Advertisement
ರಾಜ್ಯ ಬಿಜೆಪಿ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ, ನರೇಂದ್ರ ಮೋದಿಯವರು ಮತ್ತೂಮ್ಮೆ ಪ್ರಧಾನಿಯಾಗಬೇಕೆಂಬ ಆಶಯದೊಂದಿಗೆ ಪಕ್ಷ ಸಂಘಟನೆಗೆ ಒತ್ತು ನೀಡಲಾಗಿದೆ.
Related Articles
ಎರಡೂ ತಂಡಗಳು ತಲಾ 14 ಲೋಕಸಭಾ ಕ್ಷೇತ್ರಗಳಲ್ಲಿ ಪೂರ್ವಭಾವಿ ಸಭೆಗಳನ್ನು ನಡೆಸಲಿವೆ. ಲೋಕಸಭಾ ಕ್ಷೇತ್ರದಲ್ಲಿನ ರಾಜ್ಯ ಒಬಿಸಿ ಕಾರ್ಯಕಾರಿಣಿ ಸಮಿತಿಯ ಸದಸ್ಯರು, ಜಿಲ್ಲಾ ಮತ್ತು ಮಂಡಲ ಕಾರ್ಯಕಾರಿಣಿ ಸಮಿತಿ ಸದಸ್ಯರು, ಕ್ಷೇತ್ರದಲ್ಲಿನ ಹಾಲಿ, ಮಾಜಿ ಶಾಸಕರು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಹಿಂದುಳಿದ ವರ್ಗಗಳ ಎಲ್ಲ ಜಾತಿಯ ಪ್ರಭಾವಿ ನಾಯಕರು ಹಾಗೂ ಕ್ಷೇತ್ರ ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಹಾಗೆಯೇ ಫೆಬ್ರವರಿ 27ರಂದು ರಾಜ್ಯಾಧ್ಯಕ್ಷರಾದ ಬಿ.ಎಸ್.ಯಡಿಯೂರಪ್ಪ ಅವರ ಹುಟ್ಟುಹಬ್ಬ ದಿನದಂದು ರಾಜ್ಯದ ಎಲ್ಲ ಭಾಗಗಳಿಂದ ಹಿಂದುಳಿದ ವರ್ಗಗಳ ಸಮುದಾಯದವರನ್ನು ಒಟ್ಟುಗೂಡಿಸಿಬೃಹತ್ ಸಮ್ಮೇಳನ ನಡೆಸಲಾಗುವುದು ಎಂದು ಹೇಳಿದರು.
Advertisement
ಪಾಟ್ನಾದಲ್ಲಿ ಒಬಿಸಿ ಸಮ್ಮೇಳನಫೆ. 16 ಹಾಗೂ 17ರಂದು ಪಾಟ್ನಾದಲ್ಲಿ ಒಬಿಸಿ ಸಮ್ಮೇಳನ ನಡೆಯಲಿದೆ. ಆ ಸಮ್ಮೇಳನದಲ್ಲಿ ರಾಜ್ಯದಿಂದ ಹಿಂದುಳಿದ ವರ್ಗಗಳಿಗೆ ಸೇರಿದ ಮಂದಿ ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಆ ಮೂಲಕ ಹಿಂದುಳಿದ ವರ್ಗಗಳ ಸಂಘಟನೆಗೆ ಒತ್ತು ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಸಮ್ಮೇಳನ ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗೆಲ್ಲುವ ಸಾಧ್ಯತೆ ಇರುವ ಕ್ಷೇತ್ರಗಳ ಬಗ್ಗೆಯೂ ಪ್ರವಾಸದ ವೇಳೆ ಮಾಹಿತಿ ಪಡೆಯಲಾಗುವುದು. ಆ ಕುರಿತು ರಾಜ್ಯಾಧ್ಯಕ್ಷರು ಹಾಗೂ ಹೈಕಮಾಂಡ್‌ನೊಂದಿಗೆ ಚರ್ಚಿಸಿ ಹಿಂದುಳಿದ ವರ್ಗಗಳಿಗೆ ಹೆಚ್ಚಿನ ಸ್ಥಾನ ನೀಡುವಂತೆ ಕೋರಲಾಗುವುದು ಎಂದು ತಿಳಿಸಿದರು. ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯನಾಯ್ಡು ಇತರರು ಉಪಸ್ಥತರಿದ್ದರು. ತಂಡ- 1
ಬಿ.ಜೆ.ಪುಟ್ಟಸ್ವಾಮಿ ನೇತೃತ್ವದ ತಂಡದಲ್ಲಿ ಪ್ರಮುಖರು: ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಶಾಸಕರಾದ ಎಂ.ಆರ್.ಹುಲಿನಾಯ್ಕರ್, ಅಶೋಕ್ ಕಾಟೆÌ ಇತರರು. ಪ್ರವಾಸ ಕೈಗೊಳ್ಳಲಿರುವ ಕ್ಷೇತ್ರಗಳು: ಉಸ್ತುವಾರಿ- ರಾಮು ವಿ. ನಾಯ್ಕರ್- ಚಿಕ್ಕೋಡಿ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಹಾವೇರಿ, ಚಿತ್ರದುರ್ಗ, ಉಡುಪಿ- ಚಿಕ್ಕಮಗಳೂರು. ಉಸ್ತುವಾರಿ- ಪಿ.ತಿಪ್ಪೇಸ್ವಾಮಿ- ತುಮಕೂರು, ದಕ್ಷಿಣ ಕನ್ನಡ, ಹಾಸನ, ಮೈಸೂರು, ಚಾಮರಾಜನಗರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ. ತಂಡ- 2
ಕೆ.ಎಸ್.ಈಶ್ವರಪ್ಪ ನೇತೃತ್ವದ ತಂಡದಲ್ಲಿ ಪ್ರಮುಖರು: ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯನಾಯ್ಡು, ಶಾಸಕ ರಘುನಾಥರಾವ್ ಮಲ್ಕಾಪುರೆ, ಮಾಜಿ ಸಚಿವ ಬಾಬುರಾವ್ ಚಿಂಚನಸೂರು, ಮಾಜಿ ಶಾಸಕ ಎನ್.ಶಂಕ್ರಪ್ಪ, ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಉಪಾಧ್ಯಕ್ಷೆ ಪ್ರಮೀಳಾ ನಾಯ್ಡು ಇತರರು. ಪ್ರವಾಸ ಕೈಗೊಳ್ಳಲಿರುವ ಕ್ಷೇತ್ರಗಳು: ಉಸ್ತುವಾರಿ- ಬೇಲೂರು ಲಕ್ಷ್ಮಣ- ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಬಳ್ಳಾರಿ. ಉಸ್ತುವಾರಿ- ವರ್ತೂರು ಶ್ರೀಧರ್- ದಾವಣಗೆರೆ, ಶಿವಮೊಗ್ಗ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ಉತ್ತರ.