥಾನದಲ್ಲಿದೆ. ಇಲ್ಲಿ ಇಂದು 1267 ಸೋಂಕಿತರು ಪತ್ತೆಯಾಗಿದ್ದಾರೆ. ಆ ಬಳಿಕದ ಸ್ಥಾನದಲ್ಲಿ ಮೈಸೂರು (125), ಕಲಬುರಗಿ (121), ಧಾರವಾಡ (100) ಜಿಲ್ಲೆಗಳಿವೆ.

ಇಂದು ರಾಜ್ಯದಲ್ಲಿ ಕೋವಿಡ್ 19 ಸೋಂಕಿಗೆ ಒಟ್ಟು 87 ಜನ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಈ ಮಹಾಮಾರಿಗೆ ಬಲಿಯಾದವರ ಒಟ್ಟು ಸಂಖ್ಯೆ 842ಕ್ಕೆ ಏರಿಕೆ ಆಗಿದೆ.

ಇಂದು ರಾಜ್ಯಾದ್ಯಂತ ಒಟ್ಟು 1142 ಕೋವಿಡ್ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ರಾಜ್ಯದಲ್ಲಿ ಇಂದಿನವರೆಗೆ ಒಟ್ಟು 44077 ಕೋವಿಡ್ 19 ಸೋಂಕು ಪ್ರಕರಣಗಳು ದಾಖಲುಗೊಂಡಿದೆ. ಮತ್ತು ಇವರಲ್ಲಿ 17390 ಸೋಂಕಿತರು ಗುಣಮುಖರಾಗಿದ್ದಾರೆ ಹಾಗೂ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 25839 ಇದೆ.

Advertisement

ಇದನ್ನೂ ಓದಿ: ಜುಲೈ 16 ರಿಂದ ದಕ್ಷಿಣ ಕನ್ನಡ ಸಂಪೂರ್ಣ ಲಾಕ್ ಡೌನ್ : ಮಾರ್ಗಸೂಚಿ ಹೀಗಿದೆ

ಈ ಅವಧಿಯಲ್ಲಿ ಬೆಂಗಳೂರು ನಗರ ಜಿಲ್ಲೆಯೊಂದರಲ್ಲೇ 56 ಸೋಂಕಿತರು ಮೃತಪಟ್ಟಿದ್ದಾರೆ. ಇನ್ನುಳಿದಂತೆ ಬಳ್ಳಾರಿ ಜಿಲ್ಲೆಯಲ್ಲಿ 5, ಮೈಸೂರು, ದಕ್ಷಿಣ ಕನ್ನಡ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ತಲಾ 4, ವಿಜಯಪುರ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ 3, ರಾಯಚೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ತಲಾ 2 ಸೋಂಕಿತರು ಮೃತಪಟ್ಟಿದ್ದಾರೆ ಮತ್ತು ಕಲಬುರಗಿ, ಧಾರವಾಡ, ದಾವಣಗೆರೆ ಹಾಗೂ ಹಾಸನ ಜಿಲ್ಲೆಗಳಲ್ಲಿ ಕೋವಿಡ್ 19 ಸೋಂಕಿಗೆ ಸಂಬಂಧಿಸಿದ ತಲಾ ಒಂದೊಂದು ಸಾವು ಸಂಭವಿಸಿದೆ.

ಈ ಮೂಲಕ ರಾಜ್ಯದಲ್ಲಿ ಒಟ್ಟಾರೆಯಾಗಿ ಇದುವರೆಗೆ 842 ಜನ ಕೋವಿಡ್ 19 ಸೋಂಕಿನ ಕಾರಣದಿಂದ ಮೃತಪಟ್ಟಿದ್ದಾರೆ. ಹಾಗೂ 4 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 540 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಇದನ್ನೂ ಓದಿ: Covid ಚಿಕಿತ್ಸೆಗೆ ಪ್ರತ್ಯೇಕ ಆಸ್ಪತ್ರೆ ಮನವಿ:BBMP ನೌಕರರ ಸಂಘದಿಂದ ಸಾಮೂಹಿಕ ರಜೆ ಎಚ್ಚರಿಕೆ

ಬೆಂಗಳೂರು ನಗರ ಜಿಲ್ಲೆಯಲ್ಲಿ 1267 ಪಾಸಿಟಿವ್ ಪ್ರಕರಣ ಸೇರಿದಂತೆ, ಮೈಸೂರು – 125, ಕಲಬುರಗಿ – 121, ಧಾರವಾಡ – 100, ಬಳ್ಳಾರಿ – 99, ಕೊಪ್ಪಳ – 98, ದಕ್ಷಿಣ ಕನ್ನಡ – 91, ಬಾಗಲಕೋಟೆ – 78, ಉಡುಪಿ – 73, ಉತ್ತರ ಕನ್ನಡ – 64, ಬೆಳಗಾವಿ – 64, ವಿಜಯಪುರ 52, ತುಮಕೂರು – 47, ಬೀದರ್ – 42, ಮಂಡ್ಯ – 38, ರಾಯಚೂರು – 25, ದಾವಣಗೆರೆ – 17, ಬೆಂಗಳೂರು ಗ್ರಾಮಾಂತರ – 14, ಚಿಕ್ಕಬಳ್ಳಾಪುರ – 13, ಕೋಲಾರ – 11, ಶಿವಮೊಗ್ಗ – 10, ಕೊಡಗು – 10, ಚಿತ್ರದುರ್ಗ – 10 ರಾಜ್ಯದ ಒಟ್ಟು 23 ಜಿಲ್ಲೆಗಳಲ್ಲಿ ಇಂದು ಎರಡಂಕೆಯ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.

