Advertisement

ಗೋವಾ: ದಿನ ಕಳೆದಂತೆ ಹೆಚ್ಚಾಗುತ್ತಿದೆ ಪ್ರವಾಸಿಗರ ಸಂಖ್ಯೆ

04:36 PM Oct 16, 2021 | Team Udayavani |

ಪಣಜಿ: ಗೋವಾ ರಾಜ್ಯದಲ್ಲಿ ಅಕ್ಟೋಬರ್ 1 ರಿಂದ ಪ್ರವಾಸೋದ್ಯಮ ಸೀಸನ್ ಆರಂಭಗೊಂಡಿರುವ ಹಿನ್ನೆಲೆಯಲ್ಲಿ ಇದೀಗ ಗೋವಾದ ಪ್ರಸಿದ್ಧ ಕಲಂಗುಟ್ ಬೀಚ್ ಪ್ರವಾಸಿಗರಿಂದ ಭರ್ತಿಯಾಗುತ್ತಿದೆ. ಗೋವಾದ ಕಲಂಗುಟ್, ಬಾಗಾ, ಶಿಕೇರಿ, ವಾಗಾತೋರ್, ಮೀರಾಮಾರ್ ಬೀಚ್‍ಗಳಲ್ಲಿ ಪ್ರತಿದಿನ ಹೆಚ್ಚಿನ ಪ್ರವಾಸಿಗರ ಗರ್ದಿ ಕಂಡುಬರುತ್ತಿದೆ.

Advertisement

ಪ್ರವಾಸಿ ಸೀಸನ್ ಹಿನ್ನೆಲೆಯಲ್ಲಿ ಗೋವಾಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಗಣೇಶ ಚತುರ್ಥಿಯ ನಂತರ ಗೋವಾದಲ್ಲಿ ಕೋವಿಡ್ ನಿಯಂತ್ರಣಕ್ಕೆ ಬಂದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೇರಿದ್ದ ಕೆಲ ನಿರ್ಬಂಧಗಳನ್ನು ಸರ್ಕಾರ ಹಿಂತೆಗೆದುಕೊಳ್ಳುತ್ತಿದ್ದಂತೆಯೇ ರಾಜ್ಯಕ್ಕೆ ಆಗಮಿಸುವ ಪ್ರವಾಸಿಗರ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಸದ್ಯ ಗೋವಾದ ಎಲ್ಲ ಬೀಚ್‍ಗಳಲ್ಲಿ ಬಾರ್ ಮತ್ತು ರೆಸ್ಟೊರೆಂಟ್ (ಶಾಕ್ಸ) ನಿರ್ಮಾಣ ಮಾಡಲಾಗುತ್ತಿದೆ. ಸರ್ಕಾರವು ಈ ಶಾಕ್ಸ ಮಾಲೀಕರಿಗೆ ಶೇ 50 ರಷ್ಟು ಅನುದಾನ ನೀಡುವುದಾಗಿ ಘೋಷಿಸಿರುವ ಹಿನ್ನೆಲೆಯಲ್ಲಿ ಈ ಉದ್ಯೋಗಸ್ಥರಲ್ಲಿ ಹೆಚ್ಚಿನ ಉತ್ಸಾಹ ನಿರ್ಮಾಣವಾಗಿದೆ.

ಗೋವಾಕ್ಕೆ ಇದೀಗ ವಿದೇಶಿ ಚಾರ್ಟರ್ ವಿಮಾನಗಳು ಆಗಮಿಸಲಿರುವುದರಿಂದ ವಿದೇಶಿ ಪ್ರವಾಸಿಗರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲಿದ್ದಾರೆ ಎಂದು ಪ್ರವಾಸೋದ್ಯಮ ಅವಲಂಭಿತ ಉದ್ಯೋಗಸ್ಥರು ಆಶಯ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next