Advertisement

ಹೆದ್ದಾರಿ ಸಹಿತ ಪ್ರಮುಖ ರಸ್ತೆಗಳಲ್ಲಿ ಸಂಚಾರ ಅಸ್ತವ್ಯಸ್ತ 

10:23 AM Mar 21, 2018 | |

ಮಹಾನಗರ: ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರ ಜನಾಶೀರ್ವಾದ ಯಾತ್ರೆಯ ಪ್ರಯುಕ್ತ ಮಂಗಳೂರು ನಗರ ಮತ್ತು ಹೊರ ವಲಯದಲ್ಲಿ ಕೆಲವು ರಸ್ತೆಗಳಲ್ಲಿ ಮಂಗಳವಾರ ಕೆಲವು ಹೊತ್ತು ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿತು. ಇದರಿಂದ ಸಾರ್ವಜನಿಕರು ಪರದಾಡಬೇಕಾಯಿತು.

Advertisement

ಮೂಲ್ಕಿ, ಸುರತ್ಕಲ್‌ಗ‌ಳಲ್ಲಿ ರಸ್ತೆ ಬದಿಯಲ್ಲಿಯೇ ರಾಹುಲ್‌ ಗಾಂಧಿ ಕಾರ್ಯಕ್ರಮ ವ್ಯವಸ್ಥೆ ಮಾಡಲಾಗಿದ್ದು, ಹಾಗಾಗಿ ಕಾಂಗ್ರೆಸ್‌ ಕಾರ್ಯಕರ್ತರು ಅಧಿಕ ಸಂಖ್ಯೆಯಲ್ಲಿ ರಸ್ತೆಯಲ್ಲಿಯೇ ಜಮಾಯಿಸಿದ್ದರಿಂದ ಹೆದ್ದಾರಿಯಲ್ಲಿ ಸುಗಮ ವಾಹನ ಸಂಚಾರಕ್ಕೆ ಅಡ್ಡಿ ಉಂಟಾಯಿತು.

ಪರ್ಯಾಯ ಮಾರ್ಗಗಳಲ್ಲಿ ಸಂಚಾರ
ಸಂಜೆ 5 ಗಂಟೆ ಬಳಿಕ ಜ್ಯೋತಿ ವೃತ್ತದಿಂದ ನೆಹರೂ ಮೈದಾನಕ್ಕೆ ರ‍್ಯಾಲಿ ಇದ್ದ ಕಾರಣ ಈ ರಸ್ತೆಯಲ್ಲಿ ರ‍್ಯಾಲಿ ಮುಗಿಯುವ ತನಕ ವಾಹನ ಸಂಚಾರ ನಿಷೇಧಿಸಲಾಗಿತ್ತು. ಈ ಮಾರ್ಗವಾಗಿ ಸಂಚರಿಸುವ ಬಸ್‌ಗಳು ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಿದವು. 

ಸುರತ್ಕಲ್‌ನಲ್ಲಿ ಕಾರ್ಯಕ್ರಮ ಮುಗಿಸಿದ ಬಳಿಕ ರಾಷ್ಟ್ರೀಯ ಹೆದ್ದಾರಿಯಲ್ಲಿ ನೇರವಾಗಿ ಕದ್ರಿ ಸರ್ಕಿಟ್‌ ಹೌಸ್‌ಗೆ ರಾಹುಲ್‌ ಗಾಂಧಿ ಆಗಮಿಸಿದ್ದು, ಅವರು ಪ್ರಯಾಣಿಸುತ್ತಿದ್ದ ವಾಹನ ಸಂಚರಿಸುತ್ತಿದ್ದ ಸಂದರ್ಭದಲ್ಲಿ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಇತರ ವಾಹನಗಳ ಸಂಚಾರವನ್ನು ತಡೆ ಹಿಡಿದು ಸುಗಮ ಸಂಚಾರಕ್ಕೆ ಅವಕಾಶ ಮಾಡಿ ಕೊಡಲಾಗಿತ್ತು.

ಸರ್ಕಿಟ್‌ ಹೌಸ್‌ನಿಂದ ರಾಹುಲ್‌ ಗಾಂಧಿ ನಂತೂರು- ಕದ್ರಿ- ಕಲೆಕ್ಟರ್ಗೇಟ್‌- ಬಲ್ಮಠ ರಸ್ತೆ- ಹಂಪನಕಟ್ಟೆ ಮೂಲಕ ನೆಹರೂ ಮೈದಾನಕ್ಕೆ ವಾಹನ ದಲ್ಲಿ ಪ್ರಯಾಣಿಸಿದರು. ಈ ಸಂದರ್ಭದಲ್ಲಿ ಹೆದ್ದಾರಿಯ ನಂತೂರು ಜಂಕ್ಷನ್‌ನಲ್ಲಿ ಇತರ ವಾಹನ ಸಂಚಾರ ನಿಷೇಧಿಸಲಾಗಿತ್ತು.

Advertisement

ಬಳಿಕ ಮುಂದೆ ಕದ್ರಿ- ಬಲ್ಮಠ ರಸ್ತೆ- ಹಂಪನಕಟ್ಟೆ ಮೂಲಕ ಸಾಗಿದ್ದು, ಈ ಸಂದರ್ಭ ರಸ್ತೆ ಬದಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿತ್ತು. ಇತರ ವಾಹನ ಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸಿದವು. 

Advertisement

Udayavani is now on Telegram. Click here to join our channel and stay updated with the latest news.

Next