ಇಂದು ರಾಜ್ಯದಲ್ಲಿ ಒಟ್ಟು 23674 ಮಾದರಿಗಳನ್ನು ತಪಾಸಣೆ ನಡೆಸಲಾಗಿದ್ದು ಇವುಗಳಲ್ಲಿ 19603 ವರದಿಗಳು ನೆಗೆಟಿವ್ ಬಂದಿದೆ ಮತ್ತು 2496 ಪ್ರಕರಣಗಳು ಪಾಸಿಟಿವ್ ಆಗಿವೆ. ರಾಜ್ಯದಲ್ಲಿ ಇಲ್ಲಿಯವರೆಗೆ ಒಟ್ಟು 889822 ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿದ್ದು ಇವುಗಳಲ್ಲಿ 803164 ಮಾದರಿಗಳ ವರದಿ ನೆಗೆಟಿವ್ ಬಂದಿದೆ ಹಾಗೂ 44077 ವರದಿಗಳು ಪಾಸಿಟಿವ್ ಆಗಿವೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು ಕೋವಿಡ್ 19 ಸೋಂಕಿತ ಪ್ರಕರಣಗಳ ಸಂಖ್ಯೆ 20969ಕ್ಕೆ ಏರಿಕೆಯಾಗಿದ್ದು, 4992 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ ಹಾಗೂ ಸಕ್ರಿಯ ಪ್ರಕರಣಗಳ ಸಂಖ್ಯೆ 15599ಕ್ಕೆ ಏರಿಕೆಯಾಗಿದೆ. ಇಲ್ಲಿ ಕೋವಿಡ್ ಸಂಬಂಧಿತ 377 ಸಾವು ಸಂಭವಿಸಿದೆ.

ಇದನ್ನೂ ಓದಿ: ಸಚಿವ ಈಶ್ವರಪ್ಪ ಹಾಗೂ ಕುಟುಂಬಸ್ಥರ ಕೋವಿಡ್ ವರದಿ ನೆಗೆಟಿವ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ 2444ಕ್ಕೆ ಏರಿಕೆಯಾಗಿದ್ದು ಇವರಲ್ಲಿ 886 ಸೋಂಕಿತರು ಗುಣಮುಖರಾಗಿದ್ದಾರೆ. 1511 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ ಹಾಗೂ ಇಲ್ಲಿ ಕೋವಿಡ್ ಸಂಬಂಧಿತ 45 ಸಾವು ಸಂಭವಿಸಿದೆ.

ಕಲಬುರಗಿಯಲ್ಲಿ ಒಟ್ಟು 2313 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 1519 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 757 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ ಹಾಗೂ ಇಲ್ಲಿ 37 ಜನರು ಈ ಸೋಂಕಿಗೆ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಉಡುಪಿ ಜಿಲ್ಲೆಯ ಎಲ್ಲಾ ಗಡಿಗಳು ನಾಳೆ ರಾತ್ರಿಯಿಂದ 14 ದಿನ ಸೀಲ್ ಡೌನ್

ಇನ್ನು ಉಡುಪಿ ಜಿಲ್ಲೆಯಲ್ಲಿ 1662 ಕೋವಿಡ್ 19 ಸೋಂಕಿನ ಪ್ರಕರಣಗಳು ದಾಖಲಾಗಿದ್ದು 1269 ಜನರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಹಾಗೂ ಜಿಲ್ಲೆಯಲ್ಲಿ 383 ಸಕ್ರಿಯ ಪ್ರಕರಣಗಳಿವೆ. ಇಲ್ಲಿ ಸೋಂಕು ಸಂಬಂಧಿ 3 ಸಾವುಗಳು ಸಂಭವಿಸಿವೆ.

ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 1887 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 1041 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 799 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 47 ಸಾವು ಸಂಭವಿಸಿದೆ.

ಯಾದಗಿರಿ ಜಿಲ್ಲೆಯಲ್ಲಿ 1452 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 894 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 557 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 1 ಸಾವು ಸಂಭವಿಸಿದೆ.

ಧಾರವಾಡ ಜಿಲ್ಲೆಯಲ್ಲಿ 1259 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 450 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 770 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 39 ಸಾವು ಸಂಭವಿಸಿದೆ.

ಬೀದರ್ ಜಿಲ್ಲೆಯಲ್ಲಿ 1103 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 612 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 438 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 51 ಸಾವು ಸಂಭವಿಸಿದೆ.

ಮೈಸೂರು ಜಿಲ್ಲೆಯಲ್ಲಿ 1091 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 498 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 552 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 41 ಸಾವು ಸಂಭವಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next