ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ಆರ್‌ಸಿಬಿ ಮತ್ತು ಪುಣೆ ತಂಡಗಳ ನಡುವೆ ಐಪಿಎಲ್ ಟಿ-ಟ್ವೆಂಟಿ ಪಂದ್ಯ ನಡೆಯಲಿ ರುವ ಹಿನ್ನೆಲೆಯಲ್ಲಿ ಕ್ರೀಡಾಂಗಣದ ಸುತ್ತಮುತ್ತಲಿನ ರಸ್ತೆಗಳಲ್ಲಿ ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 11.30ರರೆಗೆ ವಾಹನ ನಿಲುಗಡೆ ನಿಷೇಧಿಸಲಾಗಿದೆ. ಪ್ರೇಕ್ಷಕರು ಬಿಎಂಟಿಸಿ ಮತ್ತು ಮೆಟ್ರೋ ಸೇವೆ ಬಳಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ವಾಹನ ನಿಲುಗಡೆ ನಿಷೇಧ
ಕ್ವೀನ್ಸ್ ರಸ್ತೆಯಲ್ಲಿ, ಬಾಳೇಕುಂದ್ರಿ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ, ಎಂ.ಜಿ.ರಸ್ತೆಯಲ್ಲಿ ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ರಸ್ತೆಯ ಎರಡು ಕಡೆ, ರಾಜಭವನ ರಸ್ತೆ, ಲಿಂಕ್ ರಸ್ತೆಯಲ್ಲಿ ಎಂ.ಜಿ.ರಸ್ತೆಯಿಂದ ಕಬ್ಬನ್ ರಸ್ತೆವರೆಗೆ, ಟಿ.ಚೌಡಯ್ಯ ರಸ್ತೆ ಮತ್ತು ರೇಸ್ ಕೋರ್ಸ್ ರಸ್ತೆ, ಸೆಂಟ್ರಲ್ ಸ್ಟ್ರೀಟ್ ರಸ್ತೆ ಎರಡು ಕಡೆ, ಕಬ್ಬನ್ ರಸ್ತೆಯಲ್ಲಿ ಕಾಮರಾಜ ರಸ್ತೆ ಜಂಕ್ಷನ್‌ನಿಂದ ಡಿಕೆನ್ಸ್‌ನ್ ರಸ್ತೆ ಜಂಕ್ಷನ್‌ವರೆಗೆ ಬಿಎಂಟಿಸಿ ಬಸ್‌ಗಳನ್ನು ಹೊರತುಪಡಿಸಿ ಇತರೆ ಎಲ್ಲ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ. ಎಂ.ಜಿ. ರಸ್ತೆಯಿಂದ ಸೆಂಟ್ ಮಾರ್ಕ್ಸ್ ರಸ್ತೆವರೆಗೆ ಹಾಗೂ ರೆಸಿಡೆನ್ಸಿ ರಸ್ತೆವರೆಗೆ, ಕಸ್ತೂರ ಬಾ ರಸ್ತೆಯಲ್ಲಿ, ಕ್ವೀನ್ಸ್‌ವೃತ್ತದಿಂದ ಹಡ್ಸನ್ ವೃತ್ತದವರೆಗೆ ಹಾಗೂ ಮಲ್ಯ ರಸ್ತೆಯಲ್ಲಿ ಸಿದ್ದಲಿಂಗಯ್ಯ ವೃತ್ತದಿಂದ ಆರ್.ಆರ್. ಎಂ.ಆರ್.ವೃತ್ತದವರೆಗೆ, ಬಾಲಭವನ ಫೌಂಟೇನ್ ರಸ್ತೆಯಲ್ಲಿ, ಲ್ಯಾವೆಲ್ಲೆ ರಸ್ತೆಯಲ್ಲಿ ಗ್ರಾಂಟ್ ಜಂಕ್ಷನ್‌ವರೆಗಿನ ರಸ್ತೆಗಳಲ್ಲಿ ಹಾಗೂ ಸಿದ್ದಲಿಂಗಯ್ಯ ವೃತ್ತದಿಂದ ವಿಠಲ್ ಮಲ್ಯರಸ್ತೆಯಲ್ಲಿ, ಬಿಷಪ್ ಕಾಟನ್ ಬಾಲಕಿಯರ ಶಾಲೆ, ಸೇಂಟ್ ಮಾರ್ಕ್ಸ್ ರಸ್ತೆಯಲ್ಲಿ ಎಸ್‌ಬಿಐ ವೃತ್ತದಿಂದ ಆಶೀರ್ವಾದಂ ವೃತ್ತದವರೆಗೆ, ಮ್ಯೂಸಿಯಂ ರಸ್ತೆಯಲ್ಲಿ, ಕಬ್ಬನ್‌ಪಾರ್ಕ್ ಒಳಭಾಗದ ಕಿಂಗ್ ರಸ್ತೆ, ಪ್ರಸ್‌ಕ್ಲಬ್ ಮುಂಭಾಗದವರೆಗೆ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ.
ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ಸಲುವಾಗಿ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಗಳು ಆರಂಭವಾಗಿರುವ 3ಗಂಟೆಗಳ ಮೊದಲು ಹಾಗೂ ಪಂದ್ಯ ಮುಗಿದ 3 ಗಂಟೆಗಳ ನಂತರ ಕಬ್ಬನ್ ಉದ್ಯಾನವನದ ಎಲ್ಲ ದ್ವಾರಗಳು ತೆರೆದಿರುತ್ತವೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ
ಪಾರ್ಕಿಂಗ್ ಇಲ್ಲಿ ಮಾಡಿ!
ಸೇಂಟ್ ಜೋಸೆಫ್ ಯೂರೋಪಿಯನ್ ಬಾಲಕರ ಶಾಲೆ ಮೈದಾನ, ಸೇಂಟ್ ಜೋಸೆಫ್ ಹೈಸ್ಕೂಲ್ ಮೈದಾನ, ಕಂಠೀರವ ಕ್ರೀಡಾಂಗಣ, ಬೌರಿಂಗ್ ಇನ್‌ಸ್ಟಿಟ್ಯೂಟ್, ಬಿ.ಆರ್.ವಿ.ಮೈದಾನದಲ್ಲಿ ನಿಲುಗಡೆಗೆ ವ್ಯವಸ್ಥೆ ಇದೆ. ಶಿವಾಜಿ ನಗರ ಬಸ್ ನಿಲ್ದಾಣದ 1ನೇ ಮಹಡಿ, ಕೆಎಸ್‌ಸಿಎ ಸದಸ್ಯರ ವಾಹನಗಳನ್ನು ಸೆಂಟ್ ಮಾರ್ಕ್ಸ್ ಕ್ಯಾಥಡ್ರೆಲ್ ಚರ್ಚ್ ಬಳಿ, ಗಣ್ಯ ವ್ಯಕ್ತಿಗಳ ವಾಹನಗಳನ್ನು ಯುಬಿ ಸಿಟಿ ಪೇ ಆಂಡ್ ಪಾರ್ಕಿಂಗ್ ಸ್ಥಳದಲ್ಲಿ ವ್ಯವಸ್ಥೆ ಮಾಡಲಾಗಿದೆ.