Advertisement
ರಾಜ್ಯಕ್ಕೆ ವಿದ್ಯಾಭ್ಯಾಸಕ್ಕಾಗಿ ಬರುವ ವಿದೇಶೀ ವಿದ್ಯಾರ್ಥಿಗಳ ಪಾಸ್‌ಪೋರ್ಟ್ ಮತ್ತು ವೀಸಾ ಪರಿಶೀಲಿಸದೆ, ಅವಧಿ ಮುಗಿದಿದ್ದರೂ ಪ್ರವೇಶ ನೀಡುತ್ತಿರುವುದು ಗಮನಕ್ಕೆ ಬಂದಿದೆ. ಇದು ವಿದೇಶೀ ವಿದ್ಯಾರ್ಥಿಗಳು ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ತೊಡಗುವುದಕ್ಕೆ ಪೂರಕವಾಗುತ್ತಿರುವುದು ಕಂಡುಬಂದಿದೆ. ಇನ್ನು ಮುಂದೆ ಪರಿಶೀಲಿಸದೆ ಪ್ರವೇಶ ನೀಡಿದಲ್ಲಿ ಅಂತಹ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಾನೂನು ರೀತ್ಯಾ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಇಲಾಖೆ ಎಚ್ಚರಿಕೆ ನೀಡಿದೆ.
ಇಲಾಖಾ ವ್ಯಾಪ್ತಿಯ ಸರಕಾರಿ ಅಥವಾ ಖಾಸಗಿ ಅನುದಾನಿತ ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳಿಗೆ ವಿದ್ಯಾಭ್ಯಾಸಕ್ಕಾಗಿ ಬರುವ ವಿದೇಶೀ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವ ಮೊದಲು ಪಾಸ್‌ಪೋರ್ಟ್ ಮತ್ತು ವೀಸಾವನ್ನು ಕಡ್ಡಾಯವಾಗಿ ಪರಿಶೀಲಿಸಬೇಕು. ಪರಿಶೀಲಿಸದೆ ಪ್ರವೇಶ ನೀಡಿದಲ್ಲಿ ಮುಂದೆ ಆಗಬಹುದಾದ ಅನಾಹುತಗಳಿಗೆ ಆಯಾ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರೇ ನೇರ ಹೊಣೆಗಾರರು. ಕಾಲೇಜುಗಳ ಪ್ರಾಂಶುಪಾಲರು ವಿದೇಶಿ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವ ಸಂದರ್ಭ ಸೂಚನೆ ಪಾಲಿಸದಿದ್ದರೆ ನಿಯಮಾನುಸಾರ ಶಿಸ್ತು ಕ್ರಮ ತೆಗೆದುಕೊಳ್ಳಲಿದ್ದೇವೆ ಎಂದು ಎಚ್ಚರಿಕೆ ನೀಡಲಾಗಿದೆ.