ಮುಧೋಳ : ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರು ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜೀರಗಾಳ ಗ್ರಾಮದ ಹೊರವಲಯದಲ್ಲಿ ಗುರುವಾರ(ಜ.9) ಮಧ್ಯರಾತ್ರಿ ಸಂಭವಿಸಿದೆ.
ಮೃತ ವ್ಯಕ್ತಿಯನ್ನು ಸುನೀಲ ಮಾಸರಡ್ಡಿ ಎಂದು ಗುರುತಿಸಲಾಗಿದೆ.
ಟ್ರ್ಯಾಕ್ಟರ್ ಹಾಗೂ ಕಾರು ಪರಸ್ಪರ ಡಿಕ್ಕಿ ಹೊಡೆದ ರಭಸಕ್ಕೆ ಸುನೀಲ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಡಿಕ್ಕಿಯಿಂದಾಗಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಟ್ರೇಲರ್ ಪಲ್ಟಿಯಾಗಿದೆ.
ಮುಧೋಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಇದನ್ನೂ ಓದಿ: Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು