Advertisement

ಶಿರಾಡಿಘಾಟ್‌ನಲ್ಲಿ ಮಣ್ಣು ಕುಸಿತ

01:26 AM Jul 05, 2019 | Sriram |

ಬೆಂಗಳೂರು: ಗುರುವಾರ ಮುಂಜಾನೆ 8.30ಕ್ಕೆ ಅಂತ್ಯ ಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯದ ಕರಾ ವಳಿಯ ಬಹುತೇಕ ಕಡೆ, ಉತ್ತರ ಒಳನಾಡಿನ ಹಲವೆಡೆ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆ ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರದಲ್ಲಿ ರಾಜ್ಯದಲ್ಲಿಯೇ ಅಧಿಕ, 9 ಸೆಂ.ಮೀ.ಮಳೆಯಾಗಿದೆ.

Advertisement

ಈ ಮಧ್ಯೆ, ಸಕಲೇಶಪುರ ಬಳಿ ಶಿರಾಡಿಘಾಟ್‌ನ ಶಿರಿವಾಗಿಲು ರೈಲ್ವೆ ನಿಲ್ದಾಣದ ಸಮೀಪ ರೈಲ್ವೆ ಹಳಿಯ ಮೇಲೆ ಗುರುವಾರ ಮಧ್ಯಾಹ್ನ ಸಸ1 ಗಂಟೆಯ ವೇಳೆಗೆ ಗುಡ್ಡ ಕುಸಿದು ರೈಲ್ವೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಇದರಿಂದಾಗಿ ಕಾರವಾರದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ರೈಲಿನ ಸಂಚಾರವನ್ನು ಮಾರ್ಗ ಮಧ್ಯೆ ತಡೆ ಹಿಡಿಯಲಾಗಿತ್ತು. ಬಳಿಕ, ರೈಲ್ವೆ ಸಿಬ್ಬಂದಿ ಆಗಮಿಸಿ, ಮಣ್ಣು ತೆರವುಗೊಳಿಸಿ ಸಂಜೆ 5 ಗಂಟೆಗೆ ರೈಲು ಸಂಚಾರಕ್ಕೆ ಅವಕಾಶ ಕಲ್ಪಿಸಿದರು. ಇದರಿಂದಾಗಿ ರೈಲು ಬೆಂಗಳೂರು ತಲುಪುವುದು ಸುಮಾರು 2 ಗಂಟೆ ತಡವಾಯಿತು.

ಈ ಮಧ್ಯೆ, ಶನಿವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ ರಾಜ್ಯದ ಕರಾವಳಿಯ ಬಹುತೇಕ ಎಲ್ಲೆಡೆ, ಉತ್ತರ ಒಳನಾಡಿನ ಹಲವು ಕಡೆ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಲಿದೆ. ಪಶ್ಚಿಮ ಕರಾವಳಿಯಲ್ಲಿ ಜು.5, ಶುಕ್ರವಾರ ಮಧ್ಯರಾತ್ರಿಯವರೆಗೆ ಉಬ್ಬರದಲೆಗಳು ಉಂಟಾಗುವ ಸಂಭವವಿದ್ದು, ತೀರ ಪ್ರದೇಶದ ಜನರು ಎಚ್ಚರಿಕೆ ವಹಿಸಬೇಕು. ಅರಬ್ಬಿ ಸಮುದ್ರದಲ್ಲಿ ಬಲವಾದ ಗಾಳಿ ಜು.8ರ ವರೆಗೂ ಬೀಸಲಿದ್ದು, ಮೀನುಗಾರರು ಸಮುದ್ರಕ್ಕಿಳಿಯಬಾರದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next