Advertisement

ಶ್ರೀ ಶಿವಕುಮಾರಸ್ವಾಮೀಜಿ ಗದ್ದುಗೆಗೆ ಲಕ್ಷ ಬಿಲ್ವಾರ್ಚನೆ

07:18 PM Nov 30, 2021 | Team Udayavani |

ತುಮಕೂರು: ವೀರಶೈವ, ಲಿಂಗಾಯತ ಮಹಾ ವೇದಿಕೆ ಮತ್ತು ವೀರಶೈವ, ಲಿಂಗಾಯತ ಯುವ ವೇದಿಕೆ ವತಿಯಿಂದ ಕಾರ್ತಿಕ ಮಾಸದ ಕಡೇ ಸೋಮವಾರದ ಪ್ರಯುಕ್ತ ಸಿದ್ಧಗಂಗಾ ಮಠದ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆ ಲಕ್ಷ ಬಿಲ್ವಾರ್ಚನೆ ಹಾಗೂ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು.

Advertisement

ನಡೆದಾಡುವ ದೇವರು, ಕರ್ನಾಟಕ ರತ್ನ, ಪದ್ಮಭೂಷಣ ಡಾ. ಶ್ರೀ ಶಿವಕುಮಾರ ಮಹಾ ಶಿವಯೋಗಿಗಳ ದ್ವಿತೀಯ ವರ್ಷದ ಲಕ್ಷ ಪುಷ್ಪ ಬಿಲ್ವಾರ್ಚನೆ ಕಾರ್ಯಕ್ರಮದ ಪ್ರಯುಕ್ತ ವೇದಿಕೆ ವತಿಯಿಂದ ವಿವಿಧ ಧಾರ್ಮಿಕ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಗಿತ್ತು.

ಮುಂಜಾನೆ 4 ಗಂಟೆಗೆ ರುದ್ರಾಭಿಷೇಕ, 5.30ಕ್ಕೆ ಉದ್ಘಾಟನೆ ಮತ್ತು ಪುಷ್ಪ ಬಿಲ್ವಾರ್ಚನೆ ಹಾಗೂ ಮಧ್ಯಾಹ್ನ 12.30ಕ್ಕೆ ಮಹಾಮಂಗಳಾರತಿಯೊಂದಿಗೆ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ಹೆಲಿಕಾಪ್ಟರ್‌ ಮೂಲಕ ಪುಷ್ಪಾರ್ಚನೆ ಮಾಡಿದ್ದು ವಿಶೇಷವಾಗಿತ್ತು.

ಹೆಲಿಕಾಪ್ಟರ್‌ ಮೂಲಕ ಪುಷ್ಪಾರ್ಚನೆ: ವೀರಶೈವ ಲಿಂಗಾಯಿತ ಯುವ ವೇದಿಕೆಯ ರಾಜ್ಯಾಧ್ಯಕ್ಷ ಪ್ರಶಾಂತ್‌ ಕಲ್ಲೂರು ಮಾತನಾಡಿ, ಪೂಜ್ಯರ ಗದ್ದುಗೆಗೆ ಲಕ್ಷ ಪುಷ್ಪಾ ಬಿಲ್ವಾರ್ಚನೆ, 45 ಅಡಿಗಳ ಕಟೌಟ್‌ಗಳ ಮಾಡಿಸಲಾಗಿದೆ. ಹೆಲಿಕಾಪ್ಟರ್‌ ಮೂಲಕ ಪುಷ್ಪಾರ್ಚನೆ ಮಾಡಿದ್ದೇವೆ. ಶ್ರೀಗಳ ಸೇವಾ ಕಾರ್ಯಗಳನ್ನು ನೆನಪಿಸಿಕೊಳ್ಳುವಂತಹ ಏಕೈಕ ಮಠ ಸಿದ್ಧಗಂಗಾ ಮಠವಾಗಿದ್ದು, ಪ್ರತಿವರ್ಷ ಕಡೇ ಕಾರ್ತಿಕ ಸೋಮವಾರದಂದು ವಿಶೇಷ ಕಾರ್ಯಕ್ರಮವನ್ನು ವೇದಿಕೆ ವತಿಯಿಂದ ಮಾಡಲಾಗುವುದು.

