Advertisement

Shimoga: ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿಗರ ಕಾರು ಪಲ್ಟಿ

02:57 PM Oct 13, 2024 | keerthan |

ಶಿವಮೊಗ್ಗ: ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿಗರ ಕಾರು ಪಲ್ಟಿಯಾದ ಘಟನೆ ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪದ ಕೆರೆಕೋಡಿ ಬಳಿ ರವಿವಾರ (ಅ.13) ನಡೆದಿದೆ.

Advertisement

ಚಾಲಕನ ನಿಯಂತ್ರಣ ತಪ್ಪಿ ಭತ್ತದ ಗದ್ದೆಗೆ ಕಾರು ಪಲ್ಟಿಯಾಗಿದೆ. ಬೆಂಗಳೂರಿನ ನೆಲಮಂಗಲ ಮೂಲದ ಚಂದನ್‌ (26) ಮೃತಪಟ್ಟಿದ್ದಾನೆ.

ಬೆಂಗಳೂರಿನಿಂದ ಯುವಕರ ತಂಡ ಸಿಗಂದೂರಿಗೆ ಪ್ರವಾಸಕ್ಕೆ ಬಂದಿದ್ದರು. ಕೊಡಗು ಮೂಲದ ನಂದನ್‌, ಕೋಲಾರದ ಕೋದಂಡ, ಹಾಸನದ ಭರತ್‌, ಮಂಡ್ಯ ಜಿಲ್ಲೆಯ ಯೋಗೇಶ್‌ ಎಂಬುವವರಿಗೆ ಗಂಭೀರ ಗಾಯವಾಗಿದೆ.

ಸ್ಥಳಕ್ಕೆ ಕುಂಸಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next