Advertisement
ಶನಿವಾರ ಸಾಯಂಕಾಲದಿಂದ ಭಾನುವಾರ ಸಾಯಂಕಾಲದವರೆಗಿನ ಕೋವಿಡ್ 19 ಪ್ರಕರಣಗಳ ವರದಿ ಇದೀಗ ಲಭ್ಯವಾಗಿದ್ದು ಈ ಅವಧಿಯಲ್ಲಿ 2627 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಹಾಗೂ ಇದೇ ಅವಧಿಯಲ್ಲಿ ರಾಜ್ಯಾದ್ಯಂತ ಈ ಸೋಂಕಿಗೆ ಒಟ್ಟು 71 ಜನರು ಮೃತಪಟ್ಟಿದ್ದಾರೆ.
Related Articles
Advertisement
ರಾಜ್ಯದಲ್ಲಿ ಒಟ್ಟಾರೆಯಾಗಿ ಇದುವರೆಗೆ 684 ಜನ ಕೋವಿಡ್ 19 ಸೋಂಕಿನ ಕಾರಣದಿಂದ ಮೃತಪಟ್ಟಿದ್ದಾರೆ. ಹಾಗೂ 4 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 532 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ 1525 ಪಾಸಿಟಿವ್ ಪ್ರಕರಣ ಸೇರಿದಂತೆ ದಕ್ಷಿಣ ಕನ್ನಡ – 196, ಧಾರವಾಡ – 129, ಯಾದಗಿರಿ – 120, ಕಲಬುರಗಿ – 79, ಬಳ್ಳಾರಿ – 63, ಬೀದರ್ – 62, ರಾಯಚೂರು – 48, ಉಡುಪಿ – 43, ಮೈಸೂರು – 42, ಶಿವಮೊಗ್ಗ – 42, ಚಿಕ್ಕಬಳ್ಳಾಪುರ – 39, ಹಾಸನ – 31, ಕೊಪ್ಪಳ – 27, ತುಮಕೂರು – 26, ಕೋಲಾರ – 24, ದಾವಣಗೆರೆ – 20, ಬೆಂಗಳೂರು ಗ್ರಾಮಾಂತರ – 19, ಕೊಡಗು – 15, ಗದಗ – 14, ಚಾಮರಾಜನಗರ – 13, ಉತ್ತರ ಕನ್ನಡ – 12, ಹಾವೇರಿ – 12, ಚಿಕ್ಕಮಗಳೂರು – 10 ಸೇರಿದಂತೆ ರಾಜ್ಯದ ಒಟ್ಟು 24 ಜಿಲ್ಲೆಗಳಲ್ಲಿ ಇಂದು ಎರಡಂಕೆಯ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.
ಇಂದು ಬೆಂಗಳೂರು ನಗರ ಜಿಲ್ಲೆಯೊಂದರಲ್ಲೇ 45 ಸೋಂಕಿತರು ಮೃತಪಟ್ಟಿದ್ದಾರೆ. ಇನ್ನುಳಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5, ಮೈಸೂರು, ಹಾಸನ, ದಾವಣಗೆರೆ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ತಲಾ 3, ಹಾವೇರಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ತಲಾ 2 ಮತ್ತು ಧಾರವಾಡ, ಕೊಪ್ಪಳ, ತುಮಕೂರು, ಚಾಮರಾಜನಗರ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ತಲಾ 1 ಸಾವು ಸಂಭವಿಸಿದೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು ಕೋವಿಡ್ 19 ಸೋಂಕಿತ ಪ್ರಕರಣಗಳ ಸಂಖ್ಯೆ 18387ಕ್ಕೆ ಏರಿಕೆಯಾಗಿದ್ದು, 4045 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ ಹಾಗೂ ಸಕ್ರಿಯ ಪ್ರಕರಣಗಳ ಸಂಖ್ಯೆ 14067ಕ್ಕೆ ಏರಿಕೆಯಾಗಿದೆ. ಇಲ್ಲಿ ಕೋವಿಡ್ ಸಂಬಂಧಿತ 274 ಸಾವು ಸಂಭವಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ 2222ಕ್ಕೆ ಏರಿಕೆಯಾಗಿದ್ದು ಇವರಲ್ಲಿ 760 ಸೋಂಕಿತರು ಗುಣಮುಖರಾಗಿದ್ದಾರೆ. 1419 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ ಹಾಗೂ ಇಲ್ಲಿ ಕೋವಿಡ್ ಸಂಬಂಧಿತ 41 ಸಾವು ಸಂಭವಿಸಿದೆ.
ಕಲಬುರಗಿಯಲ್ಲಿ ಒಟ್ಟು 2103 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 1477 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 590 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ ಹಾಗೂ ಇಲ್ಲಿ 36 ಜನರು ಈ ಸೋಂಕಿಗೆ ಮೃತಪಟ್ಟಿದ್ದಾರೆ.
ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 1682 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 992 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 648 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 42 ಸಾವು ಸಂಭವಿಸಿದೆ.
ಯಾದಗಿರಿ ಜಿಲ್ಲೆಯಲ್ಲಿ 1288 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 894 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 393 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 1 ಸಾವು ಸಂಭವಿಸಿದೆ.
ಬೀದರ್ ಜಿಲ್ಲೆಯಲ್ಲಿ 1038 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 612 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 373 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಬೆಂಗಳೂರು ನಗರ ಜಿಲ್ಲೆ ಹೊರತುಪಡಿಸಿದರೆ ರಾಜ್ಯದಲ್ಲೇ ಇಲ್ಲಿ ಕೋವಿಡ್ 19 ಸಂಬಂಧಿತ ಎರಡನೇ ಅತೀ ಹೆಚ್ಚು ಅಂದರೆ 53 ಸಾವು ಸಂಭವಿಸಿದೆ.
ಧಾರವಾಡ ಜಿಲ್ಲೆಯಲ್ಲಿ 1088 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 382 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 673 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 33 ಸಾವು ಸಂಭವಿಸಿದೆ.