Advertisement

ಟ್ರ್ಯಾಕ್ಟರ್ ಪಲ್ಟಿ; ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವು

04:14 PM Feb 26, 2021 | Team Udayavani |

ಲಕ್ಷ್ಮೇಶ್ವರ: ಪಟ್ಟಣದ ಗುಂಜಳ ರಸ್ತೆಯಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಮಹಿಳಾ ಕೂಲಿಕಾರರು ಸ್ಥಳದಲ್ಲಿಯೇ ಮೃತಪಟ್ಟು ಏಳು ಜನರು ಗಾಯಗೊಂಡ ಘಟನೆ ಗುರುವಾರ ಜರುಗಿದೆ.

Advertisement

ಕಡಲೆ ಕೀಳುವ ಕೆಲಸ ಮುಗಿಸಿ ಮನೆಗೆ ಬರುವ ವೇಳೆ ಟ್ರ್ಯಾಕ್ಟರ್ ಮಗುಚಿದ ಪರಿಣಾಮ ಸರೋಜವ್ವ ಫಕ್ಕೀರಪ್ಪ ಹಿತ್ತಲಮನಿ(35), ಸೋಮವ್ವ ಮುದಕಪ್ಪ ಗಡದವರ (48) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ತೀವ್ರ ಗಾಯಗೊಂಡ ದುರಗವ್ವ ದೂಳಮ್ಮನವರ, ಬಸವ್ವ ಗಡದವರ, ಗಂಗವ್ವ ಹೊಸಮನಿ, ಬಸವ್ವ ಸಂದಿಮನಿ, ಶೋಭಕ್ಕ ದೂಳಮ್ಮನವರ, ಸುಂದರಮ್ಮ ಗಡದವರ, ಯಲ್ಲವ್ವ ಬೂದಿಹಾಳ ಅವರಿಗೆ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಗದಗ ಜಿಮ್ಸ್‌ಗೆ ದಾಖಲಿಸಲಾಗಿದೆ.

ಘಟನೆಯ ಬಳಿಕ ಮೃತ ಮತ್ತು ಗಾಯಾಳುಗಳ ಸಂಬಂ ಧಿಕರು ಆಸ್ಪತ್ರೆಗೆ ಧಾವಿಸಿ ಗೋಳಾಡಿದ ದೃಶ್ಯ ಮನ ಕಲಕುವಂತಿತ್ತು. ಘಟನೆ ಸ್ಥಳಕ್ಕೆ ಭೇಟಿ ನೀಡಿದ ಸಿಪಿಐ ವಿಕಾಸ ಲಮಾಣಿ, ಪಿಎಸ್‌ಐ ಶಿವಯೋಗಿ ಲೋಹಾರ ಪ್ರಕರಣ ದಾಖಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next