ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕೋವಿಡ್ 19 ಸೋಂಕು ನಿಯಂತ್ರಿಸಲು ಜಿಲ್ಲಾಡಳಿತ ಬಿಗಿ ಕ್ರಮ ಕೈಗೊಳ್ಳುತ್ತಿದೆ.
ಆದರೂ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕು ನಿಯಂತ್ರಿಸುವ ಲಕ್ಷಣಗಳು ಕಂಡು ಬರುತ್ತಿಲ್ಲ.
ಜಿಲ್ಲೆಯಲ್ಲಿಂದು ಒಂದೇ ದಿನ 40 ಮಂದಿಗೆ ಸೋಂಕು ಪಾಸಿಟಿವ್ ಬಂದಿದೆ ಆದರೆ, ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ 8008ಕ್ಕೇರಿದೆ.
ಜಿಲ್ಲೆಯ ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಗೌರಿಬಿದನೂರ, ಬಾಗೇಪಲ್ಲಿ, ಗುಡಿಬಂಡೆ ಹಾಗೂ ಚಿಂತಾಮಣಿ ತಾಲೂಕಿನಲ್ಲಿ ಕೋವಿಡ್ 19 ಸೋಂಕು ನಿಯಂತ್ರಿಸಲು ಜನರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸುವ ಜೊತೆಗೆ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರವನ್ನು ಕಾಯ್ದಕೊಳ್ಳದ ವ್ಯಕ್ತಿಗಳನ್ನು ಗುರುತಿಸಿ ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ದಂಡ ವಿಧಿಸುತ್ತಿದ್ದಾರೆ ಆದರೂ ಸೋಂಕು ಮಾತ್ರ ನಿಯಂತ್ರಣಕ್ಕೆ ಬರುತ್ತಿಲ್ಲ ಇನ್ನೂ ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸೋಂಕಿತರ ಪ್ರಮಾಣ ಕಡಿಮೆ ಇರುವುದು ಮಾತ್ರ ಸಮಧಾನಕರ ಸಂಗತಿ.
ಚಿಕ್ಕಬಳ್ಳಾಪುರ ತಾಲೂಕಿನಲ್ಲಿ 16 ಮಂದಿ ಸೇರಿದಂತೆ ಜಿಲ್ಲಾದ್ಯಂತ 40 ಮಂದಿಗೆ ಕೋವಿಡ್ 19 ಸೋಂಕು ಕಂಡು ಬಂದಿದೆ. ಒಟ್ಟು ಜಿಲ್ಲೆಯಲ್ಲಿ 8008 ಮಂದಿಗೆ ಕೋವಿಡ್ 19 ಸೋಂಕು ತಗಲಿದ್ದು ಅದರಲ್ಲಿಂದು 20 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 5949 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಜಿಲ್ಲೆಯಲ್ಲಿಂದು ಇಬ್ಬರು ಕೋವಿಡ್ 19 ಸೋಂಕಿನಿಂದ ಮೃತಪಟ್ಟಿದ್ದು ಜಿಲ್ಲೆಯಲ್ಲಿ ಮೃತರ ಸಂಖ್ಯೆ 88ಕ್ಕೇರಿದೆ.
ಚಿಕ್ಕಬಳ್ಳಾಪುರ ತಾಲೂಕಿನಲ್ಲಿ 16, ಬಾಗೇಪಲ್ಲಿ4, ಚಿಂತಾಮಣಿ 3, ಗೌರಿಬಿದನೂರು 14, ಗುಡಿಬಂಡೆ 0, ಶಿಡ್ಲಘಟ್ಟ ತಾಲೂಕಿನಲ್ಲಿ 3 ಮಂದಿಗೆ ಕೋವಿಡ್ 19 ಸೋಂಕು ಕಾಣಿಸಿಕೊಂಡಿದೆ ಜಿಲ್ಲೆಯಲ್ಲಿ 1970 ಸಕ್ರೀಯ ಪ್ರಕರಣಗಳಿದ್ದು ಸೋಂಕು ನಿಯಂತ್ರಿಸಲು ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಎಸ್ಪಿ ಮಿಥುನ್ ಕುಮಾರ್ ಜನರಲ್ಲಿ ವ್ಯಾಪಕವಾಗಿ ಅರಿವು ಮೂಡಿಸಿ ಮಾಸ್ಕ್ ಧರಿಸದೆ ಸಂಚರಿಸುವ ನಾಗರಿಕರ ಮೇಲೆ ದಂಡ ವಿಧಿಸಲು ಮುಂದಾಗಿದ್ದಾರೆ.