Advertisement

ಸಂಜೆ 6ರ ಬಳಿಕ ವ್ಯಾಪಾರ ನಿರ್ಬಂಧ

04:47 AM Jun 25, 2020 | Lakshmi GovindaRaj |

ಚಾಮರಾಜನಗರ: ಜಿಲ್ಲೆಯಲ್ಲಿ ಸಾರ್ವಜನಿಕರ ಸುರಕ್ಷತೆ ಹಾಗೂ ಆರೋಗ್ಯದ ಹಿತದೃಷ್ಟಿಯಿಂದ ಕೋವಿಡ್‌ -19ರ ಹರಡುವಿಕೆ ತಡೆಗಟ್ಟುವ ಉದ್ದೇಶ ದಿಂದ ಜೂ.24ರಿಂದ ಜಾರಿಗೆ ಬರುವಂತೆ ಜಿಲ್ಲೆಯಲ್ಲಿನ ನಗರಸಭೆ, ಪುರಸಭೆ,  ಪಟ್ಟಣ ಪಂಚಾಯಿತಿ ವ್ಯಾಪ್ತಿ ಪ್ರದೇಶ ಗಳಲ್ಲಿ ಸಂಜೆ 6 ಗಂಟೆ ಬಳಿಕ ಎಲ್ಲಾ ರೀತಿಯ ವ್ಯಾಪಾರ ವಹಿವಾಟು ನಿರ್ಬಂ ಧಿಸಿ ಜಿಲ್ಲಾಧಿಕಾರಿ ಡಾ. ಎಂ.ಆರ್‌. ರವಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ

Advertisement

. ಜಿಲ್ಲೆಯಲ್ಲಿ ಕೋವಿಡ್‌-19ರ ಸಂಬಂಧ  ಮುಂಜಾಗ್ರತಾ ಕ್ರಮಗಳನ್ನು ಈಗಾಗಲೇ ಜಾರಿಗೊಳಿಸಲಾಗಿದೆ. ಸರ್ಕಾರದ ನಿರ್ದೇಶನದಂತೆ ಜಿಲ್ಲಾದ್ಯಂತ ರಾತ್ರಿ 9ರಿಂದ ಬೆಳಗ್ಗೆ 5 ಗಂಟೆವರೆಗೆ ನಿಷೇಧಾಜ್ಞೆ ಹೊರಡಿಸಲಾಗಿದೆ. ಜಿಲ್ಲೆಯಲ್ಲಿ ಕೋವಿಡ್‌-19 ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ  ಹಿನ್ನೆಲೆಯಲ್ಲಿ ಜನರ ಅನಗತ್ಯ ಸಂಚಾರ ತಡೆಗಟ್ಟಿ ಸೋಂಕು ನಿಯಂತ್ರಿಸಲು ವ್ಯಾಪಾರ ವಹಿವಾಟು ಸಂಜೆ 6 ಗಂಟೆವರೆಗೆ ಮಾತ್ರ ಅನುಮತಿ ನೀಡಲಾಗಿದೆ.

ಸಂಜೆ 6 ಗಂಟೆ ಬಳಿಕ ಎಲ್ಲಾ ರೀತಿಯ ವ್ಯಾಪಾರ ವಹಿವಾಟು ನಿರ್ಬಂಧಿಸಲಾಗಿದೆ.  ಜೀವನಾವಶ್ಯಕ ವಸ್ತುಗಳ ಮಾರಾಟಕ್ಕೆ ನಿರ್ಬಂಧ ಆದೇಶ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಪ್ರತಿದಿನ ಸಂಜೆ 6ರಿಂದ ಬೆಳಗ್ಗೆ 6 ಗಂಟೆವರೆಗೆ ಚಾಮರಾಜನಗರ ಜಿಲ್ಲೆಯಲ್ಲಿನ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ  ವ್ಯಾಪ್ತಿ ಪ್ರದೇಶಗಳಲ್ಲಿ ನಿಷೇಧಾಜ್ಞೆ ಮುಂದಿನ ಆದೇಶದವರೆಗೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್‌.ರವಿ ಆದೇಶದಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next