Advertisement

ಟೂರಿಸಂ ಸರ್ಕ್ನೂಟ್‌ ಪ್ರಸ್ತಾವನೆ ಸಿದ್ಧ

10:43 AM Dec 23, 2018 | |

ಶಿವಮೊಗ್ಗ: ಜಿಲ್ಲೆಯ ಎಲ್ಲಾ ಪ್ರಮುಖ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಭೇಟಿ ನೀಡಲು ಅನುಕೂಲವಾಗುವಂತಹ “ಟೂರಿಸಂ ಸರ್ಕ್ನೂಟ್‌’ ಪ್ರಸ್ತಾವನೆಯನ್ನು ಸಿದ್ಧಪಡಿಸಲಾಗಿದ್ದು, ಈ ಯೋಜನೆಯನ್ನು ಮುಂದಿನ ದಿನಗಳಲ್ಲಿ ಕಾರ್ಯರೂಪಕ್ಕೆ ತರಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಎ. ದಯಾನಂದ ತಿಳಿಸಿದರು.

Advertisement

ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಹಲವು ಪ್ರವಾಸಿ ತಾಣಗಳಿದ್ದು, ಇವುಗಳಿಗೆ ಭೇಟಿ ನೀಡಲು ಸಾಧ್ಯವಾಗುವಂತೆ ಮೂರು ಮಾರ್ಗಗಳನ್ನು ರೂಪಿಸಲಾಗಿದೆ. 

ಮೊದಲನೆಯದಾಗಿ ಶಿವಪ್ಪ ನಾಯಕ ಅರಮನೆ, ಸಕ್ರೆಬೈಲು, ಮಂಡಗದ್ದೆ, ಮೃಗವಧೆ, ಕುಪ್ಪಳ್ಳಿ, ಕುಂದಾದ್ರಿ ಹಾಗೂ ಆಗುಂಬೆ ಸರ್ಕ್ನೂಟ್‌. ಎರಡನೆಯದಾಗಿ ಕವಲೇದುರ್ಗ, ಅಂಬುತೀರ್ಥ, ಅಚ್ಚಕನ್ಯೆ ಜಲಪಾತ, ಹೊಂಬುಜ, ಕಲ್ಯಾಣಿ ಚೌಕ, ಕೊಡಚಾದ್ರಿ. ಮೂರನೇಯದಾಗಿ ಕೊಡಚಾದ್ರಿ, ಸಿಗಂದೂರು, ಇಕ್ಕೇರಿ, ಕೆಳದಿ ಮತ್ತು ಜೋಗ. ಪ್ರವಾಸಿಗರು ಮೂರು ದಿನಗಳಲ್ಲಿ ಈ ಎಲ್ಲಾ ಪ್ರವಾಸಿ ತಾಣಗಳನ್ನು ವೀಕ್ಷಿಸಲು ಸಾಧ್ಯವಿದ್ದು, ಈ ಪ್ರವಾಸಿ ತಾಣಗಳನ್ನು ಸಂಪರ್ಕಿಸುವ ರಸ್ತೆಗಳು ಹಾಗೂ ಪ್ರವಾಸಿಗರಿಗೆ ಕನಿಷ್ಟ ಮೂಲ ಸೌಕರ್ಯಗಳನ್ನು ಒದಗಿಸಲು ಪ್ರಸ್ತಾವನೆ ಸಿದ್ಧಪಡಿಸಲಾಗುವುದು ಎಂದರು. 

ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಅಪಾರ ಅವಕಾಶವಿದೆ. ಪ್ರವಾಸಿ ತಾಣಗಳ ಅಭಿವೃದ್ಧಿಯ ಮೂಲಕ ಸ್ಥಳೀಯವಾಗಿ ಉದ್ಯೋಗ ಸೃಷ್ಟಿ ಮಾಡಲು ಸಾಧ್ಯವಿದೆ. ಪ್ರಸ್ತುತ ಜಿಲ್ಲೆಯಲ್ಲಿ ಕೆಲವೇ ಪ್ರವಾಸಿ ತಾಣಗಳು ಜನಪ್ರಿಯವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. 

ಈ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರವಾಸಿ ತಾಣಗಳ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುತ್ತಿದೆ. ಈಗಾಗಲೇ ನೋಂದಣಿ ಮಾಡಿಕೊಂಡಿರುವ ಹೋಂಸ್ಟೇಗಳ ಸಹಕಾರದೊಂದಿಗೆ ಪ್ರವಾಸಿಗರ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಲಾಗುವುದು. ಇದೇ ರೀತಿ ಸ್ಥಳೀಯವಾಗಿ ಉತ್ಪತ್ತಿಯಾಗುವ ಜೇನುತುಪ್ಪ, ಬೆತ್ತದ ಉಪಕರಣಗಳು ಸೇರಿದಂತೆ ಸ್ಥಳೀಯ ಉತ್ಪನ್ನಗಳ ಮಾರಾಟ ಕೇಂದ್ರಗಳ ಆರಂಭಕ್ಕೆ ನೆರವು ನೀಡಲು ಉದ್ದೇಶಿಸಲಾಗಿದೆ ಎಂದರು.

Advertisement

ವಿಧಾನ ಪರಿಷತ್‌ ಸದಸ್ಯ ಆಯನೂರು ಮಂಜುನಾಥ ಮಾತನಾಡಿ, ಜಿಲ್ಲೆಯಲ್ಲಿ ಚಾರಣ ಸೇರಿದಂತೆ ಸಾಹಸ ಪ್ರವಾಸೋದ್ಯಮಕ್ಕೆ ಅವಕಾಶವಿದೆ. ಇದೇ ರೀತಿ ಇಕೋ ಟೂರಿಸಂ, ಶೈಕ್ಷಣಿಕ ಟೂರಿಸಂ ಸರ್ಕ್ನೂಟ್‌ ಗಳನ್ನು ಸಹ ಗುರುತಿಸಿ ಪ್ರಚಾರ ಕಾರ್ಯ ಕೈಗೊಳ್ಳಬೇಕು. ಇದಕ್ಕಾಗಿ ಎಲ್ಲಾ ಮಾಹಿತಿಗಳನ್ನು ಒಳಗೊಂಡ ಪ್ರತ್ಯೇಕ ವೆಬ್‌ಸೈಟ್‌ ಸಿದ್ಧಪಡಿಸುವ ಅಗತ್ಯವಿದೆ ಎಂದು ಹೇಳಿದರು.  ಜಿಪಂ ಅಧ್ಯಕ್ಷೆ ಜ್ಯೋತಿ ಎಸ್‌. ಕುಮಾರ್‌, ವಿವಿಧ ಇಲಾಖೆ ಅಧಿಕಾರಿಗಳು, ಸಂಘ- ಸಂಸ್ಥೆಗಳ ಪ್ರತಿನಿಧಿಗಳು ಸಭೆಯಲ್ಲಿ ಇದ್ದರು.  

Advertisement

Udayavani is now on Telegram. Click here to join our channel and stay updated with the latest news.

Next