ಯಡಿಯೂರಪ್ಪ ತಿಳಿಸಿದರು.
Advertisement
ಸೋಮವಾರ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗೆ ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಿಂದ ಆನ್‌ಲೈನ್ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಶಿವಮೊಗ್ಗ ತಾಲೂಕಿನ ಸೋಗಾನೆ ಗ್ರಾಮದಲ್ಲಿ 220 ಕೋಟಿ ರೂ. ವೆಚ್ಚದಲ್ಲಿ 662.38 ಎಕರೆ ಪ್ರದೇಶದಲ್ಲಿ ಸುಸಜ್ಜಿತ ವಿಮಾನ ನಿಲ್ದಾಣ ನಿರ್ಮಿಸಲಾಗುತ್ತಿದೆ. ಕಾಮಗಾರಿಯನ್ನು ಎರಡು ಹಂತಗಳಲ್ಲಿ ಕೈಗೊಳ್ಳಲಾಗುತ್ತಿದ್ದು, ಒಂದು ವರ್ಷದಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಗುಣಮಟ್ಟದಲ್ಲಿ ಯಾವುದೇ ರಾಜಿಯಿಲ್ಲದೆ ನಿಗದಿತ ಸಮಯದ ಒಳಗಾಗಿ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಳಿಸಬೇಕು. ಉಡಾನ್ ಯೋಜನೆಯಿಂದಾಗಿ ಜನಸಾಮಾನ್ಯರೂ ವಿಮಾನಯಾನ ಕೈಗೊಳ್ಳಬಹುದಾದ ವಾತಾವರಣವಿದೆ ಎಂದು ಹೇಳಿದರು.
Related Articles
ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.
Advertisement
ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ, ಪ್ರಸನ್ನ ಕುಮಾರ್ ಮಾತನಾಡಿದರು. ಜಿಲ್ಲಾ ಧಿಕಾರಿ ಕೆ.ಬಿ. ಶಿವಕುಮಾರ್ ಸ್ವಾಗತಿಸಿದರು.ಶಾಸಕರಾದ ಅರಗ ಜ್ಞಾನೇಂದ್ರ, ಅಶೋಕ ನಾಯ್ಕ, ಕುಮಾರ ಬಂಗಾರಪ್ಪ, ಹರತಾಳು ಹಾಲಪ್ಪ, ಜಿಪಂ ಅಧ್ಯಕ್ಷೆ ಜ್ಯೋತಿ ಎಸ್. ಕುಮಾರ್, ಮೇಯರ್
ಸುವರ್ಣಾ ಶಂಕರ್ ಮತ್ತಿತರರು ಇದ್ದರು. ಕುರ್ಚಿ ಸಿಗದೆ ಸಿಟ್ಟಾದ ಶಾಸಕರು
ವಿಮಾನ ನಿಲ್ದಾಣ ಕಾಮಗಾರಿ ಶಂಕುಸ್ಥಾಪನೆ ವೇಳೆ, ಶಾಸಕರೊಬ್ಬರಿಗೆ ವೇದಿಕೆ ಮೇಲೆ ಚೇರ್ ಸಿಗದೆ ಸಿಟ್ಟಾದ ಘಟನೆ ನಡೆಯಿತು. ವೇದಿಕೆಯಿಂದಲೇ ಕೆಳಗಿಳಿಯಲು ಹೊರಟವರನ್ನು ಸಚಿವರು, ಸಂಸದರು ಸಮಾಧಾನಪಡಿಸಿದರು. ಸೋಗಾನೆ ಗ್ರಾಮದಲ್ಲಿ ವಿಮಾನ ನಿಲ್ದಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು. ಈ ವೇಳೆ ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನ ಕುಮಾರ್ ಅವರಿಗೆ ಚೇರ್ ವ್ಯವಸ್ಥೆ ಮಾಡಿರಿಲಿಲ್ಲ. ವೇದಿಕೆ ಹತ್ತಿದ್ದ ಅವರು ಚೇರ್ ಸಿಗದೆ ಸಿಟ್ಟಾದರು. ತಾವು ಕೆಳಗಿಳಿಯುವುದಾಗಿ ಹೇಳಿ ಹೊರಟರು. ಆಗ ಸಮಾಧಾನಪಡಿಸಿದ ಸಚಿವ ಈಶ್ವರಪ್ಪ, ಸಂಸದ ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಸೀಟ್ ವ್ಯವಸ್ಥೆ ಮಾಡಿದರು. ಶಾಸಕರಾದ ಕುಮಾರ್ ಬಂಗಾರಪ್ಪ, ಆರಗ ಜ್ಞಾನೇಂದ್ರ ಮತ್ತು ಹರತಾಳು ಹಾಲಪ್ಪ ಅವರು ಕಾರ್ಯಕ್ರಮಕ್ಕೆ ತಡವಾಗಿ ಬಂದರು. ಅವರಿಗೂ ಸೀಟ್ ವ್ಯವಸ್ಥೆ ಮಾಡುವುದು ಕಷ್ಟವಾಯಿತು. ಆರಗ ಜ್ಞಾನೇಂದ್ರ ಅವರು ವೇದಿಕೆಯ ಮೂಲೆಯಲ್ಲಿ ಕುಳಿತರು. ಕುಮಾರ್ ಬಂಗಾರಪ್ಪ ಮತ್ತು ಹರತಾಳು ಹಾಲಪ್ಪ ಅವರಿಗೆ ವೇದಿಕೆ ಮಧ್ಯ ಭಾಗದಲ್ಲಿ ಚೇರ್ ವ್ಯವಸ್ಥೆ ಆಯಿತು. ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಅವರಿಗೆ ವೇದಿಕೆ ಮೇಲೆ ಕುರ್ಚಿ ವ್ಯವಸ್ಥೆ ಮಾಡಲಾಗಿತ್ತು. ಪ್ರೊಟೊಕಾಲ್ ಪ್ರಕಾರ ಅವರು ವೇದಿಕೆ ಮೇಲೆ ಕೂರುವಂತಿಲ್ಲ. ಸರ್ಕಾರಿ ಕಾರ್ಯಕ್ರಮದಲ್ಲಿ ಜನಪ್ರತಿನಿಧಿ ಗಳು, ಅ ಧಿಕಾರಿಗಳು ಮಾತ್ರ ವೇದಿಕೆ ಮೇಲಿರಬೇಕು ಎಂಬ ನಿಯಮವಿದೆ. ಆದರೆ ಇದನ್ನು ವಿರೋಧಿ ಸಿ ಅವರಿಗೆ ಸೀಟ್ ವ್ಯವಸ್ಥೆ ಮಾಡಿದ್ದು ಪ್ರಶ್ನಾರ್ಹವಾಗಿದೆ. ಇದರಿಂದಾಗಿ ಶಾಸಕರೊಬ್ಬರಿಗೆ ಚೇರ್ ಸಿಗದಂತಾಗಿ ಮುಜುಗರಕ್ಕೀಡಾದರು. ಕಾಮಗಾರಿ ವಿವರ
ಕಾಮಗಾರಿಯನ್ನು ಎರಡು ಹಂತಗಳಲ್ಲಿ ಕೈಗೊಳ್ಳಲಾಗುತ್ತಿದ್ದು, ಪ್ರಥಮ ಹಂತದಲ್ಲಿ ರನ್ ವೇ, ಟ್ಯಾಕ್ಸಿ ವೇ, ಏಪ್ರಾನ್, ಅಪ್ರೋಚ್ ರಸ್ತೆ, ಪೆರಿಫೆರಲ್ ರಸ್ತೆ ಹಾಗೂ ಕಾಂಪೌಂಡ್ ಗೋಡೆ ನಿರ್ಮಾಣ ಕೈಗೊಳ್ಳಲಾಗಿದೆ. ಎರಡನೇ ಹಂತದಲ್ಲಿ ಟರ್ಮಿನಲ್ ಕಟ್ಟಡ, ಎಟಿಸಿ ಟವರ್, ಫೈರ್ ಸ್ಟೇಷನ್ ಕಟ್ಟಡ ಇತ್ಯಾದಿ ಕೈಗೊಳ್ಳಲಾಗುವುದು.