Advertisement
ಇನ್ನೂಕೆಲ ಪ್ರವಾಸಿಗರು ರಾಜರೋಷವಾಗಿ ಕಾರು ಮೇಲೆ ಕುಳಿತು ಮದ್ಯಪಾನ ಮಾಡಿ ಮೋಜು ಮಸ್ತಿಯಲ್ಲಿ ತೊಡಗಿಸಿಕೊಂಡು ಇನ್ನಿತರೆ ಪ್ರವಾಸಿಗರಿಗೆ ಕಿರಿಕಿರಿ ಉಂಟು ಮಾಡಿದ್ದಾರೆ.
Related Articles
Advertisement
ಪ್ರವಾಸಿಗರಿಗೆ ದಂಡ: ನಂದಿಗಿರಿಧಾಮದಲ್ಲಿ ಸಾಮಾಜಿಕ ಅಂತರಕ್ಕೆ ತಿಲಾಂಜಲಿ ಇಟ್ಟಿದ್ದಾರೆ ಎಂದು ವರದಿಗಳು ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿದ್ದಂತೆ ಎಚ್ಚೆತ್ತುಕೊಂಡ ಅಧಿಕಾರಿಗಳು ಕೂಡಲೇ ಕಾರ್ಯ ಪ್ರವೃತ್ತರಾಗಿ ನಂದಿಗಿರಿಧಾಮದಲ್ಲಿ ಮಾಸ್ಕ್ ಧರಿಸದೆ ನಿರ್ಲಕ್ಷ್ಯ ವಹಿಸಿದ ಪ್ರವಾಸಿಗರಿಗೆ ತಲಾ 500 ರೂ. ದಂಡ ವಿಧಿಸಿ ಶಾಕ್ ನೀಡಿದರು. ಕೆಲ ಪ್ರವಾಸಿಗರು ದಂಡ ವಿಧಿಸಿದರತೂ ಅದೇ ಚಾಳಿ ಮುಂದುವರಿಸಿದ್ದರು.
ತೋಟಗಾರಿಕೆಕಾರ್ಯದರ್ಶಿ ಗರಂ : ಜಿಲ್ಲೆಯ ನಂದಿಗಿರಿಧಾಮಕ್ಕೆ ಭಾನುವಾರ ರಾಜ್ಯ ತೋಟಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರಕುಮಾರ್ ಕಠಾರಿಯಾ ಭೇಟಿ ನೀಡಿ ಸ್ವತ್ಛತೆ ಕಾಪಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ತಾಕೀತು ಮಾಡಿದರಲ್ಲದೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದಿರುವ ಕುರಿತು ಅಸಮಾಧಾನ ವ್ಯಕ್ತಪಡಿಸಿದರು. ಕೂಡಲೇ ಅಗತ್ಯ ಸಿಬ್ಬಂದಿ ನಿಯೋಜಿಸಿ ಮಾಸ್ಕ್ ಇಲ್ಲದೇ ಬರುವ ಪ್ರವಾಸಿಗರಿಗೆ ದಂಡ ವಿಧಿಸಿ ಸಾಮಾನ್ಯ ಪ್ರವಾಸಿಗರಿಗೆ ತೊಂದರೆ ಆಗದಂತೆ ಎಚ್ಚರ ವಹಿಸಬೇಕೆಂದು ಸೂಚನೆ ನೀಡಿದರು. ಇದೇ ವೇಳೆ ಜಿಲ್ಲಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.
ನಿಯಮ ಉಲ್ಲಂಘನೆ: ವ್ಯಕ್ತಿಗಳ ವಿರುದ್ಧಕ್ರಮ : ಈ ಕುರಿತು ಜಿಲ್ಲಾ ಎಸ್ಪಿ ಮಿಥುನ್ ಕುಮಾರ್ ಅವರನ್ನು ಉದಯವಾಣಿ ಸಂಪರ್ಕಿಸಿದಾಗ, ಪ್ರವಾಸಿಗರಿಗೆ ಅನುಕೂಲ ಕಲ್ಪಿಸುವ ಸಲುವಾಗಿ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ನಂದಿಗಿರಿಧಾಮದಲ್ಲಿ ಸಾರ್ವಜನಿಕರಿಗೆ ಪ್ರವೇಶ ಕಲ್ಪಿಸಲಾಗಿದೆ. ಮಾಸ್ಕ್ ಧರಿಸದೆ ನಿರ್ಲಕ್ಷ್ಯ ಮಾಡುತ್ತಿರುವ ನಾಗರಿಕರಿಗೆ ನಗರಸಭೆ, ಪುರಸಭೆ ಅಕಾರಿಗಳು ದಂಡ ವಿಧಿಸುತ್ತಿದ್ದಾರೆ. ಪ್ರವಾಸಿಗರು ಸಹ ತಮ್ಮ ಆರೋಗ್ಯದ ಕುರಿತು ಚಿಂತನೆ ಮಾಡಿ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕಅಂತರ ಕಾಪಾಡಿಕೊಳ್ಳಬೇಕು. ರಸ್ತೆಯಲ್ಲಿ ಕಾರ್ ನಿಲ್ಲಿಸಿ ಮದ್ಯಪಾನ ಮಾಡಿರುವುದು ದೊಡ್ಡಬಳ್ಳಾಪುರ ವ್ಯಾಪ್ತಿಗೆ ಬರುತ್ತದೆ. ಬೆಂಗಳೂರು ಗ್ರಾಮಾಂತರ ಎಸ್‌ಪಿ ಜತೆ ಮಾತುಕತೆ ನಡೆಸಿದ್ದೇನೆ. ನಿಯಮ ಉಲಂಘಿಸಿರುವ ವ್ಯಕ್ತಿಗಳ ಮೇಲೆಕ್ರಮ ಜರುಗಿಸುತ್ತೇವೆ ಎಂದು ತಿಳಿಸಿದರು.