Advertisement

ರೇಷ್ಮೆ ಮಂಡಳಿ ಅಧ್ಯಕ್ಷ ‘ಕೈ’ನಾಯಕ ರಮೇಶ್ ರಾಜೀನಾಮೆ 

03:00 PM Aug 22, 2017 | |

ಮಡಿಕೇರಿ : ಸ್ವಾತಂತ್ರ್ಯ ದಿನಾಚರಣೆಯ ವೇಳೆ ವೇದಿಕೆಯಲ್ಲೇ ವಿಧಾನ ಪರಿಷತ್‌ ಸದಸ್ಯೆ ವೀಣಾ ಅಚ್ಚಯ್ಯ ಅವರೊಂದಿಗೆ ಅಸಭ್ಯ ವರ್ತನೆ ತೋರಿದ್ದ ಕಾಂಗ್ರೆಸ್‌ ಹಿರಿಯ ನಾಯಕ ಟಿ.ಪಿ.ರಮೇಶ್ ರಾಜ್ಯ ರೇಷ್ಮೆ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ. 

Advertisement

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ಪತ್ರ ನೀಡಿರುವ ಬಗ್ಗೆ ವರದಿಯಾಗಿದ್ದು, ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಿರುವ ಬಗ್ಗೆ ವರದಿಯಾಗಿದೆ. 

ಟಿ.ಪಿ.ರಮೇಶ್‌ ವಿರುದ್ಧ ಕೊಡಗು ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆಗಳಲ್ಲಿ ಪ್ರತಿಭಟನೆ ನಡೆದಿತ್ತು. ಘಟನೆ ಕಾಂಗ್ರೆಸ್‌ಗೆ ತೀವ್ರ ಮುಜುಗರ ತಂದಿಟ್ಟಿತ್ತು.

Advertisement

Udayavani is now on Telegram. Click here to join our channel and stay updated with the latest news.

Next