Advertisement

ಹತ್ತಿ ಸೀಸನ್ ಪ್ರಭಾವ: ರಾಯಚೂರು- ಹೈದರಾಬಾದ್ ಮುಖ್ಯರಸ್ತೆಯಲ್ಲಿ ಟ್ರಾಫಿಕ್ ಜಾಮ್

11:50 AM Dec 09, 2021 | Team Udayavani |

ರಾಯಚೂರು: ರಾಯಚೂರು- ಹೈದರಾಬಾದ್ ಮುಖ್ಯರಸ್ತೆಯಲ್ಲಿ ಕಿ.ಮೀಗಟ್ಟಲೆ ಟ್ರಾಫಿಕ್ ಜಾಮ್ ಉಂಟಾದ ಪರಿಣಾಮ ಪ್ರಯಾಣಿಕರು ಪರದಾಡುವಂತಾಯಿತು.

Advertisement

ನಗರದ ಗಂಜ್ ವೃತ್ತದಿಂದ ಸುಮಾರು ಎರಡು ಕಿ.ಮೀ ದೂರದ ಹತ್ತಿ ಮಾರುಕಟ್ಟೆ ಪ್ರಾಂಗಣದವರೆಗೂ ನೂರಾರು ವಾಹನಗಳು ಸಾಲುಗಟ್ಟಿದ್ದವು. ಹತ್ತಿ ಸೀಸನ್ ಶುರುವಾಗುತ್ತಿದ್ದಂತೆ ಪ್ರತಿ ವರ್ಷ ಇದೇ ಸಮಸ್ಯೆ ಮರುಕಳಿಸುತ್ತಿದೆ.

ಇದನ್ನೂ ಓದಿ:ವಿಡಿಯೋ: ಜನರಲ್ ಬಿಪಿನ್ ರಾವತ್ ಹೆಲಿಕಾಪ್ಟರ್ ಪತನದ ಕೊನೆಯ ಕ್ಷಣದ ದೃಶ್ಯ

ಬೆಳಗ್ಗೆ 8 ಗಂಟೆಯಿಂದ 11 ಗಂಟೆಯವರೆಗೆ ನಿತ್ಯ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ. ಇದೇ ರಸ್ತೆಯಲ್ಲಿ ಹತ್ತಿ ಕಾರ್ಖಾನೆಗಳು ಹೆಚ್ಚಾಗಿದ್ದು, ರೈತರು ಏಕಕಾಲಕ್ಕೆ ಮಾರುಕಟ್ಟೆಗೆ ಹತ್ತಿ ತರುವುದರಿಂದ ಸಮಸ್ಯೆಯಾಗುತ್ತಿದೆ.

Advertisement

ಪೊಲೀಸರು ವಾಹನಗಳ ತೆರವು ಮಾಡುತ್ತಿದ್ದರೂ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್‌ ಉಂಟಾಗಿತ್ತು. ಹತ್ತಿ ಸೀಸನ್ ಮುಗಿಯುವವರೆಗೂ ಈ ಮಾರ್ಗದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸುವಂತೆ ಜನ ಒತ್ತಾಯಿಸಿದರೂ ಇಲಾಖೆ ಎಚ್ಚೆತ್ತುಕೊಂಡಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next