Advertisement

ಬಂಡೀಪುರ ಅಭಯಾರಣ್ಯದಲ್ಲಿ ಮುಂದುವರಿಯಲಿದೆ ಸಂಚಾರ ನಿಷೇಧ

07:34 AM Jan 10, 2019 | |

ಬೆಂಗಳೂರು: ಬಂಡೀಪುರ ಅಭಯಾರಣ್ಯದಲ್ಲಿ ಮೇಲ್ಸೇತುವೆಗೆ ಹಾಗೂ ರಾತ್ರಿ ವೇಳೆ ವಾಹನಗಳ ಸಂಚಾರಕ್ಕೆ ಅನುಮತಿ ನೀಡು ವುದಿಲ್ಲ ಎಂಬ ಕೇಂದ್ರ ಸರ್ಕಾರದ ನಿರ್ಧಾರದಿಂದ ರಾಜ್ಯಕ್ಕೆ ಮುನ್ನಡೆ ಸಿಕ್ಕಂತಾಗಿದ್ದು, ಬಂಡೀಪುರ ಅಭಯಾರಣ್ಯದಲ್ಲಿ ಎಂದಿನಂತೆ ರಾತ್ರಿ ಸಂಚಾರ ನಿಷೇಧ ಮುಂದುವರಿಯಲಿದೆ.

Advertisement

ಬಂಡೀಪುರ ಅಭಯಾರಣ್ಯದಲ್ಲಿ ಮೇಲ್ಸೇತುವೆ ನಿರ್ಮಿಸುವ ಯೋಜನೆಗೆ ವೆಚ್ಚ ಭರಿಸಲು ಮುಂದಾಗಿರುವ ಕೇರಳ ಸರ್ಕಾರದ ನಡೆಗೆ ರಾಜ್ಯ ಸರ್ಕಾರ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಆದರೆ, ಇತ್ತೀಚೆಗೆ ನಡೆದ ಲೋಕಸಭೆ ಕಲಾಪದಲ್ಲಿ ಕೇಂದ್ರ ಅರಣ್ಯ ಸಚಿವ ಡಾ. ಮಹೇಶ್‌ ಶರ್ಮ ಅವರು ಕರ್ನಾಟಕದ ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಾತ್ರಿ ವೇಳೆ ವಾಹನ ಸಂಚಾರಕ್ಕೆ ಅಲ್ಲಿನ ಜಿಲ್ಲಾಡಳಿತ ನಿಷೇಧ ಹೇರಿ ಆದೇಶ ಹೊರಡಿಸಿದ್ದು, ವನ್ಯ ಪ್ರಾಣಿಗಳನ್ನು ಕಾಪಾಡುವ ಮತ್ತು ಅವುಗಳ ಸಂತತಿ ಉಳಿಸುವ ಸಲುವಾಗಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ ಎಂಬ ಸಂಗತಿ ಬಹಿರಂಗಪಡಿಸಿದ್ದಾರೆ.

ಆ ಮೂಲಕ ಬಂಡೀಪುರ ಅಭಯಾರಣ್ಯದಲ್ಲಿ ವಾಹನ ಸಂಚಾರ ತೆರವಿಗೆ ಮತ್ತು ನಿರ್ಮಾಣಕ್ಕೆ ಕೇರಳ ಸರ್ಕಾರ ಮಾಡಿದ್ದ ಮನವಿಯನ್ನು ಕೇಂದ್ರ ಸರ್ಕಾರ ಸಂಪೂರ್ಣ ನಿರಾಕರಣೆ ಮಾಡಿದಂತಾಗಿದೆ. ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ರಾತ್ರಿವೇಳೆ ವಾಹನ ಸಂಚಾರ ನಿಷೇಧ ಎಂದಿನಂತೆ ಮುಂದು ವರಿಯಲಿದೆ. ಇದು ಪರಿಸರ ಪ್ರೇಮಿಗಳಿಗೆ ಸಂತಸ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next