Advertisement

ಕಲಬುರಗಿ: ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರ ದುರ್ಮರಣ

03:20 PM May 19, 2020 | keerthan |

ಕಲಬುರಗಿ: ಟ್ರ್ಯಾಕ್ಟರ್ ವೊಂದು ಪಲ್ಟಿಯಾಗಿ ಚಾಲಕ ಸಹಿತ ಇಬ್ಬರು ಸಾವನ್ನಪ್ಪಿದ ದುರ್ಘಟನೆ ಜಿಲ್ಲೆಯ ಶಹಾಬಾದ್ ತಾಲೂಕಿನ ಮರತೂರು ಗ್ರಾಮದ ಬಳಿ ನಡೆದಿದೆ.

Advertisement

ಮರತೂರು ಸ್ಟೇಷನ್ ತಾಂಡಾದಿಂದ ಮರತೂರು ಗ್ರಾಮಕ್ಕೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ ಹೊಡೆದಿದೆ. ಅದರ ಪರಿಣಾಮವಾಗಿ ಟ್ರ್ಯಾಕ್ಟರ್ ಅಡಿಗೆ ಸಿಲುಕಿದ ಇಬ್ಬರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಮೃತರನ್ನು ಪ್ರಭು ರಾಠೋಡ (26), ದೇವರಾಜ ಚವ್ಹಾಣ (30) ಎಂದು ಗುರುತಿಸಲಾಗಿದ್ದು, ಮರತೂರ ಸ್ಟೇಷನ್ ತಾಂಡಾದ ನಿವಾಸಿಗಳಾಗಿದ್ದಾರೆ. ಶಹಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next