Advertisement

ಶೃಂಗೇರಿ ಶಾರದಾ ಪೀಠಕ್ಕೆ ಪ್ರವಾಸಿಗರ ದಂಡು

03:23 PM Dec 26, 2021 | Team Udayavani |

ಶೃಂಗೇರಿ: ಒಮಿಕ್ರಾನ್‌ ಆತಂಕದ ನಡುವೆಯೂ ಕ್ರಿಸ್‌ಮಸ್‌ ರಜೆ ಹಾಗೂ ವರ್ಷಾಂತ್ಯದ ಹಿನ್ನೆಲೆಯಲ್ಲಿ ಶ್ರೀ ಶಾರದಾ ಪೀಠಕ್ಕೆ ಪ್ರವಾಸಿಗರ ದಂಡು ಹರಿದು ಬಂದಿದೆ. ಪಟ್ಟಣದ ವಾಹನ ನಿಲುಗಡೆ ಸ್ಥಳವಾದ ಗಾಂಧಿ ಮೈದಾನದಲ್ಲಿ ಪ್ರವಾಸಿ ವಾಹನದ ಸಾಲು ಹಾಗೂ ಶ್ರೀಮಠದ ಎದುರು ಭಕ್ತಾದಿಗಳ ಸಾಲು ಕಂಡು ಬಂದಿದೆ. ಕೊರೊನಾ ನಂತರ ಪ್ರವಾಸೋದ್ಯಮ ಸಂಪೂರ್ಣ
ನೆಲಕಚ್ಚಿದ್ದು, ಇದೀಗ ಪ್ರವಾಸಿಗರು ಭಾರೀ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ಪ್ರವಾಸೋದ್ಯಮದಲ್ಲಿ ಚೇತರಿಕೆ ಕಂಡು ಬಂದಿದೆ. ಗಾಂಧಿ  ಮೈದಾನದಲ್ಲಿ ವಾಹನ ನಿಲುಗಡೆ ಅಲ್ಲದೇ ಪಟ್ಟಣದ ಎಲ್ಲಾ ರಸ್ತೆಯಲ್ಲೂ ಪ್ರವಾಸಿಗರ ವಾಹನ ನಿಲುಗಡೆಯಾಗಿದೆ.

Advertisement

ಪಟ್ಟಣದ ವಸತಿ ಗೃಹಗಳು, ಹೋಂ ಸ್ಟೇಗಳಿಗೆ ಹೆಚ್ಚಿನ ಬೇಡಿಕೆ ಬಂದಿದ್ದು, ಹೋಂ ಸ್ಟೇಗಳನ್ನು ಮುಂಗಡವಾಗಿ ಕಾಯ್ದಿರಿಸಲಾಗಿದೆ. ಶ್ರೀಮಠದಲ್ಲಿ ಮಧ್ಯಾಹ್ನ ಮತ್ತು ರಾತ್ರಿ ಊಟದ ವ್ಯವಸ್ಥೆ
ಇದ್ದು, ಸಾವಿರಾರು ಜನರು ಊಟಕ್ಕೆ ಆಗಮಿಸುತ್ತಿದ್ದಾರೆ. ಭಕ್ತರಿಗೆ ಎರಡು ಲಸಿಕೆ ಪ್ರಮಾಣ ಪತ್ರ ಕಡ್ಡಾಯಗೊಳಿಸಲಾಗಿದೆ. ಜಗದ್ಗುರುಗಳು ವಾಸ್ತವ್ಯ ಇರುವ ಗುರುಭವನಕ್ಕೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.

ಗುರುದರ್ಶನ ಬೆಳಗ್ಗೆ 11 ರಿಂದ ಮಧ್ಯಾಹ್ನದವರೆಗೆ ಮಾತ್ರ ಇದೆ. ಶ್ರೀಮಠದ ಎದುರಿನ ಶ್ರೀ ಚಂದ್ರಶೇಖರ ಭಾರತೀ ಸಭಾಂಗಣದಲ್ಲಿ ಮಕ್ಕಳ ಅಕ್ಷರಭ್ಯಾಸವೂ ನಡೆಯುತ್ತಿದ್ದು,ನೂರಾರು ಮಕ್ಕಳಿಗೆ ಅಕ್ಷರಾಭ್ಯಾಸ ನಡೆಯುತ್ತಿದೆ.

ಇದನ್ನೂ ಓದಿ : ನೈಟ್ ಕರ್ಪ್ಯೂ ಆದೇಶ ಪುನರ್ ಪರಿಶೀಲನೆ ಇಲ್ಲ: ಸಿಎಂ ಬೊಮ್ಮಾಯಿ ಸ್ಪಷ್ಟನೆ

Advertisement

Udayavani is now on Telegram. Click here to join our channel and stay updated with the latest news.

Next