Advertisement
ರಾಜ್ಯ ರಾಜಧಾನಿಯನ್ನು ಒಳಗೊಂಡಿರುವ ಬೆಂಗಳೂರು ನಗರ ಜಿಲ್ಲೆಯಲ್ಲಿ 503 ಪ್ರಕರಣ ಸಹಿತ ರಾಜ್ಯದಲ್ಲಿ ಇಂದು ಒಟ್ಟಾರೆ 947 ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ ಮತ್ತು ಇಂದು ಒಂದೇ ದಿನ ಕೋವಿಡ್ ಸೋಂಕಿನ ಕಾರಣದಿಂದ 20 ಜನ ಸಾವನ್ನಪ್ಪಿದ್ದಾರೆ.
Related Articles
Advertisement
ರಾಜ್ಯದಲ್ಲಿ ಜೂನ್ 30 ಮಂಗಳವಾರದವರೆಗೆ 15242 ಕೋವಿಡ್ 19 ಸೋಂಕು ಪ್ರಕರಣಗಳು ದಾಖಲುಗೊಂಡಿದೆ. ಮತ್ತು ಇವರಲ್ಲಿ 7918 ಸೋಂಕಿತರು ಗುಣಮುಖರಾಗಿದ್ದಾರೆ ಹಾಗೂ 7074 ಸಕ್ರಿಯ ಪ್ರಕರಣಗಳಿವೆ.
ರಾಜ್ಯದಲ್ಲಿ ಒಟ್ಟಾರೆಯಾಗಿ ಇದುವರೆಗೆ 246 ಜನ ಕೋವಿಡ್ 19 ಸೋಂಕಿನ ಕಾರಣದಿಂದ ಮೃತಪಟ್ಟಿದ್ದಾರೆ. ಹಾಗೂ 4 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 271 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.
ಇಂದೂ ಸಹ ಬೆಂಗಳೂರು ನಗರ ಜಿಲ್ಲೆಯಲ್ಲೇ ಅತೀ ಹೆಚ್ಚಿನ ಕೋವಿಡ್ 19 ಸೋಂಕಿತರು ಪತ್ತೆಯಾಗಿದ್ದಾರೆ. ಇಲ್ಲಿ ಇಂದು 503 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಉಳಿದಂತೆ ಬಳ್ಳಾರಿ – 61, ಹಾವೇರಿ – 49, ದಕ್ಷಿಣ ಕನ್ನಡ – 44, ಉತ್ತರ ಕನ್ನಡ – 40, ವಿಜಯಪುರ – 39, ಶಿವಮೊಗ್ಗ – 22, ಬೆಂಗಳೂರು ಗ್ರಾಮಾಂತರ – 21, ಬೀದರ್ – 17, ಧಾರವಾಡ – 17, ಹಾಸನ – 16, ಕಲಬುರಗಿ – 15, ರಾಯಚೂರು – 15, ಚಿಕ್ಕಬಳ್ಳಾಪುರ – 13, ದಾವಣಗೆರೆ – 12, ರಾಮನಗರ – 12 ಹಾಗೂ ಚಿಕ್ಕಮಗಳೂರು – 10 ಇವಿಷ್ಟು ಜಿಲ್ಲೆಗಳಲ್ಲಿ ಇಂದು ಎರಡಂಕೆಯ ಕೋವಿಡ್ 19 ಸೋಂಕು ಪತ್ತೆಯಾಗಿದೆ.
ರಾಜ್ಯದಲ್ಲಿ ಅತೀ ಹೆಚ್ಚಿನ ಕೋವಿಡ್ ಸೋಂಕಿತರೂ ಸಹ ಬೆಂಗಳೂರು ನಗರ ಜಿಲ್ಲೆಯಲ್ಲಿದ್ದಾರೆ. ಇಲ್ಲಿ ಒಟ್ಟು ಪಾಸಿಟಿವ್ ಪ್ರಕರಣಗಳ ಸಂಖ್ಯೆ 4555ಕ್ಕೆ ಏರಿಕೆಯಾಗಿದ್ದು, 543 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ ಹಾಗೂ 3916 ಸಕ್ರಿಯ ಪ್ರಕರಣಗಳಿವೆ. ಇಲ್ಲಿ ಕೋವಿಡ್ ಸಂಬಂಧಿತ 95 ಸಾವುಗಳು ಸಂಭವಿಸಿದೆ.