Advertisement
ರೋಸ್ಟರ್ ಪದ್ಧತಿ ಪ್ರಕಾರ ಪುರಸಭೆಯ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಉಳಿಯುವ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನು ಸಾಮಾನ್ಯ ಮಹಿಳೆಗೆ ಮೀಸಲಾಗಿರುವ ಉಪಾಧ್ಯಕ್ಷ ಸ್ಥಾನ ಬದಲಾವಣೆ ಆಗುವ ಸಾಧ್ಯತೆ ಇದ್ದು, ಏನಾಗುತ್ತೆ ಎಂಬುದನ್ನು ಮುಂದಿನ ಆದೇಶ ದವರೆಗೂ ಕಾದು ನೋಡಬೇಕಿದೆ.
Related Articles
Advertisement
ಮೂರು ಬಾರಿ ಮೀಸಲು ಬದಲಾವಣೆ: ಇಲ್ಲಿನ ಪುರಸಭೆ ಸದಸ್ಯ ಸ್ಥಾನಕ್ಕೆ 2018ರ ಆಗಸ್ಟ್‌ನಲ್ಲಿ ಚುನಾವಣೆ ನಡೆದಿತ್ತು. ಅಂದಿನ ಮೈತ್ರಿ ಸರ್ಕಾರ ಅಧ್ಯಕ್ಷ ಸ್ಥಾನ ಬಿಸಿಎಂ (ಎ) ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಎಸ್‌ಟಿ ಪುರುಷಗೆ ಮೀಸಲು ಮಾಡಿ ಆದೇಶ ಹೊರ ಡಿಸಿತ್ತು. ಆಗ ಕೆಲವರು ಕೋರ್ಟ್ ಮೊರೆ ಹೋದರು. ಇನ್ನೂ ಪ್ರಕರಣ ವಿಚಾರಣೆ ಹಂತದಲ್ಲಿ ಇರುವಾಗಲೇ,ಕೆಲವು ಆಕಾಂಕ್ಷಿಗಳು ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲು ಮಾಡಿಸಲು ಜೆಡಿಎಸ್ ವರಿಷ್ಠರ ಮೂಲಕ ಸರ್ಕಾರದ ಮೇಲೆ ಒತ್ತಡ ಹಾಕಿಸಿದ್ದರು.
ಅದರಂತೆ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಘೋಷಣೆ ಮಾಡಿ ಸರ್ಕಾರ ಆದೇಶ ಮಾಡಿತ್ತು. ಅಷ್ಟರಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರ ಕಳೆದುಕೊಂಡು ಬಿಜೆಪಿ ಅಧಿಕಾರಕ್ಕೇರಿತು. ಈ ಸಂದರ್ಭದಲ್ಲಿ ಮೀಸಲಾತಿ ವಿರುದ್ಧ ಮತ್ತೆ ಕೆಲವರು ನ್ಯಾಯಾಲಯಕ್ಕೆ ಹೋಗಿದ್ದರಿಂದ ಒಂದು ವರ್ಷ ಯಾವುದೇ ತೀರ್ಮಾನವಾಗಿರಲಿಲ್ಲ.
ನಂತರ ಸರ್ಕಾರ ಕಳೆದ ತಿಂಗಳು ಅಧ್ಯಕ್ಷ ಸ್ಥಾನ ಎಸ್‌ಸಿಗೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸ ಲಾತಿ ನೀಡಿತು. ಈ ಹಿನ್ನೆಲೆಯಲ್ಲಿ ಪಟ್ಟಣದ 11ನೇ ವಾರ್ಡ್‌ನಲ್ಲಿ ಜೆಡಿಎಸ್‌ನಿಂದ ಗೆಲುವು ಸಾಧಿಸಿದ್ದ ಕಾಡಪ್ಪ ಅಧ್ಯಕ್ಷರಾಗಿ, ಜರೀನಾ ರಶೀದ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು.
15 ವರ್ಷಗಳ ನಂತರ ಇಲ್ಲಿನ ಪುರಸಭೆ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿಗೆ ಮೀಸಲಾಗಿತ್ತು.ಕೆಲವುಕಡೆಗಳಲ್ಲಿ ರೋಸ್ಟರ್ ಪದ್ಧತಿ ಅನ್ವಯ ಮೀಸಲಾತಿ ನೀಡುವುದರಲ್ಲಿ ತಪ್ಪಾಗಿರುವುದರಿಂದ ಹೈಕೋರ್ಟ್ ಎಲ್ಲಾ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಮೀಸಲಾತಿ ರದ್ದುಪಡಿಸಿದೆ. ಮುಂದಿನ ಅಧಿಸೂಚನೆಯಲ್ಲೂ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿಗೆ ಮೀಸಲಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. – ಕಾಡಪ್ಪ, ಇತ್ತೀಚೆಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದವರು.
ಸರ್ಕಾರದ ಅವೈಜ್ಞಾನಿಕ ನಿರ್ಧಾರಗಳಿಂದ ನಗರ ಸ್ಥಳೀಯ ಸಂಸ್ಥೆಗಳ ಮೂರು ಪ್ರತ್ಯೇಕ ಮೀಸಲಾತಿ ಅಧಿಸೂಚನೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ. ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿಘೋಷಣೆ ಅವೈಜ್ಞಾನಿಕವಾಗಿದೆ ಎಂದು ಹೇಳಲು ಸಾಧ್ಯವಿಲ್ಲ. ಈ ಕುರಿತು ಸರಿಯಾಗಿ ಪರಿಶೀಲನೆ ಮಾಡಲು ನ್ಯಾಯಾಲಯ 4 ವಾರಗಳಕಾಲಾವಕಾಶ ನೀಡಿದೆ. ಮುಂದೆ ಯಾವ ರೀತಿ ಕ್ರಮಕೈಗೊಳ್ಳುತ್ತದೆಕಾದು ನೋಡಬೇಕಿದೆ. –ಎಚ್.ಕೆ.ಕುಮಾರಸ್ವಾಮಿ, ಶಾಸಕ
– ಸುಧೀರ್ ಎಸ್.ಎಲ್.