Advertisement
ನಗರದ ಪುರಭವನದ ಆವರಣದಲ್ಲಿ ದಸರಾ ಮಹೋತ್ಸವದ ಅಂಗವಾಗಿ ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಆಯೋಜಿಸಿದ್ದ “ಪಾರಂಪರಿಕ ಉಡುಗೆಯಲ್ಲಿ ಪಾರಂಪರಿಕ ನಡಿಗೆ’ ಎಂಬ ಶೀರ್ಷಿಕೆಯಡಿ ನಡೆದ ಪಾರಂಪರಿಕ ನಡಿಗೆ ಕಾರ್ಯಕ್ರಮವನ್ನು ಸಚಿವ ಸಾ.ರಾ.ಮಹೇಶ್ ಬಿಳಿ ಶರ್ಟ್, ಪಂಚೆ ಹಾಗೂ ಮೈಸೂರುಪೇಟ ಧರಿಸಿದ ಸಾಂಪ್ರದಾಯಿಕ ಉಡುಗೆಯಲ್ಲಿ ಚಾಲನೆ ನೀಡಿದರು.
ವಿದ್ಯಾರ್ಥಿಗಳು, ಪ್ರವಾಸಿಗರು ಹಾಗೂ ಜನಸಾಮಾನ್ಯರಿಗೆ ಪರಿಚಯ ಮಾಡಿ ಕೊಡುವುದು ಪಾರಂಪರಿಕ ನಡಿಗೆಯ
ಉದ್ದೇಶವಾಗಿತ್ತು. ಇನ್ನು ಬೆಳ್ಳಂಬೆಳಗ್ಗೆಯೇ ನಡೆದ ಪಾರಂಪರಿಕ ನಡಿಗೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳೂ ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದರು. ಕಾರ್ಯಕ್ರಮದಲ್ಲಿ ಪುರುಷರು ಮೈಸೂರು ಪೇಟ, ಪಂಚೆ, ಶರ್ಟ್ ಧರಿಸಿದ್ದರೆ, ಮಹಿಳೆಯರು ವಿವಿಧ ಬಣ್ಣದ ಸೀರೆಯನ್ನುಟ್ಟು ಮಧುವಣಗಿತ್ತಿಯಂತೆ ಸಿಂಗಾರಗೊಂಡು ಮೈಸೂರಿನ ಪಾರಂಪರಿಕ ಕಟ್ಟಡಗಳ ಮಾರ್ಗದಲ್ಲಿ ಹೆಜ್ಜೆ ಹಾಕಿದರು. ಕಾರ್ಯಕ್ರಮದಲ್ಲಿ ಶಾರದಾ ವಿಲಾಸ ಶಿಕ್ಷಣ ಮಹಾವಿದ್ಯಾಲಯ, ಸಿದ್ಧಾರ್ಥನಗರ ಸರ್ಕಾರಿ ಪ್ರಧಮ ದರ್ಜೆ ಕಾಲೇಜು, ಜೆಎಸ್‌ಎಸ್ ಮಹಿಳಾ ಕಾಲೇಜಿನ ವಿದ್ಯಾರ್ಥಿಗಳ ಜತೆಗೆ ಪ್ರಾಧ್ಯಾಪಕರು, ವೃದ್ಧರೂ ಭಾಗವಹಿಸಿದ್ದರು.
Related Articles
Advertisement
ಶಾಸಕ ಎಲ್. ನಾಗೇಂದ್ರ, ಮಾಜಿ ಮೇಯರ್ ಎಂ.ಜೆ.ರವಿಕುಮಾರ್, ಪುರಾತತ್ವ, ಸಂಗ್ರಹಾಲ ಯಗಳು ಮತ್ತು ಪರಂಪರೆ ಇಲಾಖೆ ಅಧಿಕಾರಿ ನಿರ್ಮಲ ಮಠಪತಿ ಇನ್ನಿತರರು ಭಾಗವಹಿಸಿದ್ದರು. ದಸರಾ ಸಂದರ್ಭದಲ್ಲಿ ನಗರಕ್ಕೆ ಆಗಮಿಸುವ ಪ್ರವಾಸಿಗರಿಗೆ ಇಲ್ಲಿನ ಪರಂಪರೆ ಹಾಗೂ ಪಾರಂಪರಿಕ ಕಟ್ಟಡಗಳ ಬಗ್ಗೆ ಮಾಹಿತಿ ನೀಡುವಉದ್ದೇಶದಿಂದ ಪಾರಂಪರಿಕ ನಡಿಗೆ ಕಾರ್ಯಕ್ರಮ ಆಯೋಜಿಸಲಾಗಿದೆ. ನಗರದಲ್ಲಿರುವ ಪಾರಂಪರಿಕ ಕಟ್ಟಡಗಳನ್ನು ನೆಲಸಮಗೊಳಿಸುವ ಪ್ರಶ್ನೆಯೇ ಇಲ್ಲ. ದಸರಾ ಮುಗಿದ ಕೂಡಲೇ ಪಾರಂಪರಿಕ ಕಟ್ಟಡಗಳ ನವೀಕರಣ ಮಾಡಲಾಗುವುದು. ಮೈಸೂರಿನ ಪಾರಂಪರಿಕ ಕಟ್ಟಡವನ್ನು ಹಂಪಿಗೆ ಸ್ಥಳಾಂತರಿಸುವುದಿಲ್ಲ, ಮೈಸೂರಿನಲ್ಲೇ ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತೇವೆ.
ಸಾ.ರಾ.ಮಹೇಶ್, ಪ್ರವಾಸೋದ್ಯಮ ಸಚಿವ