ಪಣಜಿ : ಕೋವಿಡ್ ಮಹಾಮಾರಿಯಿಂದಾಗಿ ಗೋವಾದ ಪ್ರವಾಸೋದ್ಯಮ ಕ್ಷೇತ್ರದ ಮೇಲೆ ಗಂಭೀರ ಪರಿಣಾಮವುಂಟಾಗಿದೆ. ಪ್ರವಾಸೋದ್ಯಮವು ಗೋವಾಕ್ಕೆ ಪ್ರಮುಖ ಆರ್ಥಿಕತೆಯ ಆಧಾರವಾಗಿದೆ. ಈ ಹಿನ್ನೆಲೆಯಲ್ಲಿ ಶೀಘ್ರದಲ್ಲಿಯೇ ಗೋವಾ ಪ್ರವಾಸೋದ್ಯಮಕ್ಕೆ ಚಾಲನೆ ನೀಡಲಾಗುವುದು ಎಂದು ಕೇಂದ್ರ ಸಚಿವ ಶ್ರೀಪಾದ ನಾಯ್ಕ ಹೇಳಿದ್ದಾರೆ.
ಇದನ್ನೂ ಓದಿ : ಲಕ್ಕಿ ಸ್ಕೀಮ್ ಹೆಸರಿನಲ್ಲಿ ಅಮಾಯಕ ಹಳ್ಳಿಗರಿಗೆ ಲಕ್ಷಾಂತರ ರೂಪಾಯಿ ನಾಮ ಹಾಕಿದ ಗ್ಯಾಂಗ್…!
ಮಡಗಾಂವ್ ನಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ನಂತರ ಪತ್ರಿಕಾ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು, ಕೋವಿಡ್ ಮಹಾಮಾರಿಯ ಸಂದರ್ಭದಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಪ್ರವಾಸೋದ್ಯಮ ಕ್ಷೇತ್ರದ ಉದ್ಯೋಗಸ್ಥರಿಗೆ ಕೇಂದ್ರ ಸರ್ಕಾರದ ಯೋಜನೆಗಳ ಅಡಿಯಲ್ಲಿ ಆರ್ಥಿಕ ಸಹಾಯ ನೀಡಲಾಗುವುದು ಎಂದವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇನ್ನು, ನಾನು ಕೇಂದ್ರ ಆಯುಷ್ ಮಂತ್ರಿಯಾಗಿದ್ದ ಸಂದರ್ಭದಲ್ಲಿ ಆರಂಭಿಸಿದ ಯೋಜನೆಗಳಿಗೆ ಯಾವುದಕ್ಕೂ ಯಾವುದೇ ಅಡಚಣೆ ಬರುವುದಿಲ್ಲ ಎಂದು ಅವರು ಭರವಸೆ ವ್ಯಕ್ತ ಪಡಿಸಿದ್ದಾರೆ.
ಇದನ್ನೂ ಓದಿ : ಕಾಪು ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಡಿ ಒದಗಿಸಿದ 3 ಆ್ಯಂಬುಲೆನ್ಸ್ ಗಳ ಲೋಕಾರ್ಪಣೆ