Advertisement

ತಾ.ಪಂ., ಜಿ.ಪಂ. ಕ್ಷೇತ್ರ ನಿಗದಿ ವಿಷಯ ಹೈಕೋರ್ಟ್‌ಗೆ

11:31 PM Dec 06, 2021 | Team Udayavani |

ಬೆಂಗಳೂರು: ರಾಜ್ಯದಲ್ಲಿ ಜಿ. ಪಂ. ಹಾಗೂತಾ. ಪಂ. ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ಹಿಂಪಡೆದ ಪ್ರಕರಣ ಈಗ ಹೈಕೋರ್ಟ್‌ ಮೆಟ್ಟಿಲೇರಿದೆ.

Advertisement

ತಾ.ಪಂ., ಜಿ.ಪಂ.ಗಳಿಗೆ ಗಡಿ ನಿರ್ಣಯಿಸಲು ಮತ್ತು ಮೀಸಲಾತಿ ನಿಗದಿಪಡಿಸಲು ಪ್ರತ್ಯೇಕ ವಾಗಿ ಕರ್ನಾಟಕ ಪಂಚಾಯತ್‌ ರಾಜ್‌ ಸೀಮಾ ನಿರ್ಣಯ ಆಯೋಗ ರಚಿಸಲು ಜಾರಿಗೆ ತರಲಾಗಿರುವ “ಕರ್ನಾಟಕ ಪಂಚಾಯತ್‌ ರಾಜ್‌ ಮತ್ತು ಗ್ರಾಮ ಸ್ವರಾಜ್‌ (ತಿದ್ದುಪಡಿ) ಕಾಯ್ದೆ- 2021 ಪ್ರಶ್ನಿಸಿ ಸ್ವತಃ ರಾಜ್ಯ ಚುನಾವಣ ಆಯೋಗ ಹೈಕೋರ್ಟ್‌ ಗೆ ಅರ್ಜಿ ಸಲ್ಲಿಸಿದೆ.

ಸೋಮವಾರ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ, ರಾಜ್ಯ ಸರಕಾರಕ್ಕೆ ನೋಟಿಸ್‌ ಜಾರಿಗೊಳಿಸಿದೆ. ವಿಚಾರಣೆಯನ್ನು 2022ರ ಜ.18ಕ್ಕೆ ಮುಂದೂಡಲಾಯಿತು.

ಇದನ್ನೂ ಓದಿ:ಇಂಡೋ-ಅಮೆರಿಕನ್‌ ಸಿನಿಮಾಕ್ಕೆ ಬಾಲಿವುಡ್‌ ನಟಿ ಐಶ್ವರ್ಯ ನಾಯಕಿ

ಡಾ| ಸೂರಜ್‌ ರೇವಣ್ಣ ನಾಮಪತ್ರ ತಿರಸ್ಕರಿಸಲು ಕೋರಿದ್ದ ಅರ್ಜಿ ವಜಾ
ಬೆಂಗಳೂರು: ಹಾಸನ ಕ್ಷೇತ್ರದಿಂದ ವಿಧಾನ ಪರಿಷತ್‌ ಚುನಾವಣೆಗೆ ಸ್ಪರ್ಧಿಸಿರುವ ಜೆಡಿಎಸ್‌ ಅಭ್ಯರ್ಥಿ ಡಾ| ಸೂರಜ್‌ ರೇವಣ್ಣ ಅವರ ನಾಮಪತ್ರ ತಿರಸ್ಕರಿಸುವಂತೆ ಅಥವಾ ಚುನಾವಣೆಗೆ ತಡೆ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಲು ಹೈಕೋರ್ಟ್‌ ನಿರಾಕರಿಸಿದೆ.

Advertisement

ವೈವಾಹಿಕ ವಿವರ ಬಚ್ಚಿಟ್ಟ ಆರೋಪದಡಿ ಸೂರಜ್‌ ನಾಮಪತ್ರವನ್ನು ಅಂಗೀಕರಿಸದಂತೆ ಚುನಾವಣ ಆಯೋಗಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಚನ್ನರಾಯಪಟ್ಟಣದ ಕುಂದೂರು ನಿವಾಸಿ ಕೆ.ಎಸ್‌. ಹರೀಶ್‌ ಸಲ್ಲಿಸಿದ್ದ ಅರ್ಜಿಯನ್ನು ಇಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.

ಸ್ವಲ್ಪ ಹೊತ್ತು ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ, ಈಗಾಗಲೇ ಚುನಾವಣೆ ಆರಂಭಗೊಂಡಿದೆ. ಒಮ್ಮೆ ಚುನಾವಣೆ ಆರಂಭವಾದ ಮೇಲೆ ಅದರಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸಲಾಗದು. ಹೀಗಾಗಿ ಅರ್ಜಿದಾರರ ಮನವಿಯನ್ನು ಈ ಹಂತದಲ್ಲಿ ಪರಿಗಣಿಸಲಾಗದು ಎಂದು ತಿಳಿಸಿ, ಅರ್ಜಿ ವಜಾ ಗೊಳಿಸಿತು, ಇದೇ ವೇಳೆ ಅರ್ಜಿದಾರರಿಗೆ ಆಕ್ಷೇಪಣೆಗಳಿದ್ದಲ್ಲಿ ಅದನ್ನು ಚುನಾವಣೆ ಬಳಿಕ ತಕರಾರು ಅರ್ಜಿ ಸಲ್ಲಿಸಿ ಪ್ರಶ್ನಿಸಬಹುದು ಎಂದು ಸ್ಪಷ್ಟಪಡಿಸಿತು.

 

 

Advertisement

Udayavani is now on Telegram. Click here to join our channel and stay updated with the latest news.

Next