Advertisement

ಮಹಾರಾಷ್ಟ್ರ: ಒಂದು ಸಾವಿರ ದಾಟಿದ ಕೋವಿಡ್ 19 ವೈರಸ್ ಸೋಂಕಿತರ ಸಂಖ್ಯೆ, 40 ಮಂದಿ ಸಾವು

10:31 AM Apr 08, 2020 | Nagendra Trasi |

ಮುಂಬೈ: ವಾಣಿಜ್ಯ ನಗರಿ ಮುಂಬೈ ಕೋವಿಡ್ 19 ವೈರಸ್ ಗೆ ತತ್ತರಿಸತೊಡಗಿದ್ದು, ಇದೀಗ ಮಹಾರಾಷ್ಟ್ರದಲ್ಲಿ ಕೋವಿಡ್ 19 ಸೋಂಕು ಪೀಡಿತರ ಸಂಖ್ಯೆ ಒಂದು ಸಾವಿರ ದಾಟಿದ್ದು, ಕಳೆದ 24ಗಂಟೆಯಲ್ಲಿ 150 ಹೊಸ ಕೋವಿಡ್ 19 ಪ್ರಕರಣಗಳು ಪತ್ತೆಯಾಗಿರುವುದಾಗಿ ವರದಿ ತಿಳಿಸಿದೆ.

Advertisement

ಮಹಾರಾಷ್ಟ್ರದಲ್ಲಿ ಕೋವಿಡ್ 19 ಸೋಂಕು ಪೀಡಿತರ ಸಂಖ್ಯೆ 1,018ಕ್ಕೆ ಏರಿದೆ. ಮುಂಬೈಯಲ್ಲಿ ಕಳೆದ 24 ಗಂಟೆಯಲ್ಲಿ ಪತ್ತೆಯಾದ ಪ್ರಕರಣಗಳ ಸಂಖ್ಯೆ 116, ಪುಣೆಯಲ್ಲಿ 18, ನಗಾರ್ 03, ಬುಲ್ದಾನಾ 02, ಥಾಣೆ 02, ನಾಗ್ಪುರ್ 03, ರತ್ನಗಿರಿ 01, ಸಾಂಗ್ಲಿಯಲ್ಲಿ 01 ಕೋವಿಡ್ ಪ್ರಕರಣ ಪತ್ತೆಯಾಗಿರುವುದಾಗಿ ವರದಿ ವಿವರಿಸಿದೆ.

ಮಹಾರಾಷ್ಟ್ರದಲ್ಲಿ ಒಟ್ಟು ಶಂಕಿತ 3,027 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದರಲ್ಲಿ 590 ಕೋವಿಡ್ 19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈವರೆಗೆ 40 ಮಂದಿ ಸಾವನ್ನಪ್ಪಿದ್ದಾರೆ. 59 ಜನರು ಕೋವಿಡ್ ಪೀಡಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next