ಬೆಂಗಳೂರು: ರವಿವಾರ ಸಾಯಂಕಾಲದಿಂದ ಸೋಮವಾರ ಸಾಯಂಕಾಲದವರೆಗಿನ ಕೋವಿಡ್ 19 ಸೋಂಕು ಪ್ರಕರಣಗಳ ವರದಿಯ ಪ್ರಕಾರ, ಈ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 3648 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.
ಲಭ್ಯ ವರದಿಗಳ ಪ್ರಕಾರ ಈ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 730 ಕೋವಿಡ್ 19 ಸೋಂಕಿತರು ಚೇತರಿಸಿಕೊಂಡಿದ್ದಾರೆ. ಇಂದು ರಾಜ್ಯದಲ್ಲಿ ಕೋವಿಡ್ 19 ಸಂಬಂಧಿತ ಒಟ್ಟು 72 ಸಾವು ಸಂಭವಿಸಿದೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಮುಖವಾಗಿದ್ದು, ಇಂದು ಇಲ್ಲಿ 1452 ಸೋಂಕಿತರು ಪತ್ತೆಯಾಗಿದ್ದಾರೆ. ಆ ಬಳಿಕದ ಸ್ಥಾನದಲ್ಲಿ ಬಳ್ಳಾರಿ (234), ಬೆಂಗಳೂರು ಗ್ರಾಮಾಂತರ (208), ಧಾರವಾಡ (200), ವಿಜಯಪುರ (160), ಮೈಸೂರು (149), ಕಲಬುರಗಿ (124), ಉಡುಪಿ (98) ಮತ್ತು ದಕ್ಷಿಣ ಕನ್ನಡ (89) ಜಿಲ್ಲೆಗಳಿವೆ.
ಇಂದು ರಾಜ್ಯದಲ್ಲಿ ಕೋವಿಡ್ 19 ಸೋಂಕಿಗೆ ಒಟ್ಟು 72 ಜನ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಈ ಮಹಾಮಾರಿಗೆ ಬಲಿಯಾದವರ ಒಟ್ಟು ಸಂಖ್ಯೆ 1403ಕ್ಕೆ ಏರಿಕೆ ಆಗಿದೆ.
ಇಂದು ರಾಜ್ಯಾದ್ಯಂತ ಒಟ್ಟು 730 ಕೋವಿಡ್ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ರಾಜ್ಯದಲ್ಲಿ ಇಂದಿನವರೆಗೆ ಒಟ್ಟು 67420 ಕೋವಿಡ್ 19 ಸೋಂಕು ಪ್ರಕರಣಗಳು ದಾಖಲುಗೊಂಡಿದೆ. ಮತ್ತು ಇವರಲ್ಲಿ 23795 ಸೋಂಕಿತರು ಗುಣಮುಖರಾಗಿದ್ದಾರೆ ಹಾಗೂ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 42216 ಇದೆ.
ಈ ಮೂಲಕ, ಕೋವಿಡ್ 19 ಸೋಂಕಿಗೆ ಇದುವರೆಗೂ ರಾಜ್ಯದಲ್ಲಿ 1403 ಸಾವು ಸಂಭವಿಸಿದೆ. ಹಾಗೂ 06 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 580 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.