ಪೂಜ್ಯರ ಮಾಡಿರುವ ದಾಸೋಹ, ಶಿಕ್ಷಣ ದಾಸೋಹ ಸೇರಿದಂತೆ ವಿವಿಧ ಸಮಾಜ ಸೇವಾ ಕಾರ್ಯವನ್ನು ನೆನೆಯುವಂತಹ ಕಾರ್ಯವನ್ನು ವೇದಿಕೆ ಮಾಡುತ್ತಿದೆ ಎಂದು ಹೇಳಿದರು.

Advertisement

ಶ್ರೀಗಳ ಗದ್ದುಗೆಗೆ ನಮಿಸಿದ ಸಿಎಂ: ಶ್ರೀಮಠದಲ್ಲಿ ವೀರಶೈವ ಲಿಂಗಾಯತ ಮಹಾವೇದಿಕೆ ಹಾಗೂ ವೀರಶೈವ ಲಿಂಗಾಯತ ಯುವ ವೇದಿಕೆ ಹಮ್ಮಿ ಕೊಂಡಿದ್ದ ಲಕ್ಷ ಬಿಲ್ವಾರ್ಚನೆ ಹಾಗೂ ಧಾರ್ಮಿಕ ಪೂಜಾ ವಿಧಿ-ವಿಧಾನದಲ್ಲಿ ಪಾಲ್ಗೊಂಡ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.

ಸ್ವಾಮೀಜಿಗಳು, ಗಣ್ಯರು ಭಾಗಿ: ಧಾರ್ಮಿಕ ಸಮಾರಂಭದಲ್ಲಿ ಸುತ್ತೂರಿನ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾ ಸ್ವಾಮೀಜಿ, ಸಿದ್ಧಗಂಗಾ ಮಠಾಧ್ಯಕ್ಷ ಶ್ರೀ ಸಿದ್ಧಲಿಂಗ ಸ್ವಾಮೀಜಿ ಸೇರಿದಂತೆ ವಿವಿಧ ಹರಗುರು ಚರಮೂರ್ತಿಗಳು, ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌, ಶಾಸಕ ಜಿ.ಬಿ.ಜ್ಯೋತಿಗಣೇಶ್‌, ಮಾಜಿ ಸಚಿವ ಸೊಗಡು ಎಸ್‌. ಶಿವಣ್ಣ, ಚಲನಚಿತ್ರ ನಟರಾದ ಡಾರ್ಲಿಂಗ್‌ ಕೃಷ್ಣ, ಚಿತ್ರನಟಿ ಅದಿತಿ ಪ್ರಭುದೇವ್‌, ನಟ ಧರ್ಮಕೀರ್ತಿ, ಕಾರ್ಯದರ್ಶಿ ಪ್ರಫ‌ುಲ್‌ ಕುಮಾರ್‌, ವಿಜಯಸೇನೆ ದೀಪಕ್‌, ತುಮಕೂರು ಜಿಲ್ಲೆ ಜಿಲ್ಲಾಧ್ಯಕ್ಷ ಚಂಗಾವಿ ರವಿ, ಜಿಲ್ಲಾ ಗೌರವಾಧ್ಯಕ್ಷ ರುದ್ರೇಶ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜು, ಬಿ.ಜಿ.ಪಾಳ್ಯ, ಜಿಲ್ಲಾ ಉಪಾಧ್ಯಕ್ಷ ಮುನಿ ಬಸವರಾಜು, ಪುಷ್ಪರಾಜ್‌, ಜಿಲ್ಲಾ ವೇದಿಕೆ ಪದಾಧಿಕಾರಿ ಡಿ. ರಾಜಕುಮಾರ್‌, ಮೋಹನ್‌ ಕುಮಾರ್‌ ಮತ್ತಿತರರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next